Project: ಸಣ್ಣ ನಗರಗಳಿಗೆ ಕೇಂದ್ರದಿಂದ ಶೀಘ್ರ ಬೃಹತ್ ವಸತಿ ಯೋಜನೆ?
ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಮೂಲಕ ಜಾರಿ- ಮುಂದಿನ ಚುನಾವಣೆಗಳ ಹಿನ್ನೆಲೆಯಲ್ಲಿ ಮಹತ್ವದ್ದು
Team Udayavani, Sep 25, 2023, 8:14 PM IST
ನವದೆಹಲಿ: ದೇಶದ ಸಣ್ಣ ಪ್ರಮಾಣದ ನಗರಗಳಲ್ಲಿ ಮನೆಗಳ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ ಶೀಘ್ರವೇ ಬೃಹತ್ ಯೋಜನೆ ಪ್ರಕಟಿಸುವ ಸಾಧ್ಯತೆಗಳು ಇವೆ. ಮುಂದಿನ ಐದು ವರ್ಷಗಳನ್ನು ಗಮನದಲ್ಲಿ ಇರಿಸಿಕೊಂಡು ಒಟ್ಟು 60 ಸಾವಿರ ಕೋಟಿ ರೂ.ಗಳನ್ನು ಈ ಕ್ಷೇತ್ರಕ್ಕಾಗಿ ವಿನಿಯೋಗ ಮಾಡಲಿದೆ.
ವರ್ಷಾಂತ್ಯದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆ, ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರದ ನಿರೀಕ್ಷಿತ ಘೋಷಣೆ ಮಹತ್ವ ಪಡೆದಿದೆ.
ಈ ಬಗ್ಗೆ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಂದ ಶೀಘ್ರವೇ ಘೋಷಣೆ ಹೊರಬೀಳುವ ಸಾಧ್ಯತೆಗಳು ಇವೆ. ಪ್ರಸ್ತಾವಿತ ಯೋಜನೆಯ ಅನ್ವಯ 9 ಲಕ್ಷ ರೂ. ವರೆಗಿನ ಸಾಲದ ಮೊತ್ತದ ಮೇಲೆ ಶೇ.3ರಿಂದ ಶೇ.6.5ರವರೆಗೆ ಬಡ್ಡಿ ಸಬ್ಸಡಿ ಪಡೆಯಲು ಸಾಧ್ಯವಾಗಲಿದೆ. 20 ವರ್ಷಗಳಿಗಾಗಿ 50 ಲಕ್ಷ ರೂ.ಗಳಿಗಿಂತ ಕೆಳಗಿನ ಮೊತ್ತಕ್ಕೆ ಕೂಡ ಯೋಜನೆಯ ಅನ್ವಯ ಫಲಾನುಭವಿಗಳು ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡುವ ಸಾಧ್ಯತೆಗಳು ಇವೆ. ಉದ್ದೇಶಿತ ಯೋಜನೆಯಿಂದಾಗಿ ನಗರ ಪ್ರದೇಶಗಳಲ್ಲಿರುವ 25 ಲಕ್ಷ ಮಂದಿ ಕಡಿಮೆ ಆದಾಯ ಹೊಂದಿರುವವರಿಗೆ ನೆರವಾಗುವ ಸಾಧ್ಯತೆಗಳು ಇವೆ. ಬಡ್ಡಿಯ ಮೊತ್ತವನ್ನು ಗ್ರಾಹಕರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.