![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 24, 2023, 9:53 PM IST
ಪಾವಗಡ: ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಡಿದು ಬಾಲಕ ಸಾವನ್ನಪ್ಪಿರುವ ಘಟನೆ ಭಾನುವಾರ ಮುಂಜಾನೆ ಬೆಳಕಿಗೆ ಬಂದಿದೆ. ತಾಲೂಕಿನ ಕ್ಯಾತಗಾನಕೆರೆ ಗ್ರಾಮಕ್ಕೆ ಸೇರಿದ ನಾಗರಾಜು ಮಮತಾ ಎಂಬ ಅವರ ಮಗ ಅಶೋಕ್ (6)ಮೃತ ದುರ್ದೈವಿಯಾಗಿದ್ದಾನೆ.
ಶನಿವಾರ ರಾತ್ರಿ ಸುಮಾರು 11:30 ಗಂಟೆಗೆ ಕ್ಯಾತಗಾನಕೆರೆ ಗ್ರಾಮದ ಮನೆಯಲ್ಲಿ ಅಶೋಕ ಎಂಬ ಬಾಲಕನಿಗೆ ಹಾವು ಕಚ್ಚಿತ್ತು, ಗ್ರಾಮಸ್ಥರ ನೆರವಿನಿಂದ ರಾತ್ರಿ 12 ಗಂಟೆಗೆ ಪಾವಗಡದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು, ಆದರೆ ಬೆಳಗಿನ ಜಾವ 3 ವರೆಗೂ ವೈದ್ಯರು ಇಲ್ಲದೆ ಚಿಕಿತ್ಸೆ ನೀಡಿದ ಕಾರಣ ತುಮಕೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿಯೇ ಯುವಕ ಮೃತಪಟ್ಟಿದ್ದನು ಎಂದು ತಿಳಿದು ಬಂದಿದೆ.
ವೈದ್ಯರ ನಿರ್ಲಕ್ಷ್ಯದ ವಿರುದ್ದ ಸೂಕ್ತ ಕ್ರಮಕ್ಕಾಗಿ ಒತ್ತಾಯಿಸಿ ಊರಿನ ಗ್ರಾಮಸ್ಥರು, ಪೋಷಕರು, ದಲಿತ ಸಂಘಟನೆಗಳ ಸಹಕಾರದೊಂದಿಗೆ ರಸ್ತೆ ತಡೆದು ಆಸ್ಪತ್ರೆ ಮುಂದೆ ಸಂಜೆ 6;45 ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.
ಘಟನೆ ತಿಳಿದು ಪಾವಗಡ ಸಿಪಿಐ ಸುರೇಶ್ ಹಾಗೂ ಸಿಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ ಆದರೆ ವೈದ್ಯರು ಮಾತ್ರ ಪ್ರತಿಭಟನಾ ಸ್ಥಳಕ್ಕೆ ಇದುವರೆಗೂ ಬಂದಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.