SSLC : ಫಲಿತಾಂಶ ಸುಧಾರಣೆಗೆ ವಿನೂತನ ಪ್ರಯತ್ನ ; ಎಸೆಸೆಲ್ಸಿ ಟಾರ್ಗೆಟ್ ಶೇ. 90+
Team Udayavani, Sep 22, 2023, 10:40 AM IST
ಉಡುಪಿ: ಎಸೆಸೆಲ್ಸಿ ಫಲಿತಾಂಶ ಹೆಚ್ಚಿಸಲು ಟಾರ್ಗೆಟ್ ಶೇ. 90+ ಕಲ್ಪನೆಯಡಿ ಈಗಿಂದಲೇ ಉಭಯ ಜಿಲ್ಲೆಯಲ್ಲಿ ವಿವಿಧ ಚಟುವಟಿಕೆ ಪ್ರಯೋಗಗಳನ್ನು ಆರಂಭಿಸಲಾಗಿದೆ.
ಉಡುಪಿ ಜಿಲ್ಲೆಯ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ನಿತ್ಯವೂ ಒಂದು ಗಂಟೆ ಹೆಚ್ಚುವರಿ ತರಗತಿ ನಡೆಸಲು ನಿರ್ಧರಿಸಲಾಗಿದೆ. ದ.ಕ. ಜಿಲ್ಲೆಯಲ್ಲಿ ಶೇ. 100ರಷ್ಟು ಫಲಿತಾಂಶ ತಂದ ವಿಷಯ ಶಿಕ್ಷಕರ ಮೂಲಕ ಫಲಿತಾಂಶ ವಿಶ್ಲೇಷಣೆಗೆ ಯೋಜನೆ ರೂಪಿಸಲಾಗುತ್ತಿದೆ.
ಉಭಯ ಜಿಲ್ಲೆಯಲ್ಲೂ ಈಗಾಗಲೇ ಎಸೆಸೆಲ್ಸಿ ಪರೀಕ್ಷೆಗೆ ಮಕ್ಕಳನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಪ್ರೌಢಶಾಲೆಯ ಮುಖ್ಯಶಿಕ್ಷಕರ ಸಭೆ ಕರೆಯಲಾಗಿದೆ ಮತ್ತು ಜಿಲ್ಲೆಯ ಒಟ್ಟಾರೆ ಫಲಿತಾಂಶ ಶೇ. 90ಕ್ಕಿಂತ ಹೆಚ್ಚು ಮಾಡುವ ನಿಟ್ಟಿನಲ್ಲಿ ಗುರಿ ನಿಗದಿ ಮಾಡಲಾಗಿದೆ.
ವಿಷಯ ಶಿಕ್ಷಕರ ಒಕ್ಕೂಟ ಉಡುಪಿ ಜಿಲ್ಲೆಯ ವಿಷಯ ಶಿಕ್ಷಕರ ಒಕ್ಕೂಟ ರಚಿಸಲಾಗಿದೆ. ಎಲ್ಲ ವಿಷಯಕ್ಕೂ ಪ್ರತ್ಯೇಕ ಒಕ್ಕೂಟ ರಚನೆ ಮಾಡಲಾಗಿದೆ. ವಿಷಯ ಶಿಕ್ಷಕರು ಸಭೆ ಸೇರಿ ತರಗತಿಯಲ್ಲಿ ಕ್ಲಿಷ್ಟಕರ ಅಂಶಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ವಿಷಯ ತಜ್ಞರು ಈ ಸಭೆಯಲ್ಲಿ ಪಾಲ್ಗೊಂಡು ಕಲಿಕೆಯಲ್ಲಿ ಹಿಂದಿರುವ ಮಕ್ಕಳನ್ನು ಸಮರ್ಪಕವಾಗಿ ಸಜ್ಜುಗೊಳಿಸುವ ನಿಟ್ಟಿನಲ್ಲಿ ವಿಷಯ ಮಂಥನ ಮಾಡಲಿದ್ದಾರೆ. ಶೇ.100ರಷ್ಟು ಫಲಿತಾಂಶ ತರಬಲ್ಲ ಶಿಕ್ಷಕರಿಗೆ ಪುಸ್ತಕ ಬಹುಮಾನದ ಜತೆಗೆ ಪ್ರಸಂಶ ಪತ್ರವನ್ನು ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಡಿಡಿಪಿಐ ನಿರ್ಧರಿಸಿದ್ದಾರೆ.
