‘Leo’ ಆಡಿಯೋ ಬಿಡುಗಡೆ ಕಾರ್ಯಕ್ರಮ ರದ್ದು; ರಾಜಕೀಯ ಒತ್ತಡವೇ ಕಾರಣವೆಂದ ದಳಪತಿ ಫ್ಯಾನ್ಸ್

ಕಾರ್ಯಕ್ರಮಕ್ಕೆ ಸಿದ್ಧವಾಗುತ್ತಿತ್ತು ಬೃಹತ್ ವೇದಿಕೆ

Team Udayavani, Sep 27, 2023, 11:26 AM IST

‘Leo’ ಆಡಿಯೋ ಬಿಡುಗಡೆ ಕಾರ್ಯಕ್ರಮ ರದ್ದು; ರಾಜಕೀಯ ಒತ್ತಡವೇ ಕಾರಣವೆಂದ ದಳಪತಿ ಫ್ಯಾನ್ಸ್

ಚೆನ್ನೈ: ದಳಪತಿ ವಿಜಯ್‌ ಅವರ ʼಲಿಯೋʼ ಸಿನಿಮಾದ ಹೈಪ್‌ ದಿನಕಳೆದಂತೆ ಹೆಚ್ಚಾಗುತ್ತಿದೆ. ಲೋಕೇಶ್ ಕನಕರಾಜ್ – ವಿಜಯ್‌ ಕಾಂಬಿನೇಷನ್‌ ನಲ್ಲಿ ಬರುತ್ತಿರುವ ಸಿನಿಮಾ ಇದಾಗಿರುವುದರಿಂದ ಅಭಿಮಾನಿಗಳಿಗೆ ಸಿನಿಮಾದ ಮೇಲೆ ಡಬಲ್‌ ಕುತೂಹಲ ಮೂಡಿಸಿದೆ.

ಈಗಾಗಲೇ “ನಾ ರೆಡಿ” ಹಾಡಿನ ಮೂಲಕ ಸೆನ್ಸೇಷನ್ ಕ್ರಿಯೇಟ್‌ ಮಾಡಿರುವ ರಿಲೀಸ್‌ ಡೇಟ್ ಸಮೀಪಿಸುತ್ತಿದೆ. ಇನ್ನೇನು ಲಕ್ಷಾಂತರ ಜನರ ಮುಂದೆ ಅದ್ಧೂರಿ ಆಡಿಯೋ ಲಾಂಚ್‌ ಕಾರ್ಯಕ್ರಮ ನಡೆಸುವ ತಯಾರಿಯಲ್ಲಿದ್ದ ʼಲಿಯೋʼ ತಂಡ ಇದ್ದಕ್ಕಿದ್ದಂತೆ ಆಡಿಯೋ ಬಿಡುಗಡೆ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದು ಅಭಿಮಾನಿಗಳಿಗೆ ಭಾರೀ ನಿರಾಶೆ ಮೂಡಿಸಿದೆ.

ಸೆಪ್ಟೆಂಬರ್ 30 ರಂದು ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಲಿಯೋ ಆಡಿಯೋ ಲಾಂಚ್‌ ಕಾರ್ಯಕ್ರಮ ನಡೆಯಬೇಕಿತ್ತು. ಇದರ ವೇದಿಕೆ ಕಾಮಗಾರಿ ಆರಂಭಗೊಂಡು ಪ್ರಗತಿಯಲ್ಲಿತ್ತು. ಸಾವಿರಾರು ಜನರು  ದಳಪತಿ ವಿಜಯ್‌ ಅವರನ್ನು ನೋಡಲು ತುದಿಗಾಲಲ್ಲಿ ನಿಂತಿದ್ದರು. ಆದರೆ ಅವರ ಉತ್ಸಾಹಕ್ಕೆ ಚಿತ್ರತಂಡ ತಣ್ಣೀರು ಎರಚಿದೆ.

ಪ್ರೊಡಕ್ಷನ್‌ ಸಂಸ್ಥೆ ಸವೆನ್‌ ಸ್ಕ್ರೀನ್‌ ಸ್ಟುಡಿಯೋ ಟ್ವೀಟ್‌ ಮಾಡಿ ʼಲಿಯೋʼ ಆಡಿಯೋ ಲಾಂಚ್‌ ಕಾರ್ಯಕ್ರಮ ರದ್ದು ಮಾಡಿದ್ದಾಗಿ ಹೇಳಿದೆ.

ʼಲಿಯೋʼ ಆಡಿಯೋ ಲಾಂಚ್‌ ಪಾಸ್‌ ಗಾಗಿ ನಿರೀಕ್ಷೆಗೂ ಮೀರಿ ಜನ ಪಾಸ್‌ ಗಳನ್ನು ಕೇಳುತ್ತಲೇ ಇದ್ದಾರೆ. ಸುರಕ್ಷತೆಯ ದೃಷ್ಟಿಯಿಂದ ಆಡಿಯೋ ಬಿಡುಗಡೆ ಕಾರ್ಯಕ್ರಮವನ್ನು ನಡೆಸದಿರಲು ನಿರ್ಧರಿಸಿದ್ದೇವೆ. ಅಭಿಮಾನಿಗಳಿಗಾಗಿ ಸಿನಿಮಾ ಅಪ್ಡೇಟ್‌ ಗಳನ್ನು ನೀಡುತ್ತಿರುತ್ತೇವೆ. ನೀವೆಲ್ಲ ಅಂದುಕೊಂಡ ಹಾಗೆ ಇದು ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿದು ತೆಗೆದುಕೊಂಡ ನಿರ್ಧಾರವಲ್ಲ” ಎಂದು ನಿರ್ಮಾಣ ಸಂಸ್ಥೆ ಹೇಳಿದೆ.

