Mysore; ನಾನು ಯಾವಾಗಲೂ ಗಟ್ಟಿಯಾಗಿಯೇ ಇರುತ್ತೇನೆ: ಸಿಎಂ ಸಿದ್ದರಾಮಯ್ಯ
Team Udayavani, Sep 26, 2023, 2:14 PM IST
ಮೈಸೂರು: ನಾನು ಯಾವಾಗಲೂ ಗಟ್ಟಿಯಾಗಿಯೇ ಇದ್ದೇನೆ. ಗಟ್ಟಿಯಾಗಿಯೇ ಇರುತ್ತೇನೆ. ನೀವು ನನ್ನನ್ನು ವೀಕ್ ಮಾಡಲು ಯತ್ನಿಸುತ್ತೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.
ಚಾಮರಾಜನಗರ ಜಿಲ್ಲೆಯಲ್ಲಿ ಇಂದು ವಾಸ್ತವ್ಯ ಹೂಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತದೆ ಎನ್ನುವ ವಿಚಾರ ಸುಳ್ಳು. ಅಂತಹ ಅಪವಾದ ಇಲ್ಲ ಎಂದರು.
ಸಿದ್ದರಾಮಯ್ಯ ಮಾತಿಗೆ ಸಚಿವ ಮಹದೇವಪ್ಪ ದನಿಗೂಡಿಸಿ ಚಾಮರಾಜನಗರಕ್ಕೆ ಸಿಎಂ ಹೋಗುತ್ತಿರುವುದೇ ಗಟ್ಟಿಯಾಗಿ ಇರುವುದಕ್ಕೆ ಎಂದರು.
ಹಕ್ಕು ರಕ್ಷಣೆ ಕರ್ತವ್ಯ: ಬೆಂಗಳೂರು ಬಂದ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಪ್ರತಿಭಟನೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಪ್ರತಿಭಟನೆನಿಂದ ಇನ್ನೊಬ್ಬರಿಗೆ ತೊಂದರೆಯಾಗಬಾರದು. ಪ್ರತಿಭಟನೆ ಹೇಗೆ ಸಂವಿಧಾನಾತ್ಮಕ ಹಕ್ಕೋ ಹಾಗೆಯೇ ಸಾಮಾನ್ಯ ಜನರಿಗೂ ಹಕ್ಕು ಇರುತ್ತದೆ. ಹಾಗಾಗಿ ಅವರ ಹಕ್ಕಿಗೆ ಧಕ್ಕೆ ತರಬೇಡಿ. ಜನರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ 144 ಸೆಕ್ಷನ್ ಜಾರಿ ಮಾಡಿದ್ದೇವೆ. ಜನರ ಹಕ್ಕನ್ನು ರಕ್ಷಿಸಿಸುವುದು ಸರ್ಕಾರದ ಕರ್ತವ್ಯ. ಅದೇ ಕೆಲಸವನ್ನು ನಾವು ಮಾಡಿದ್ದೇವೆ ಎಂದರು.
ದೇವೇಗೌಡರ ಹೊಸ ಪ್ರೇಮ: ಕಾವೇರಿ ನೀರು ವಿಚಾರವಾಗಿ ದೇವೇಗೌಡರ ಪತ್ರವನ್ನು ನಾವು ಸ್ವಾಗತಿಸುತ್ತೇವೆ. ಈಗ ಅವರದು ಬಿಜೆಪಿ ಜೊತೆಗೆ ಹೊಸ ಪ್ರೇಮ. ಅವರು ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ. ಆದರೆ ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳಲಿಲ್ಲ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿರುವುದನ್ನು ನಾವು ಒಪ್ಪುವುದಿಲ್ಲ. ಸರ್ಕಾರ ಎಲ್ಲ ಅ ಹಂತದಲ್ಲೂ ನಾಡಿನ ಜನರ ರಕ್ಷಣೆಗೆ ಬದ್ಧವಾಗಿಯೇ ಇದೆ. ಕಾನೂನು ತಜ್ಞರು ಸರಿಯಾಗಿ ವಾದ ಮಾಡಿಲ್ಲ ಎಂಬ ಆರೋಪ ಸುಳ್ಳು. ಹಿಂದಿನ ಎಲ್ಲಾ ಸರ್ಕಾರಗಳು ಇದ್ದಾಗಲೂ ಇದ್ದ ಕಾನೂನು ತಂಡವೇ ಈಗಲೂ ಇರುವುದು. ಅವರೇ ವಾದ ಮಾಡಿದ್ದಾರೆ. ಕಾನೂನು ತಜ್ಞರಲ್ಲಿ ಯಾವ ಬದಲಾವಣೆಯಾಗಿಲ್ಲ. ಹೀಗಾಗಿ ಸಮರ್ಥ ವಾದ ಮಂಡಿಸಿಲ್ಲ ಎಂಬುದರಲ್ಲಿ ಅರ್ಥವಿಲ್ಲ ಎಂದರು.