ಫೀಡ್‌ಬ್ಯಾಕ್ ತರಗತಿಯಲ್ಲಿ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳು ಯಾವ ವಿಷಯದಲ್ಲಿ ಕಡಿಮೆ ಅಂಕ ಪಡೆದಿದ್ದಾರೆ ಮತ್ತು ಯಾವ ವಿಷಯದಲ್ಲಿ ಹೆಚ್ಚು ಅಂಕ ಪಡೆದಿದ್ದಾರೆ ಎಂಬುದನ್ನು ವಿಶ್ಲೇಷಣಾತ್ಮಕವಾಗಿ ತಿಳಿಸಲಾಗುತ್ತದೆ. ಕಡಿಮೆ ಬಂದಿರಲು ಕಾರಣ, ತಪ್ಪುಗಳನ್ನು ತಿದ್ದಿಕೊಳ್ಳುವುದು ಹೇಗೆ ಮತ್ತು ಹೆಚ್ಚು ಅಂಕ ಪಡೆದ ವಿಷಯದಲ್ಲಿ ಇನ್ನಷ್ಟು ಸುಧಾರಣೆ ಮಾಡಿಕೊಳ್ಳುವುದು ಹೇಗೆ ಎಂಬ ಬಗ್ಗೆ ಶಿಕ್ಷಕರು ಮಕ್ಕಳಿಗೆ ಫೀಡ್ ಬ್ಯಾಕ್ ನೀಡಲಿದ್ದಾರೆ ಎಂದು ಡಿಡಿಪಿಐ ಕೆ. ಗಣಪತಿ ಮಾಹಿತಿ ನೀಡಿದರು.
ವಲಯವಾರು ಸಭೆ ದ.ಕ.ದಲ್ಲಿ ಫಲಿತಾಂಶ ಹೆಚ್ಚಿಸಲು ಈಗಾಗಲೇ ಪ್ರೌಢಶಾಲಾ ಮುಖ್ಯಶಿಕ್ಷಕರ ವಲಯವಾರು ಸಭೆ ನಡೆಸಲಾಗಿದೆ. ಮಧ್ಯವಾರ್ಷಿಕ ಪರೀಕ್ಷೆಯ ಅನಂತರದಲ್ಲಿ ಪ್ರತಿ ವಿದ್ಯಾರ್ಥಿಯ ಫಲಿತಾಂಶ ವಿಶ್ಲೇಷಣೆ ಮಾಡಲಾಗುವುದು. ಇದಕ್ಕಾಗಿ ವಿಷಯ ತಜ್ಞರ ಅಥವಾ ಶೇ. 100ರಷ್ಟು ಫಲಿತಾಂಶ ಬಂದಿರುವ ಶಾಲೆಯ ಶಿಕ್ಷಕರ ನಿಯೋಜನೆ ಮಾಡಲಾಗುವುದು. ವಿಷಯ ಶಿಕ್ಷಕರಿಗೆ ಪ್ರತ್ಯೇಕ ಕಾರ್ಯಾಗಾರ ನಡೆಸಲಾಗುವುದು ಮತ್ತು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೂ ಕಾರ್ಯಾಗಾರ ನಡೆಸಲಾಗುವುದು. ಕಳೆದ ಬಾರಿ ಕಡಿಮೆ ಫಲಿತಾಂಶ ಬಂದಿರುವ ಶಾಲೆಯ ಮುಖ್ಯಶಿಕ್ಷಕರ ಸಭೆಯನ್ನು ಪ್ರತ್ಯೇಕವಾಗಿ ಕರೆದು ಫಲಿತಾಂಶ ಸುಧಾರಣೆಗೆ ಅಗತ್ಯ ಸೂಚನೆ ನೀಡಲಾಗುವುದು ಎಂದು ಜಿಲ್ಲಾ ಎಸೆಸೆಲ್ಸಿ ನೋಡಲ್ ಅಧಿಕಾರಿ ವೆಂಕಟೇಶ್ ನಾಯಕ್ ಮಾಹಿತಿ ನೀಡಿದರು.
ಹೆತ್ತವರಿಗೂ ಜವಾಬ್ದಾರಿ ನಿತ್ಯವೂ ಬೆಳಗ್ಗೆ 1 ಗಂಟೆ ಹೆಚ್ಚುವರಿ ತರಗತಿ ನಡೆಸಿ, ಪರೀಕ್ಷೆಗೆ ಸಿದ್ಧಮಾಡುವ ವಿವಿಧ ಚಟುವಟಿಕೆಗಳ ಜತೆಗೆ ಪಠ್ಯದ ಬೋಧನೆಗೆ ಸೂಚನೆಯನ್ನು ನೀಡಲಾಗಿದೆ. ಇದರ ಜತೆಗೆ ಮಕ್ಕಳ ಪಾಲಕ ಪೋಷಕರ ಸಭೆ ಕರೆದು ಅವರಿಗೂ ಒಂದಿಷ್ಟು ಜವಾಬ್ದಾರಿ ಹಂಚಲು ಮುಂದಾಗಿದ್ದಾರೆ. ಮನೆಯಲ್ಲಿ ಮಕ್ಕಳು ಓದುವ ಸಮಯದಲ್ಲಿ ಟಿವಿ ನೋಡದೇ ಇರುವುದು, ಬೆಳಗ್ಗೆ ಬೇಗ ಏಬ್ಬಿಸುವುದು ಇತ್ಯಾದಿ ಜವಾಬ್ದಾರಿಯನ್ನು ತಂದೆ ಅಥವಾ ತಾಯಿಗೆ ಒಪ್ಪಿಸಿ, ಅದರ ಮೇಲ್ವಿಚಾರಣೆಯನ್ನು ತರಗತಿ ಶಿಕ್ಷಕರು ನೋಡಿಕೊಳ್ಳುವಂತೆ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.