Mangaluru ವಿದ್ಯಾರ್ಥಿಗಳ ಬ್ಯಾಗ್‌ ತೂಕ ಇಳಿಕೆ: ಸಚಿವ ಮಧು ಬಂಗಾರಪ್ಪ


Team Udayavani, Sep 24, 2023, 11:29 PM IST

ವಿದ್ಯಾರ್ಥಿಗಳ ಬ್ಯಾಗ್‌ ತೂಕ ಇಳಿಕೆ: ಸಚಿವ ಮಧು ಬಂಗಾರಪ್ಪ

ಮಂಗಳೂರು: ಸರಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ವಿಶೇಷ ಆದ್ಯತೆ ನೀಡಲಾಗುವುದು. ಜತೆಗೆ ವಿದ್ಯಾರ್ಥಿಗಳ ಬ್ಯಾಗ್‌ ತೂಕವನ್ನು ಈಗ ಇರುವ ಭಾರಕ್ಕಿಂತ ಮೂರನೇ ಒಂದರಷ್ಟು ಕಡಿಮೆ ಮಾಡಲು ಚಿಂತಿಸಲಾಗಿದೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದುವ ಅಭ್ಯಾಸವನ್ನು ಪ್ರಾರಂಭಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಬದಲು ಎಸ್‌ಇಪಿ ಜಾರಿಗೊಳಿಸಲಾಗುತ್ತಿದೆ ಎಂದರು.

2 ಸಾವಿರ ಕೆಪಿಎಸ್‌ ಆರಂಭ
ಪ್ರಸ್ತುತ ರಾಜ್ಯದಲ್ಲಿ 300 ಕರ್ನಾಟಕ ಪಬ್ಲಿಕ್‌ ಸ್ಕೂಲ್‌(ಕೆಪಿಎಸ್‌)ಗಳಿದ್ದು, ಅವು ಗಳನ್ನು 2 ಸಾವಿರಕ್ಕೆ ಏರಿಸಲಾಗುವುದು. ಪ್ರತೀ 2-3 ಗ್ರಾಪಂಗಳಿಗೆ ಒಂದು ಶಾಲೆ ಮಾಡುವ ಗುರಿ ಇಟ್ಟುಕೊಳ್ಳಲಾಗಿದ್ದು, ಆರಂಭದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 1ರಿಂದ 3ರಷ್ಟು ಶಾಲೆಗಳನ್ನು ನೀಡಲು ಉದ್ದೇಶಿಸಲಾಗಿದೆ. ಈ ವರ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ 3 ಬೋರ್ಡ್‌ ಪರೀಕ್ಷೆಗಳನ್ನು ನಡೆಸಲಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಕಟ್ಟಿ, ಉತ್ತೀರ್ಣರಾಗಿ ಶಿಕ್ಷಣವನ್ನು ಮುಂದುವರಿಸಲು ಅನುಕೂಲವಾಗಿದೆ.

ಇದನ್ನು 10ನೇ ತರಗತಿಗೂ ವಿಸ್ತರಿಸಲಾಗು ತ್ತದೆ. ಈ ವರ್ಷ ಬೋರ್ಡ್‌ ಪರೀಕ್ಷೆ ಬರೆದ 1.30 ಲಕ್ಷ ವಿದ್ಯಾರ್ಥಿಗಳ ಪೈಕಿ 42 ಸಾವಿರ ವಿದ್ಯಾರ್ಥಿಗಳು ತೇರ್ಗಡೆಯಾಗಿ ಕಾಲೇಜಿಗೆ ದಾಖಲಾಗಿದ್ದಾರೆ ಎಂದು ಹೇಳಿದರು.

ಸಪ್ಲಿಮೆಂಟರಿ (ಬೋರ್ಡ್‌) ಪರೀಕ್ಷೆ ಬರೆದು ಕಾಲೇಜು ಸೇರುವವರಿಗೆ ಬ್ರಿಜ್‌ ಕೋರ್ಸ್‌ ನೀಡುವಂತೆ ಉನ್ನತ ಶಿಕ್ಷಣ ಸಚಿವ ರಲ್ಲಿ ಕೋರಲಾಗಿದೆ ಎಂದರು.