ದಳಪತಿ ವಿಜಯ್‌ ರಾಜಕೀಯ ಅಖಾಡಕ್ಕೆ ಬರಲಿದ್ದಾರೆ ಎನ್ನುವ ಚರ್ಚೆಗಳು ಜೋರಾಗಿ ನಡೆಯುತ್ತಿದೆ. ಇತ್ತೀಚೆಗೆ ಅವರು ʼ ವಿಜಯ್ ಮಕ್ಕಳ್ ಇಯಕ್ಕಂʼ ಪರವಾಗಿ 10 ತರಗತಿಯ ಮಕ್ಕಳಿಗೆ ಸನ್ಮಾನ ಮಾಡಿದ್ದರು. ಇದಲ್ಲದೇ ಪಕ್ಷದ ಸಭೆಯನ್ನು ನಡೆಸಿದ್ದರು.

ಇದನ್ನೂ ಓದಿ: Yash: ಹಾಲಿವುಡ್‌ ನಿರ್ದೇಶಕರನ್ನು ಭೇಟಿಯಾದ ರಾಕಿಂಗ್‌ ಸ್ಟಾರ್‌ ಯಶ್; ಫೋಟೋ ವೈರಲ್

ಇದೇ ಕಾರಣದಿಂದ ʼಲಿಯೋʼ ಆಡಿಯೋ ಲಾಂಚ್‌ ರಾಜಕೀಯ ಕಾರಣವಾಗಿ ರದ್ದಾಗಿದೆ ಕೆಲವರು ವಾದಿಸಿದ್ದಾರೆ. ಆಡಳಿತ ಪಕ್ಷ ಡಿಎಂಕೆ ʼಲಿಯೋʼ ಆಡಿಯೋ ಲಾಂಚ್‌ ರದ್ದಾಗಲು ಕಾರಣವೆಂದು ಕೆಲವರು ‘ವಿ ಸ್ಟ್ಯಾಂಡ್ ವಿತ್ ಲಿಯೋ’ ಹ್ಯಾಷ್‌ ಟ್ಯಾಗ್‌ ಬಳಸಿ ಟ್ವೀಟ್‌ ಮಾಡಿದ್ದಾರೆ.

ವಿಜಯ್‌ ಅವರ ಆಡಿಯೋ ಲಾಂಚ್‌ ಕಾರ್ಯಕ್ರಮಕ್ಕೆ ಪ್ರತ್ಯೇಕ ಅಭಿಮಾನಿಗಳ ವರ್ಗವೇ ಇದೆ. ಅವರು ʼವಾರಿಸುʼ ಸಿನಿಮಾದ ‘ಕುಟ್ಟಿ ಕಧೈ'(ಸಣ್ಣ ಕಥೆ) ಯನ್ನು ಹೇಳಿದ್ದು ವೈರಲ್‌ ಆಗಿತ್ತು.

ಈ ನಡುವೆ ʼಲಿಯೋʼ ಆಡಿಯೋ ಲಾಂಚ್‌ ಪಾಸ್‌ ಎಂದು ಅನೇಕರು ನಕಲಿ ಪಾಸ್‌ ಗಳನ್ನು ದುಡ್ಡಿಗಾಗಿ ಮಾರಾಟ ಮಾಡಿದ್ದಾರೆ.

ಅಂದಹಾಗೆ ಲೊಯೋ ಸಿನಿಮಾ ಅಕ್ಟೋಬರ್‌ 19 ರಂದು ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

1-e4qeewqewq

Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

1-lllaa

Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ

1-sssk

Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್‌!

Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್‌ ನಟ ದಿ. ರಾಜ್‌ ಕಪೂರ್‌100ನೇ ಜನ್ಮದಿನ ಆಚರಣೆ

Raj Kapoor: ಪಾಕಿಸ್ತಾನದಲ್ಲಿ ಬಾಲಿವುಡ್‌ ನಟ ದಿ. ರಾಜ್‌ ಕಪೂರ್‌100ನೇ ಜನ್ಮದಿನ ಆಚರಣೆ

UI Movie: ಉಪ್ಪಿ ʼಯುಐʼ ಟ್ರೇಲರ್‌ ನೋಡಿ ಬಾಲಿವುಡ್‌ ನಟ ಆಮಿರ್‌ ಖಾನ್‌ ಶಾಕ್.!

UI Movie: ಉಪ್ಪಿ ʼಯುಐʼ ಟ್ರೇಲರ್‌ ನೋಡಿ ಬಾಲಿವುಡ್‌ ನಟ ಆಮಿರ್‌ ಖಾನ್‌ ಶಾಕ್.!

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

Kasganj: ವಿವಾಹಿತನಿಗೆ ಪೊಲೀಸ್‌ ಠಾಣೆಯಲ್ಲಿ ಬಲವಂತದಿಂದ ಮತ್ತೊಂದು ವಿವಾಹ!SPಗೆ ದೂರು!

3

Bantwal: ಬಿ.ಸಿ.ರೋಡ್‌ನ‌ ರೈಲ್ವೇ ಇಲಾಖೆಯ ಜಾಗದಲ್ಲಿ ಕೊಳೆತ ತ್ಯಾಜ್ಯ

2

Puttur: ಸಂಚಾರ ದಟ್ಟಣೆ ತಡೆಗೆ ಮಾಸ್ಟರ್‌ ಪ್ಲ್ಯಾನ್‌

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.