ಬಿಜೆಪಿಯಿಂದ ಚಡ್ಡಿ ಚಳುವಳಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರನ್ನು ಮೊದಲಿನಿಂದಲೂ ಚಡ್ಡಿಗಳು ಎಂದೇ ಕರೆಯುತ್ತಿದ್ದೇವೆ. ಈಗ ಅವರು ಚಡ್ಡಿ ಚಳುವಳಿ ಮಾಡುತ್ತಿದ್ದಾರೆ. ಮಾಡಲಿ ಬಿಡಿ ಎಂದರು.
ರಾಜ್ಯ ಕಾಂಗ್ರೆಸ್ ಡಿಎಂಕೆ ಬಿ ಟೀಮ್ ಎಂಬ ಎಚ್ ಡಿಕೆ ಆರೋಪ ವಿಚಾರಕ್ಕೆ ಮಾತನಾಡಿ, ಎಐಡಿಎಂಕೆ ಬಿಜೆಪಿ ಜೊತೆ ಇತ್ತಲ್ಲ ಆಗ ಅದು ಯಾವ ಟೀಮ್..? ಸುಮ್ಮನೆ ರಾಜಕೀಯ ಕಾರಣಕ್ಕೆ ಏನೇನೋ ಹೇಳಿಕೆ ಕೊಡಬಾರದು. ಸುಮ್ಮನೆ ಬಿ ಟೀಮ್ ಎ ಟೀಮ್ ಎನ್ನಬಾರದು ಎಂದರು.
ಕಾವೇರಿ ನೀರು ಪ್ರಸ್ತುತ ವರದಿಗಾಗಿ ಕೇಂದ್ರದ ತಂಡ ಆಗಮಿಸುವ ವಿಚಾರಕ್ಕೆ ಮಾತನಾಡಿದ ಸಿಎಂ, ಪ್ರಧಾನಮಂತ್ರಿ ಮಧ್ಯಸ್ಥಿಕೆ ವಹಿಸಬೇಕು ಕೇಂದ್ರದಿಂದ ತಜ್ಞರ ತಂಡ ಬರಬೇಕು. ಇದನ್ನ ನಾನು ಎರಡು ಬಾರಿ ಕೇಂದ್ರಕ್ಕೆ ಕೇಳಿದ್ದೇನೆ. ದೇವೇಗೌಡರೂ ಕೂಡ ಈಗ ಪತ್ರ ಬರೆದು ಕೇಳಿದ್ದಾರೆ. ಈಗಲಾದರೂ ಕೇಂದ್ರದಿಂದ ತಂಡ ಬರಲಿ. ಯಾಕೆ ಕೇಂದ್ರದ ತಂಡ ಬರುತ್ತಿಲ್ಲವೆಂದು ಬಿಜೆಪಿಯವರು ಹೇಳಲಿ. ಬಿಜೆಪಿಯವರು ಹಾದಿಬೀದಿಯಲ್ಲಿ ಹೋರಾಟ ಮಾಡುವ ಬದಲು ಕೇಂದ್ರದಿಂದ ತಜ್ಞರ ತಂಡ ಕರೆಸಲಿ. ಕೋರ್ಟ್ ಮಧ್ಯಸ್ಥಿಕೆ ಇಲ್ಲದೆ ಎರಡು ರಾಜ್ಯ ಕುಳಿತು ಮಾತುಕತೆಗೆ ಈಗಲೂ ನಾವೂ ಸಿದ್ದವಿದ್ದೇವೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.