Udupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ
Team Udayavani, Sep 24, 2023, 11:36 PM IST
ಉಡುಪಿ: ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರವಿವಾರ “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.
ದೇವರಿಗೆ ಪೂಜೆ ಸಲ್ಲಿಸಿ ಅನಂತರ ದೇಗುಲದ ಬಳಿ ಮಣ್ಣನ್ನು ಸಂಗ್ರಹಿಸಿ ಅದನ್ನು ಅಮೃತ ಕಲಶಗಳಲ್ಲಿರಿಸಿ ಕಡಿಯಾಳಿ ದೇವಸ್ಥಾನದಿಂದ ಬಿಜೆಪಿ ಜಿಲ್ಲಾ ಕಚೇರಿವರೆಗೆ ಮೆರವಣಿಗೆಯಲ್ಲಿ ತರಲಾಯಿತು.
ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರಿಗೆ ಕಲಶವನ್ನು ಹಸ್ತಾಂತರಿಸಲಾಯಿತು. ಅ. 13ರ ಒಳಗೆ ಗ್ರಾ.ಪಂ. ವ್ಯಾಪ್ತಿ ಆಯೋಜಿಸುವ ಮೂಲಕ ಗ್ರಾಮದಲ್ಲಿ ಸಂಗ್ರಹಿಸಿದ ಮಣ್ಣನ್ನು ಮಂಡಲಗಳ ಮೂಲಕ ಜಿಲ್ಲಾ ಬಿಜೆಪಿ ಕಚೇರಿಗೆ ತಲುಪಿಸುವಂತೆ ಸೂಚಿಸಲಾಯಿತು.
ಶಾಸಕರಾದ ಯಶ್‌ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಕಿರಣ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಮುಖಂಡರಾದ ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಶ್ಯಾಮಲಾ ಕುಂದರ್, ಕುತ್ಯಾರು ನವೀನ್ ಶೆಟ್ಟಿ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ರಾಘವೇಂದ್ರ ಉಪ್ಪೂರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿರಣ್ ಕುಮಾರ್, ದಾವುದ್ ಅಬುಬಕ್ಕರ್, ಆಲ್ವಿನ್ ಡಿ’ಸೋಜಾ, ಪ್ರವೀಣ್ ಕುಮಾರ್ ಗುರ್ಮೆ ಮತ್ತು ಅಭಿಯಾನದ ಸಂಯೋಜಕ ಸುಪ್ರಸಾದ್ ಶೆಟ್ಟಿ, ಸಹ ಸಂಚಾಲಕರಾದ ಶ್ರೀನಿಧಿ ಹೆಗ್ಡೆ, ಸುದೀಪ್ ಶೆಟ್ಟಿ ನಿಟ್ಟೆ ನಳಿನಿ ಪ್ರದೀಪ್ ರಾವ್, ನಗರಸಭೆ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.