Moodabidri: ಉದ್ಯಮಿ ಮನೆಯಲ್ಲಿ ರೂ.1.5 ಲಕ್ಷ ಕಳ್ಳತನ

Team Udayavani, Sep 24, 2023, 10:10 PM IST

Moodabidri: ಉದ್ಯಮಿ ಮನೆಯಲ್ಲಿ ರೂ.1.5 ಲಕ್ಷ ಕಳ್ಳತನ

ಮೂಡುಬಿದಿರೆ: ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆ ಸಂದರ್ಭ ದೇವರ ವಿಗ್ರಹವಿರಿಸಿದ ವಾಹನ ಚಲಾಯಿಸುವ ಸೇವೆಯಲ್ಲಿ ನಿರತರಾಗಿದ್ದ ಸಮಿತಿ ಪ್ರಧಾನ ಕಾರ್ಯದರ್ಶಿ ನಾರಾಯಣ ಪಿ.ಎಂ. ಅವರ ಮನೆಗೆ ನುಗ್ಗಿದ ಕಳ್ಳರು ರೂ. ಒಂದೂವರೆ ಲಕ್ಷ ನಗದು ಎತ್ತಿಕೊಂಡೊಯ್ದ ಘಟನೆ ಶನಿವಾರ ರಾತ್ರಿ ಮಾಸ್ತಿಕಟ್ಟೆಯಲ್ಲಿ ನಡೆದಿದೆ.

ಕಳೆದ 20 ವರ್ಷಗಳಿಂದಲೂ ನಾರಾಯಣ ಪಿ.ಎಂ. ಅವರು ಹೊಸ ಚೇಸಿಸ್‌ ಖರೀದಿಸಿ ಅದರಲ್ಲಿ ಗಣೇಶ ವಿಗ್ರಹವನ್ನಿರಿಸಿ ಸ್ವತ: ತಾವೇ ಚಲಾಯಿಸುತ್ತ ಬರುತ್ತಿರುವಂತೆ ಅವರು ಶನಿವಾರವೂ ಗಣೇಶನ ವಿಗ್ರಹವನ್ನು ಹೊತ್ತ ವಾಹನವನ್ನು ಚಾಲನೆ ಮಾಡುತ್ತಿದ್ದರು.

ಉತ್ಸವದಲ್ಲಿ ತೊಡಗಿಸಿಕೊಂಡಿರುವ ನಾರಾಯಣ ಅವರ ಓಡಾಟ ಗಮನಿಸಿರಬಹುದಾದ ಕಳ್ಳರು ಪೇಟೆಯಲ್ಲಿ ಜನರೆಲ್ಲ ಮೆರವಣಿಗೆಯನ್ನು ವೀಕ್ಷಿಸಲು ಜಮಾಯಿಸಿದ ಹೊತ್ತಿನಲ್ಲಿ ಮನೆಯ ಬಾಲ್ಕನಿಯ ಬಾಗಿಲನ್ನು ಮುರಿದು ಒಳಹೊಕ್ಕಿರುವುದಾಗಿ ತಿಳಿದುಬಂದಿದ್ದು ಮನೆಯಲ್ಲಿ ಸಿಸಿ ಕೆಮರಾ ಇರುವುದನ್ನು ಗಮನಿಸಿ ಅದರ ಡಿವಿಆರ್‌ನ್ನು ಎತ್ತಿಕೊಂಡು ಹೋಗಿದ್ದಾರೆ. ರಾತ್ರಿ ಸುಮಾರು 12 ಗಂಟೆಯ ವೇಳೆಗೆ ಘಟನೆ ನಡೆದಿರಬಹುದು ಎಂದು ಪೊಲೀಸರು ಆಂದಾಜಿಸಿದ್ದಾರೆ.

ಮೆರವಣಿಗೆ ವೀಕ್ಷಣೆಗೆಂದು ತೆರಳಿದ್ದ ನಾರಾಯಣ ಪಿ.ಎಂ.ಅವರ ಪತ್ನಿ ಮನೆಗೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ.

ಈ ಪರಿಸರದ ಪರಿಚಯ ಇರುವ, ವಿಶೇಷವಾಗಿ ಅನ್ಯರಾಜ್ಯಗಳಿಂದ ಇಲ್ಲಿಗೆ ಬಂದಿರುವ ಕಾರ್ಮಿಕರ ಬಗ್ಗೆ ಸಾರ್ವಜನಿಕವಾಗಿ ಸಂಶಯ ವ್ಯಕ್ತವಾಗುತ್ತಿದೆ.

ಮೂಡುಬಿದಿರೆ ಪೊಲೀಸ್‌ ನಿರೀಕ್ಷಕ ಸಂದೇಶ್‌ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.ಹಿರಿಯ ಪೊಲೀಸ್‌ ಅಧಿಕಾರಿಗಳು, ಶ್ವಾನದಳದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.