Impassable Road; ಸ್ಟ್ರೆಚರ್‌ನಲ್ಲಿ ರೋಗಿಯ ಹೊತ್ತು ಸಾಗಿದ ಆ್ಯಂಬುಲೆನ್ಸ್ ಸಿಬಂದಿ
Team Udayavani, Sep 22, 2023, 11:57 PM IST
ಉಪ್ಪಿನಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರ ಮನೆ ತನಕ 108 ಆ್ಯಂಬುಲೆನ್ಸ್ ಸಂಚರಿಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ 108 ಸಿಬಂದಿ ಸುಮಾರು 1ಕಿ.ಮೀ. ದೂರದ ತನಕ ಮಹಿಳೆಯನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು ಬಂದು ತುರ್ತು ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಶಿರಾಡಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಇಲ್ಲಿನ ದೇವರಮಾರು ನಿವಾಸಿ ಕಮಲಾ ಶುಕ್ರವಾರ ಅನಾರೋಗ್ಯದಿಂದ ಬಳಲಿದಾಗ ಅವರ ಪುತ್ರ 108ಕ್ಕೆ ಕರೆ ಮಾಡಿದ್ದರು. ದುರ್ಗಮ ರಸ್ತೆ ಮತ್ತು ಕೆಸರಿನಿಂದಾಗಿ ಅವರ ಮನೆಗೆ ಆ್ಯಂಬುಲೆನ್ಸ್ ಬರಲು ಸಾಧ್ಯವಾಗಿಲ್ಲ. ಕೊನೆಗೆ ಆ್ಯಂಬುಲೆನ್ಸ್ ಸಿಬಂದಿ ಮನೆಗೆ ಬಂದು ಆರೋಗ್ಯ ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಸ್ಥಳೀಯರ ನೆರವಿನಿಂದ ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು ಆ್ಯಂಬುಲೆನ್ಸ್ ನಿಂತ ಸ್ಥಳದವರೆಗೆ ತಂದರು.
ಅಲ್ಲಿ ತುರ್ತು ಚಿಕಿತ್ಸೆ ನೀಡಿದ ಬಳಿಕ ಅವರನ್ನು ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ್ಯಂಬುಲೆನ್ಸ್‌ನ ಸಿಬಂದಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.