Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ
Team Udayavani, Sep 28, 2023, 5:25 PM IST
ಉಡುಪಿ/ಮಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಹಲವು ಸಂಘಟನೆಗಳು ಕರೆ ನೀಡಿರುವ ಶುಕ್ರವಾರದ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ.
ಖಾಸಗಿ ಬಸ್ ಸಂಘಟನೆಯು ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ ನೀಡಿದೆ. ಆದರೆ ಶುಕ್ರವಾರ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ.
ಕಾವೇರಿ ವಿಚಾರವಾಗಿ ನಮ್ಮ ಸಹಾನುಭೂತಿಯಿದೆ. ಆದರೆ ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗುವ ಕಾರಣ ನಾವು ನೈತಿಕ ಬೆಂಬಲ ಸೂಚಿಸುತ್ತೇವೆ. ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ.
ಇದನ್ನೂ ಓದಿ:World Cup ; ಹೈದರಾಬಾದ್ ನಲ್ಲಿ ‘ಅನಿರೀಕ್ಷಿತ’ ಸ್ವಾಗತ ಕಂಡು ಪಾಕ್ ತಂಡ ಫುಲ್ ಖುಷ್
ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮವು ಕರ್ನಾಟಕ ಬಂದ್ ಗೆ ಬೆಂಬಲ ನೀಡಿದೆಯಾದರೂ ಕರಾವಳಿಯಲ್ಲಿ ನೈತಿಕ ಬೆಂಬಲ ಮಾತ್ರ ನೀಡಿದೆ. ಹೀಗಾಗಿ ಉಡುಪಿ- ಮಂಗಳೂರಿನಲ್ಲಿ ಹೋಟೆಲ್ ಗಳು ತೆರೆದಿರಲಿವೆ.
ಶುಕ್ರವಾರ ಕರ್ನಾಟಕ ಬಂದ್ ಇದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಜನ ಜೀವನ ಬಹುತೇಕ ಎಂದಿನಂತೆ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.