Forest ಭೂಮಿಯಲ್ಲಿ ಸಾಗುವಳಿ ಮಾಡುವ ರೈತರ ತೆರವು; ಖಂಡ್ರೆ ಪತ್ರಕ್ಕೆ ಬಿವೈಆರ್ ಖಂಡನೆ


Team Udayavani, Sep 30, 2023, 5:00 PM IST

1-asasdasd

ಸಾಗರ: ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುವ ರೈತರನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆಗೆ ಪತ್ರ ಬರೆದಿರುವುದು ಖಂಡನೀಯ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಂದು ಕಡೆ ಅರಣ್ಯ ಸಾಗುವಳಿದಾರರನ್ನು ಉಳಿಸುವ ಭರವಸೆ ನೀಡುತ್ತಿದ್ದರೆ ಇನ್ನೊಂದು ಕಡೆ ರೈತರನ್ನು ಒಕ್ಕಲೆಬ್ಬಿಸುವ ನಿಲುವು ಗೊಂದಲಮಯವಾಗಿದೆ ಎಂದರು.

ರೈತರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈತ ರೈತರನ್ನು ಒಕ್ಕಲೆಬ್ಬಿಸಲು ಮುಂದಾಗಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು ಶರಾವತಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ಕೊಡಿಸಲು ಅವಿರತ ಶ್ರಮಿಸಿದ್ದಾರೆ. ನಮ್ಮ ಸರ್ಕಾರದ ಅವಧಿಯಲ್ಲೂ ಈ ಪ್ರಯತ್ನ ನಡೆದಿದ್ದು ಕೇಂದ್ರಕ್ಕೆ ಯಡಿಯೂರಪ್ಪ ನೇತೃತ್ವದಲ್ಲಿ 9,400 ಹೆಕ್ಟೇರ್ ಭೂಮಿಯನ್ನು ಮಂಜೂರು ಮಾಡಿಸುವ ಪ್ರಯತ್ನ ಮಾಡಿದ್ದೇವೆ. ಇಂತಹ ಪ್ರಯತ್ನಗಳ ನಡುವೆಯೂ ರಾಜ್ಯ ಅರಣ್ಯ ಸಚಿವರ ನಿಲುವು ಅನುಮಾನಕ್ಕೆ ಕಾರಣವಾಗಿದೆ. ನಾವು ಹೊಸದಾಗಿ ಒತ್ತುವರಿದಾರರಿಗೆ ಯಾವುದೇ ರೀತಿಯ ಬೆಂಬಲ ನೀಡುವುದಿಲ್ಲ. ಆದರೆ ರೈತರು ಸಾಗುವಳಿ ಮಾಡಿಕೊಂಡಿರುವುದನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಹೇಳಿದರು.

ಸಾಗರ ತಾಳಗುಪ್ಪ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ನಾನು ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ಜನರಿಗೆ ಭರವಸೆ ನೀಡಿದ್ದೆವು. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಯವರ ಅಮೃತ್ ಭಾರತ್ ನಿಲ್ದಾಣ್ ಯೋಜನೆಯಡಿ ಗತಿಶಕ್ತಿ ಘೋಷವಾಕ್ಯದಡಿ ತಾಳಗುಪ್ಪ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ ಏರಿಸಲು 27 ಕೋಟಿ ರೂ., ಸಾಗರ ರೈಲ್ವೆ ನಿಲ್ದಾಣಕ್ಕೆ 26 ಕೋಟಿ ರೂ. ಹಾಗೂ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ 24 ಕೋಟಿ ರೂ. ಮಂಜೂರಾಗಿದೆ. ಈಗಾಗಲೇ ಟೆಂಡರ್ ಕರೆಯಲಾಗಿದ್ದು ಕಾಮಗಾರಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ. ವಿಶ್ವವಿಖ್ಯಾತ ಜೋಗ ಜಲಪಾತ ಅಭಿವೃದ್ಧಿಗೆ 180 ಕೋಟಿ ರೂ. ಮಂಜೂರಾಗಿದ್ದು ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ. ಪ್ರವಾಸಿಗರು ಹೆಚ್ಚು ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ತ್ವರಿತವಾಗಿ ನಡೆಯುತ್ತಿದೆ. ಇದರ ಜೊತೆಗೆ ತುಮರಿ ಸೇತುವೆ ಕಾಮಗಾರಿ ಚುರುಕಾಗಿ ನಡೆಯುತ್ತಿದ್ದು, ಶಿವಪ್ಪನಾಯಕ ನಗರದಿಂದ ಮರಕುಟುಕವರೆಗೆ ರಾಷ್ಟ್ರೀಯ ಹೆದ್ದಾರಿ 766 ಸಿ ಅಗಲೀಕರಣಕ್ಕೂ ಹಣ ಮಂಜೂರಾಗಿದೆ ಎಂದು ಹೇಳಿದರು.

ನೆಟ್‌ವರ್ಕ್ ಸಮಸ್ಯೆ ನಿವಾರಣೆಗೆ ತಾಲೂಕಿನಲ್ಲಿ ಯುಎಸ್‌ಓಎಫ್ ಯೋಜನೆಯಡಿ 39 ಕುಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಟವರ್ ನಿರ್ಮಾಣ ಮಾಡಲಾಗುತ್ತಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ ತಾಲೂಕಿಗೆ 50 ಟವರ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಮಾಜಿ ಸಚಿವ ಹಾಲಪ್ಪ ಮಾತನಾಡಿ, ಪ್ರಧಾನ ಮಂತ್ರಿಯವರು ಕರೆ ನೀಡಿರುವ ಸ್ವಚ್ಛ ಭಾರತ್ ಅಭಿಯಾನದ ಅಂಗವಾಗಿ ಅ. ಒಂದರಂದು ಪಕ್ಷದ ವತಿಯಿಂದ ಸ್ವಚ್ಚತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 7 ರಿಂದ 9-30 ರವರೆಗೆ ನಗರದ ವಿವಿಧ ಭಾಗಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಈ ಸ್ವಚ್ಚತಾ ಸೇವೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಡಾ. ರಾಜನಂದಿನಿ, ಪ್ರಸನ್ನ ಕೆರೆಕೈ, ಲೋಕನಾಥ ಬಿಳಿಸಿರಿ, ಗಣೇಶಪ್ರಸಾದ್, ಕುಪೇಂದ್ರ, ಆರ್. ಶ್ರೀನಿವಾಸ್, ಮಧುರಾ ಶಿವಾನಂದ್, ವಿ.ಮಹೇಶ್, ಪ್ರಶಾಂತ್ ಕೆ.ಎಸ್., ಮಾಲತೇಶ್ ಇನ್ನಿತರರು ಹಾಜರಿದ್ದರು. ತದನಂತರ ಸಂಸದ ಬಿವೈಆರ್ ಕೆಳದಿ, ಭೀಮನಕೋಣೆ ಮೊದಲಾದೆಡೆ ಬಿಜೆಪಿ ಪಕ್ಷದ ಬೂತ್ ಸಶಕ್ತೀಕರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು.

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.