Kottigehara: ಧಾರಾಕಾರ ಮಳೆ, ಹೈರಾಣಾದ ರೈತರು
Team Udayavani, Sep 30, 2023, 2:30 PM IST
ಕೊಟ್ಟಿಗೆಹಾರ: ಬಣಕಲ್, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಸೇರಿದಂತೆ ಹಲವೆಡೆ ಸೆ.28ರ ಗುರುವಾರದಿಂದ ಧಾರಾಕಾರ ಹಾಗೂ ಬಿರುಸಿನ ಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ. ಕಾಫಿನಾಡಿನಲ್ಲಿ ಚಳಿಯ ವಾತಾವರಣ ನಿರ್ಮಾಣವಾಗಿದೆ. ಕೊಟ್ಟಿಗೆಹಾರದಲ್ಲಿ ಗುರುವಾರ ಬೆಳಿಗ್ಗೆಯಿಂದ ಶನಿವಾರದವರೆಗೆ ಬೆಳಿಗ್ಗೆನವರೆಗಿನ ಪ್ರಕಾರ 164.2ಮಿ.ಮೀ (16ಸೆ.ಮೀ) ಮಳೆ ದಾಖಲಾಗಿದೆ.
ಶನಿವಾರವೂ ಮಳೆ ಮುಂದುವರೆದಿದ್ದು, ರೈತರ ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ರೈತರು ಮಳೆಯಿಂದ ಹೈರಾಣಾಗಿದ್ದಾರೆ. ಕಾಫಿನಾಡಿನಲ್ಲಿ ಈಗ ಅರೆಬಿಕಾ ಕಾಫಿ ಕೆಲವು ಕಡೆ ಹಣ್ಣಾಗುತ್ತಿದ್ದು ಮಳೆಯಿಂದ ತೊಂದರೆ ಅನುಭವಿಸುವಂತಾಗಿದೆ.
ತೀರಾ ಮಳೆಯಿಂದ ರೊಬಸ್ವಾ ಕಾಫಿ ಕೂಡ ಉದುರುತ್ತಿದೆ. ಅತಿಯಾದ ಮಳೆಯ ಹಿನ್ನಲೆ ಅಡಿಕೆ ಕೂಡ ಶೀತ ಬಾಧೆಯಿಂದ ಮರದಿಂದ ಅಡಿಕೆ ಉದುರುತ್ತಿದೆ. ಮಳೆಗಾಲದಲ್ಲಿ ಸಕಾಲ ಮಳೆ ಬಾರದೇ ಈಗ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಮಳೆ ಬರುತ್ತಿರುವುದರಿಂದ ಹವಾಮಾನ ಬದಲಾವಣೆಗೊಂಡು ಕಾರ್ಮಿಕರು ಕೆಲಸಕ್ಕೆ ತೆರಳಲು ಅನಾನುಕೂಲವಾಗಿದೆ.
ಮಳೆಯಿಂದ ಕೊಟ್ಟಿಗೆಹಾರ, ಅತ್ತಿಗೆರೆ, ಸುತ್ತಮುತ್ತ ಸೇರಿದಂತೆ ವಿದ್ಯುತ್ ಕಣ್ಮುಚ್ಟಾಲೆಯಾಡುತ್ತಿದೆ. ಧಾರಾಕಾರ ಮಳೆಯಿಂದ ಜನರು ಹೈರಾಣಾಗುವಂತಾಗಿದೆ. ಮಳೆಯ ನಡುವೆ ಕಾಫಿನಾಡಿಗೆ ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್ಕೌಂಟರ್ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.