Yalandur: ಕುಡಿವ ನೀರಿನಲ್ಲಿ ಹುಳುಗಳು!

Team Udayavani, Sep 26, 2023, 4:30 PM IST

Yalandur: ಕುಡಿವ ನೀರಿನಲ್ಲಿ ಹುಳುಗಳು!

ಯಳಂದೂರು: ಬಳೇಪೇಟೆಯ 10, 11 ನೇ ವಾರ್ಡಿನಲ್ಲಿ ಸೋಮವಾರ ಪಪಂನಿಂದ ಸರಬರಾಜಾಗುವ ಕುಡಿಯುವ ನೀರಿನಲ್ಲಿ ಹುಳು ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಈ ವಾರ್ಡುಗಳಲ್ಲಿನ ಕೆಲ ಮನೆಗಳಲ್ಲಿನ ನಲ್ಲಿ ನೀರಿನಲ್ಲಿ ಸಹಸ್ರಪದಿ ಹೋಲುವ ಹುಳು ಕಾಣಿಸಿಕೊಂಡಿವೆ.

ಕುಡಿಯುವ ನೀರು ಸಂಗ್ರಹಿಸಲು ಬಿಂದಿಗೆ ಇಟ್ಟಿದ್ದ ಜುಬೇದಬೇಗಂ ಹಾಗೂ ಜಬೀನ್‌ ತಾಜ್‌ ಎಂಬವರು ವಿಚಲಿತರಾಗಿದ್ದಾರೆ. ಆದರೆ ಕಳೆದ ಕೆಲವು ದಿನಗಳಿಂದಲೂ ಹುಳುಗಳು ಕಾಣಿಸಿ ಕೊಂಡಿರುವುದು ಬಡಾವಣೆಯ ಇತರರಿಂದ ಗೊತ್ತಾಗಿದೆ. ಪಟ್ಟಣದ ವಾಸಿಗಳಿಗೆ ಶುದ್ಧ ಕುಡಿವ ನೀರು ಲಭ್ಯವಾಗುತ್ತಿಲ್ಲ. ಪದೇ ಪದೆ ಕುಡಿಯುವ ನೀರಿನಲ್ಲಿ ಕಲ್ಮಶ ಕಾಣಿಸಿಕೊಳ್ಳುತ್ತವೆ. ಹುಳು, ಕೆಲವೊಮ್ಮೆ ಹಾವಿನ ಮರಿಗಳೂ ನೀರಿನಲ್ಲಿ ಬಂದಿರುವ ಉದಾಹರಣೆ ಇವೆ. ಕಾವೇರಿ ಕುಡಿಯುವ ನೀರು ಬಳೇಪೇಟೆಗೆ ಸರಬರಾಜೇ ಆಗುತ್ತಿಲ್ಲ. ಅಲ್ಲಿನ ನೀರು ಸರಿಯಾಗಿ ಶುದ್ಧೀಕರಿಸುವುದಿಲ್ಲ. ಅಲ್ಲಲ್ಲಿ ಪೈಪ್‌ ಒಡೆದರೂ ಇದರ ದುರಸ್ತಿ ಸೂಕ್ತ ಕಾಲದಲ್ಲಿ ಆಗುವುದಿಲ್ಲ. ಈಚೆಗೆ ಬಳೇಪೇಟೆಯ ಸರ್ಕಲ್‌ನಲ್ಲಿ 2 ಬಾರಿ ಪೈಪ್‌ ಒಡೆದು ದುರಸ್ತಿ ಮಾಡಲಾಗಿದೆ. ನೀರಿನೊಂದಿಗೆ ಇತರೆ ಕಲ್ಮಶ, ಕಲ್ಲು, ಮಣ್ಣು ಮಿಶ್ರಿತ ನೀರೂ ಸರಬರಾಜಾಗುತ್ತಿದೆ. ಈ ಬಗ್ಗೆ ಪಂಚಾಯ್ತಿ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಕ್ರಮ ವಹಿಸುತ್ತಿಲ್ಲ ಎಂಬುದು ಇಲ್ಲಿನ ವಾಸಿಗಳಾ ಮನು, ಸುರೇಶ್‌ ಸೇರಿದಂತೆ ಹಲವರ ದೂರಾಗಿದೆ.

ಕ್ರಮ ವಹಿಸುತ್ತೇನೆ: ಈ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿ, ನೌಕರರನ್ನು ಸ್ಥಳಕ್ಕೆ ಕಳುಹಿಸಿ ಮಾಹಿತಿ ಸಂಗ್ರಹಿಸಿ ಮತ್ತೆ ಇದು ಮರುಕಳಿಸದಂತೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಯಳಂದೂರು ಪಪಂ ಮುಖ್ಯಾಧಿಕಾರಿ ಮಹೇಶ್‌ಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.