Bihar ಮತ್ತೆ ಎನ್‌ಡಿಎಗೆ ಮರಳುವ ಪ್ರಶ್ನೆಯೇ ಇಲ್ಲ; ಸಿಎಂ ನಿತೀಶ್ ಕುಮಾರ್
Team Udayavani, Sep 25, 2023, 4:49 PM IST
ಪಾಟ್ನಾ: ಜೆಡಿಯು ಮತ್ತೆ ಬಿಜೆಪಿ ನೇತೃತ್ವದ ಎನ್‌ಡಿಎಗೆ ಮರಳುವ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.
ಎನ್‌ಡಿಎಗೆ ಮರಳುವ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಕ್ಯಾ ಫಾಲ್ತು ಬಾತ್ ಹೈ” , ಒಂದು ವರ್ಷದ ಹಿಂದೆಯೇ ನಾವು ಎನ್ ಡಿಎ ಜೊತೆಗಿನ ತನ್ನ ಸಂಬಂಧವನ್ನು ಮುರಿದುಕೊಂಡಿದ್ದು, ಈಗ ಇಂಡಿಯಾ ಮೈತ್ರಿಕೂಟವನ್ನು ಬಲಪಡಿಸುವುದೇ ತಮ್ಮ ಗುರಿ ಎಂದು ಹೇಳಿದರು.
ಬಿಜೆಪಿ-ವಿರೋಧಿ ಇಂಡಿಯಾ ಮೈತ್ರಿಕೂಟದ ಪ್ರಮುಖ ವ್ಯಕ್ತಿಯಾಗಿರುವ ಜೆಡಿಯು ನಾಯಕ ನಿತೀಶ್ ಅವರು, ತಮ್ಮ ಪಕ್ಷದ ಸಹೋದ್ಯೋಗಿಗಳು ತಾವು “ಒಳ್ಳೆಯ ಪ್ರಧಾನಿಯಾಗುವ ಎಲ್ಲಾ ಗುಣಗಳನ್ನು” ಹೊಂದಿದ್ದಾರೆ ಎಂದು ಮಾತನಾಡುವುದರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದರು.
ಇಂತಹ ಹೇಳಿಕೆಗಳನ್ನು ನೀಡಬೇಡಿ ಎಂದು ನಾನು ಈಗಾಗಲೇ ನನ್ನ ಪಕ್ಷದ ಸಹೋದ್ಯೋಗಿಗಳಿಗೆ ಹೇಳಿದ್ದೇನೆ, ಇಂಡಿಯಾ ಮೈತ್ರಿಕೂಟದ ಏಕತೆಯನ್ನು ಬಲಪಡಿಸುವುದು ನನ್ನ ಏಕೈಕ ಆಶಯವಾಗಿದೆ, ನಾನು ಈ ದಿಕ್ಕಿನಲ್ಲಿ ಮಾತ್ರ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.
ಬಿಹಾರ ವಿಧಾನಸಭೆಯ ಉಪ ಸ್ಪೀಕರ್ ಮತ್ತು ಹಿರಿಯ ಜೆಡಿಯು ನಾಯಕ ಮಹೇಶ್ವರ್ ಹಜಾರಿ ಅವರು ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯಾಗಲು ನಿತೀಶ್ ಕುಮಾರ್‌ಗಿಂತ ಸಮರ್ಥ ನಾಯಕ ಮತ್ತೊಬ್ಬರಿಲ್ಲ ಎಂದು ಹೇಳಿದ್ದರು.
ಸಚಿವ ಸಂಪುಟ ವಿಸ್ತರಣೆಯ ಸಾಧ್ಯತೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿತೀಶ್ ಕುಮಾರ್, ಈ ಪ್ರಶ್ನೆಯನ್ನು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಗೆ ಕೇಳಿ ಎಂದು ಹೇಳಿ ಚೆಂಡನ್ನು ಅವರ ಅಂಗಳಕ್ಕೆ ತಳ್ಳಿದರು.
ಇತ್ತೀಚೆಗೆ ಲೋಕಸಭೆಯಲ್ಲಿ ಬಿಎಸ್‌ಪಿ ಶಾಸಕ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿತೀಶ್ , “ಈ ವಿಷಯ ಬಿಡಿ. ನಮ್ಮ ಸರ್ಕಾರ ಸಮಾಜದ ಎಲ್ಲಾ ವರ್ಗಗಳ ಒಳಿತಿಗಾಗಿ ಕೆಲಸ ಮಾಡುತ್ತಿದೆ” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.