INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ
Team Udayavani, Sep 24, 2023, 6:16 PM IST
ಇಂದೋರ್: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ರನ್ ರಾಶಿ ಪೇರಿಸಿದೆ. ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಭರ್ಜರಿ ಶತಕ, ನಾಯಕ ಕೆಎಲ್ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಸ್ಪೋಟಕ ಅರ್ಧಶತಕದ ಸಹಾಯದಿಂದ ಟೀಂ ಇಂಡಿಯಾ 50 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 399 ರನ್ ಗಳಿಸಿದೆ.
ಟಾಸ್ ಗೆದ್ದ ಆಸ್ಟ್ರೆಲಿಯಾ ಭಾರತವನ್ನು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಿತು. ಇದಕ್ಕೆ ಫಲವಾಗಿ ಆರಂಭದಲ್ಲೇ ರುತುರಾಜ್ ಗಾಯಕ್ವಾಡ್ ವಿಕೆಟ್ ಪಡೆಯುವಲ್ಲಿ ಸಫಲವಾಯಿತು. 8 ರನ್ ಗಳಿಸಿದ್ದ ರುತುರಾಜ್ ಅವರು ಹೇಜಲ್ ವುಡ್ ಬಲೆಗೆ ಬಿದ್ದರು. ಆದರೆ ಬಳಿಕ ಜೊತೆಯಾದ ಶುಭ್ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಆಸೀಸ್ ಬೌಲರ್ ಗಳ ಬೆಂಡೆತ್ತಿದರು.
ಈ ಇಬ್ಬರ ಜೊತೆಯಾಟದಲ್ಲಿ ಮೊದಲು ಶ್ರೇಯಸ್ ಅಯ್ಯರ್ ಶತಕ ಪೂರೈಸಿದರು. ಶಸ್ತ್ರಚಿಕಿತ್ಸೆಯ ಬಳಿಕ ಬ್ಯಾಟಿಂಗ್ ಫಾರ್ಮ್ ಕಂಡುಕೊಂಡ ಅಯ್ಯರ್ ತಮ್ಮ ಮೂರನೇ ಏಕದಿನ ಶತಕ ಬಾರಿಸಿದರು. 86 ಎಸೆತಗಳಲ್ಲಿ ಮೂರು ಸಿಕ್ಸರ್ ಮತ್ತು 10 ಬೌಂಡರಿಯೊಂದಿಗೆ ಅಯ್ಯರ್ ಶತಕ ಪೂರೈಸಿದರು. 105 ರನ್ ಗಳಿಸಿ ಸೀನ್ ಅಬಾಟ್ ಎಸೆತದಲ್ಲಿ ಔಟಾದರು.
ತಮ್ಮ ಅದ್ಭುತ ಫಾರ್ಮ್ ಮುಂದುವರಿಸಿರುವ ಶುಭ್ಮನ್ ಗಿಲ್ ಏಕದಿನ ಕ್ರಿಕೆಟ್ ನಲ್ಲಿ ಮತ್ತೊಂದು ಶತಕ ಬಾರಿಸಿದರು. 92 ಎಸೆತದಲ್ಲಿ ಶತಕ ಪೂರೈಸಿದ ಗಿಲ್ ತಂಡಕ್ಕೆ ಮತ್ತೊಮ್ಮೆ ಉತ್ತಮ ಆರಂಭ ಒದಗಿಸಿದರು. ಒಟ್ಟು ಆರನೇ ಆಟ ಏಕದಿನ ಶತಕ ಬಾರಿಸಿದ ಗಿಲ್ ಈ ವರ್ಷದಲ್ಲೇ ಐದನೇ ಶತಕ ಪೂರೈಸಿದರು. ಗಿಲ್ 104 ರನ್ ಗಳಿಸಿ ಔಟಾದರು. ಅಯ್ಯರ್ ಮತ್ತು ಗಿಲ್ ಎರಡನೇ ವಿಕೆಟ್ ಗೆ ಭರ್ತಿ ಇನ್ನೂರು ರನ್ ಜೊತೆಯಾಟವಾಡಿದರು.
ರಾಹುಲ್- ಸೂರ್ಯ ಅಬ್ಬರ: ಗಿಲ್- ಶ್ರೇಯಸ್ ಬಳಿಕ ನಾಯಕ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿ ಮಿಂಚಿದರು. ರಾಹುಲ್ 38 ಎಸೆತಗಳಲ್ಲಿ ತಲಾ ಮೂರು ಸಿಕ್ಸರ್ ಮತ್ತು ಬೌಂಡರಿ ನೆರವಿನಿಂದ 52 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ ಅವರು ಕೇವಲ 37 ಎಸೆತಗಳಲ್ಲಿ ತಲಾ ಆರು ಸಿಕ್ಸರ್ ಮತ್ತು ಬೌಂಡರಿ ನೆರವಿನಿಂದ ಅಜೇಯ 72 ರನ್ ಮಾಡಿದರು. ಇಶಾನ್ ಕಿಶನ್ 18 ಎಸೆತಗಳಲ್ಲಿ 32 ರನ್ ಗಳಿಸಿದರು.
ಆಸೀಸ್ ಪರ ಕ್ಯಾಮರೂನ್ ಗ್ರೀನ್ ತಲಾ ಎರಡು ವಿಕೆಟ್ ಪಡೆದರೂ 103 ರನ್ ನೀಡಿ ದುಬಾರಿಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.