ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ; 25.45 ಲ.ರೂ. ಮೌಲ್ಯದ ಸೊತ್ತು ವಶ
Team Udayavani, Sep 25, 2023, 11:27 PM IST
ಮಂಗಳೂರು: ನಗರದ ಕಣ್ಣೂರು ಬೆಂಝ್ ಶೋ ರೂಮ್‌ನ ಹಿಂಭಾಗದ ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತುಂಬಿಸಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ಸೋಮವಾರ ಮಧ್ಯರಾತ್ರಿ ಸುಮಾರಿಗೆ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಆರೋಪಿಗಳು ಓಡಿ ಹೋಗಿದ್ದಾರೆ. 5 ಟಿಪ್ಪರ್ ಲಾರಿಗಳು, ದೋಣಿ, ಮರಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 25.45 ಲ.ರೂ. ಮೌಲ್ಯ ಆಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಬಿ ಘಟಕದ ಎಎಸ್‌ಐ ಮೋಹನ್ ಮತ್ತು ಸಿಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಓರ್ವ ಬಂಧನ, ಪಿಕಪ್ ವಾಹನ ವಶಕ್ಕೆ
ಉಳ್ಳಾಲ: ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪಿಕಪ್ ವಾಹನವನ್ನು ತಡೆದು ನಿಲ್ಲಿಸಿದ ಉಳ್ಳಾಲ ಠಾಣಾಧಿಕಾರಿ ಎಚ್.ಎನ್. ಬಾಲಕೃಷ್ಣ ನೇತೃತ್ವದ ತಂಡ ಆರೋಪಿಯನ್ನು ಬಂಧಿಸಿ, ಮರಳು ಲೋಡ್ ಸಹಿತ ಪಿಕಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹರೇಕಳ ದೆಬ್ಬೇಲಿ ನಿವಾಸಿ ನಾಝಿಮ್ (20) ಬಂಧಿತ ಆರೋಪಿ. ಕಲ್ಲಾಪು ಕುದ್ರು ನೇತ್ರಾವತಿ ನದಿ ತಟದಿಂದ ಮರಳು ತೆಗೆದು ಸಾಗಾಟ ನಡೆಸುತ್ತಿರುವ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕಲ್ಲಾಪು ಬಳಿ ತಡೆಹಿಡಿದು ಬಂಧಿಸಿದ್ದಾರೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.