Karnataka Bandh: ಮಂಡ್ಯ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಾಗಿ ತಿಳಿದು ಬಂದಿದೆ...
Team Udayavani, Sep 28, 2023, 8:31 PM IST
ಮಂಡ್ಯ: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಸೆ.29ರಂದು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ ಹೊರಡಿಸಿದ್ದಾರೆ.
ವಿವಿಧ ಕನ್ನಡಪರ ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ತಡೆದು ರಸ್ತೆಯನ್ನು ಬಂದ್ ಮಾಡುವುದಾಗಿ ತಿಳಿದು ಬಂದಿದೆ. ಆ ವ್ಯಾಪ್ತಿಯಲ್ಲೂ ನಿಷೇಧಾಜ್ಞೆಯನ್ನೂ ಜಾರಿಗೊಳಿಸಲಾಗಿದೆ.
ಕರ್ನಾಟಕ ಬಂದ್ ಆಗುವುದರಿಂದ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಲಿದೆ. ಇದರಿಂದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಸಂಚಾರಕ್ಕೂ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಸರ್ಕಾರಿ, ಅನುದಾನಿತ, ಅನುದಾನಿತ ರಹಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳನ್ನೊಳಗೊಂಡಂತೆ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.