ಪ್ರಣವಾನಂದ ಸ್ವಾಮೀಜಿ ಈಡಿಗ ಸಮುದಾಯದ ನಾಯಕ ಅಲ್ಲ. ಅವರದ್ದು ಹಿನ್ನೆಲೆಯನ್ನು ತಿಳಿದುಕೊಳ್ಳಿ. ಹಿಂದುಳಿವ ವರ್ಗದ ಬಗ್ಗೆ ಕಾಳಜಿ ಅವರೊಬ್ಬರಿಗೇ ಇರುವುದಲ್ಲ. ಕಾಳಜಿ ಇರುವವರು ಸಾಕಷ್ಟು ಮಂದಿ ಇದ್ದಾರೆ ಎಂದು ಮಧು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಡಿಸಿಸಿ ಹರೀಶ್‌ ಕುಮಾರ್‌, ಪಕ್ಷದ ಪ್ರಮುಖ ರಾದ ಬಿ. ಇಬ್ರಾಹಿಂ, ಅಭಯಚಂದ್ರ, ಜೆ.ಆರ್‌. ಲೋಬೊ, ಐವನ್‌ ಡಿ’ಸೋಜಾ, ಕೋಡಿಜಾಲ್‌ ಇಬ್ರಾಹಿಂ, ಪದ್ಮರಾಜ್‌ ಆರ್‌., ಎಂ.ಶಶಿಧರ ಹೆಗ್ಡೆ, ಕೃಪಾ ಆಳ್ವ, ಇನಾಯತ್‌ ಆಲಿ, ಶಾಲೆಟ್‌ ಪಿಂಟೋ, ಮಮತಾ ಗಟ್ಟಿ, ಪ್ರತಿಭಾ ಕುಳಾç ಮೊದಲಾದವರು ಉಪಸ್ಥಿತರಿದ್ದರು.

ದ.ಕ. ಲೋಕಸಭೆ ಕ್ಷೇತ್ರವೂ ಕಾಂಗ್ರೆಸ್‌ಗೆ
ಮುಂದಿನ ಲೋಕಸಭಾ ಚುನಾವಣೆಯಲ್ಲಿ ದ.ಕ. ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯನ್ನು ಗೆಲ್ಲಿಸುವ ಸವಾಲು ತೆಗೆದುಕೊಳ್ಳಲಿದ್ದೇವೆ. ಬಿಜೆಪಿಯವರು ಇಲ್ಲಿಯವರೆಗೆ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟು ಗೆಲ್ಲುತ್ತಿದ್ದರು. ಮುಂದೆ ಅದರಿಂದಲೇ ಸೋಲನುಭವಿಸಲಿದ್ದಾರೆ. 2004ರ ಹಿಂದಿನ ಸ್ಥಿತಿ ಮತ್ತೆ ದ.ಕ. ಜಿಲ್ಲೆಯಲ್ಲಿ ಮರುಕಳಿಸಲಿದೆ. ಆಯಾ ಕ್ಷೇತ್ರಗಳಲ್ಲಿ ಪಕ್ಷದ ಮುಖಂಡರ ಜತೆ ಮಾತುಕತೆ ನಡೆಸಿ ಮುಂಬರುವ ಲೋಕಸಭಾ ಚುನಾವಣೆಯ ಸಂಭಾವ್ಯ ಅಭ್ಯರ್ಥಿಗಳ ವರದಿ ನೀಡಲು ವೀಕ್ಷಕರಿಗೆ 15 ದಿನ ಸಮಯಾವಕಾಶ ನೀಡಲಾಗಿದೆ ಎಂದು ಲೋಕಸಭಾ ಚುನಾವಣೆಯ ದ.ಕ. ಜಿಲ್ಲಾ ವೀಕ್ಷಕ-ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಬಿಜೆಪಿ ಜತೆ ಮೈತ್ರಿಗೆ ಮೊದಲು ಜೆಡಿಎಸ್‌ನವರು ಕಾಂಗ್ರೆಸ್‌ ಕೋಮುವಾದಿ ಎಂದು ಆರೋಪ ಮಾಡುತ್ತಿದ್ದರು. ಈಗ ಅವರ ಕತೆ ಏನಾಯ್ತು? ದ.ಕ. ಸೇರಿದಂತೆ ಜೆಡಿಎಸ್‌ನ ರಾಜ್ಯ ಮಟ್ಟದ ಅನೇಕ ನಾಯಕರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದಾರೆ ಎಂದರು.

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.