Moodabidri ಗಾಂಜಾ ಮಾರಾಟ ಯತ್ನ: ಮೂವರು ವಶಕ್ಕೆ
Team Udayavani, Sep 28, 2023, 12:13 AM IST
ಮೂಡುಬಿದಿರೆ: ಬೆಳುವಾಯಿಯ ಕಾಂತಾವರ ದ್ವಾರದ ಬಳಿ ಸ್ಕೂಟರ್ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದುಕೊಂಡಿದೆ.
ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತರು.
ಗಾಂಜಾ ಮಾರಾಟ ಯತ್ನದ ಕುರಿತಾಗಿ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೂವರು ವ್ಯಕ್ತಿಗಳ ಸಹಿತ 800 ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಸ್ವಾಧೀನಪಡಿಸಿಕೊಂಡಿದ್ದು ಒಟ್ಟು ಸೊತ್ತುಗಳ ಅಂದಾಜು ಮೌಲ್ಯ 62,000 ರೂ. ಆಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ದಿನೇಶ್ ಕುಮಾರ್, ಮಂಗಳೂರು ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ ಅವರ ನಿರ್ದೇಶನದಲ್ಲಿ ಈ ಕಾರ್ಯಚರಣೆ ನಡೆದಿದೆ.
ಪೊಲೀಸ್ ಉಪನಿರೀಕ್ಷಕರಾದ ದಿವಾಕರ ರೈ, ಸಿದ್ದಪ್ಪ ನರನೂರ ಮತ್ತು ಸಿಬಂದಿಗಳಾದ ಪ್ರಶಾಂತ್, ಮಹಮ್ಮದ್ ಇಕ್ಬಾಲ್, ಮಹಮ್ಮದ್ ಹುಸೇನ್, ಅಕೀಲ್ ಮಹಮ್ಮದ್, ವೆಂಕಟೇಶ್ ಮತ್ತು ಇತರ ಸಿಬಂದಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.