![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 27, 2023, 5:30 PM IST
ಪಣಜಿ: ಗೋವಾದಲ್ಲಿ ಪ್ರಸ್ತುತ ಮೂವರು ಮಹಿಳಾ ಶಾಸಕರಿದ್ದು, ಅವರಲ್ಲಿ ಇಬ್ಬರು ಮಹಿಳಾ ಶಾಸಕರ ಪತಿಗಳು ರಾಜ್ಯ ಸಚಿವ ಸಂಪುಟದಲ್ಲಿದ್ದಾರೆ. ಒಂದೇ ಕುಟುಂಬಕ್ಕೆ ಎರಡು ಸಚಿವ ಸ್ಥಾನ ನೀಡುವುದಿಲ್ಲ, ಹೀಗಾಗಿ ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿಲ್ಲ ಎಂದು ರಾಜ್ಯಸಭಾ ಸದಸ್ಯ ಸದಾನಂದ ಶೇಟ್ ತಾನಾವಡೆ ಲಾಜಿಕ್ ಹೇಳಿದ್ದಾರೆ.
ಕೇಂದ್ರದ ಬಿಜೆಪಿ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಉಭಯ ಸದನಗಳಲ್ಲಿ ಅಂಗೀಕರಿಸಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನೂ ಮಸೂದೆಯಲ್ಲಿ ಕಲ್ಪಿಸಲಾಗಿದೆ. ರಾಜ್ಯಾದ್ಯಂತ ಮೀಸಲಾತಿಯನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲಾಯಿತು. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಸೂದೆಯನ್ನು ಬೆಂಬಲಿಸಿದ್ದಾರೆ. ಗೋವಾದಲ್ಲಿ ಮಹಿಳಾ ಸಚಿವರ ಕೊರತೆಯ ಬಗ್ಗೆ ಪ್ರತಿಪಕ್ಷಗಳು ಪ್ರಸ್ತಾಪಿಸಿದ ನಂತರ, ರಾಜ್ಯಸಭಾ ಸದಸ್ಯ ಸದಾನಂದ ಶೇಟ್ ತಾನಾವಡೆ ಇದಕ್ಕೆ ಕಾರಣಗಳನ್ನು ವಿವರಿಸಿದರು.
ಗೋವಾದಲ್ಲಿ ಮೂವರು ಮಹಿಳಾ ಶಾಸಕರಿದ್ದು, ಅವರಲ್ಲಿ ಯಾರಿಗೂ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿಲ್ಲ. ರಾಜ್ಯಸಭಾ ಸಂಸದ ಸದಾನಂದ ಶೇಟ್ ತನವಡೆ ಅವರಿಗೆ ಈ ಕುರಿತು ಪಣಜಿಯಲ್ಲಿ ಸುದ್ಧಿಗಾರರು ಪ್ರಶ್ನಿಸಿದಾಗ ಈ ಮಾಹಿತಿ ನೀಡಿದರು. ಗೋವಾದಲ್ಲಿ ಮೂವರು ಮಹಿಳಾ ಶಾಸಕರಿದ್ದಾರೆ. ದಿಲಾಯಲಾ ಲೋಬೋ (ಶಿವೋಲಿ), ಜೆನ್ನಿಫರ್ ಮೊನ್ಸೆರಾಟ್ (ತಲ್ಗಾಂವ್) ಮತ್ತು ದಿವ್ಯಾ ರಾಣೆ (ಪರ್ಯೆ). ಒಂದು ಕುಟುಂಬಕ್ಕೆ ಇಬ್ಬರಿಗೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಗೋವಾದಲ್ಲಿ ಮಹಿಳಾ ಶಾಸಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿಲ್ಲ ಎಂದು ರಾಜ್ಯಸಭಾ ಸದಸ್ಯ ಸದಾನಂದ ತಾನಾವಡೆ ಮಾಹಿತಿ ನೀಡಿದರು.
ಮೂರು ದಶಕಗಳ ನಂತರ ಗೋವಾದಲ್ಲಿ ಇಬ್ಬರು ಮಹಿಳಾ ಶಾಸಕರು ಆಯ್ಕೆಯಾಗಿದ್ದಾರೆ. 1994ರಲ್ಲಿ ನಾಲ್ವರು ಮಹಿಳಾ ಶಾಸಕರು ಮೊದಲ ಬಾರಿಗೆ ಗೋವಾ ವಿಧಾನಸಭೆಗೆ ಆಯ್ಕೆಯಾದರು. ಕಳೆದ ಗೋವಾ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 40 ಸ್ಥಾನಗಳಿಗೆ 301 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಕೇವಲ 26 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದರು. 40 ಸ್ಥಾನಗಳ ಪೈಕಿ 25 ಕ್ಷೇತ್ರಗಳಲ್ಲಿ ಯಾವುದೇ ಮಹಿಳಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿಲ್ಲ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.