![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 22, 2023, 11:23 PM IST
ಬೆಂಗಳೂರು: ರಾಜ್ಯ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಅಧೀನದಲ್ಲಿ ಬರುವ 844 ರಾಜ್ಯ ಸಂರಕ್ಷಿತ ಸ್ಮಾರಕಗಳು ಹಾಗೂ ಕೇಂದ್ರ ಸಂಸ್ಕೃತಿ ಮಂತ್ರಾಲಯದ ಅಧೀನದಲ್ಲಿರುವ ಭಾರತೀಯ ಪುರಾತತ್ವ ಸರ್ವೇಕ್ಷಣ ವ್ಯಾಪ್ತಿಯಲ್ಲಿ 608 ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳ ಪಟ್ಟಿ ಮಾಡಲಾಗಿದೆ.
ರಾಜ್ಯದ ವಿವಿಧ ಭಾಗದಲ್ಲಿ ಆಳ್ವಿಕೆ ನಡೆಸಿದ್ದ ರಾಜರು ನಿರ್ಮಿಸಿರುವ ಅರಮನೆಗಳು, ದೇವಾಲಯಗಳು, ಕೋಟೆ ಕೊತ್ತಲಗಳು, ಪುಷ್ಕರಣಿಗಳು ವಿನಾಶದ ಅಂಚಿನಲ್ಲಿರುವ ಆರೋಪ ಕೇಳಿ ಬಂದಿತ್ತು. ಆದರೆ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಅಧಿಕಾರಿಗಳು ಇದನ್ನು ತಳ್ಳಿ ಹಾಕಿದ್ದಾರೆ. 844 ರಾಜ್ಯ ಸಂರಕ್ಷಿತ ಸ್ಮಾರಕಗಳು, 608 ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳ ಪಟ್ಟಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲಾಖೆಗೆ ಸಿಗುವ ಅನುದಾನದಲ್ಲಿ ಸ್ಮಾರಕಗಳ ಮೂಲಸ್ವರೂಪಕ್ಕೆ ಧಕ್ಕೆಯಾ ಗದ ರೀತಿಯಲ್ಲಿ ಸ್ಮಾರಕ ಸಂರಕ್ಷಣೆಯ ಮೂಲತತ್ವಗಳಿಗೆ ಅನುಗುಣವಾಗಿ ಸ್ಮಾರಕಗಳ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಪಟ್ಟಿಯಲ್ಲಿರುವ 844 ರಾಜ್ಯ ಸಂರಕ್ಷಿತ ಸ್ಮಾರಕಗಳು ಮತ್ತು 608 ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳ ಮೌಲ್ಯಮಾಪನ ಮಾಡಲು ರಾಜ್ಯ ಅಥವಾ ಕೇಂದ್ರ ಸರಕಾರ ಮಾನದಂಡ ನಿಗದಿಪಡಿಸಿಲ್ಲ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಕೆಳದಿ ಸಾಮ್ರಾಜ್ಯದ ಪ್ರಮುಖ ಸ್ಮಾರಕಗಳಾದ ನಗರದ ಕೋಟೆ, ಬಿದನೂರು ಕೋಟೆ, ಕವಲೇದುರ್ಗ ಕೋಟೆ, ಅಘೋರೇಶ್ವರ ದೇವಾಲಯ, ರಾಮೇಶ್ವರ ದೇವಾಲಯ, ಮಲ್ಲಿಕಾರ್ಜುನ ಮತ್ತು ಸೋಮೇಶ್ವರ ದೇವಾಲಯಗಳು ಕೇಂದ್ರ ಸಂಸ್ಕೃತಿ ಮಂತ್ರಾಲಯದ ಅಧೀನದ ಭಾರತೀಯ ಪುರಾತತ್ವ ಸರ್ವೇಕ್ಷಣ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾಗಿವೆ. ಕೋಟೆಗಳ ಸಂರಕ್ಷಣೆಯು ಬೃಹತ್ ಕಾಮಗಾರಿಯಾಗಿದ್ದು, ಇವುಗಳ ಸಂರಕ್ಷಣೆಯನ್ನು ಹಂತಹಂತವಾಗಿ ಕೈಗೊಳ್ಳಲಾಗುತ್ತಿದೆ. ಇದಕ್ಕೆ ಹೆಚ್ಚಿನ ಸಮಯ ಮತ್ತು ಅನು ದಾನದ ಅಗತ್ಯ ಇದೆ ಎಂದು ಇಲಾಖೆ ಮೂಲಗಳಿಂದ ತಿಳಿದು ಬಂದಿವೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.