Haryana ; ರೈತರ ಪ್ರತಿಭಟನೆ ತೀವ್ರ : ಅಂಬಾಲಾದಲ್ಲಿ 180 ರೈಲುಗಳು ರದ್ದು
Team Udayavani, Sep 30, 2023, 6:26 PM IST
ಅಂಬಾಲಾ: ರೈತರ ‘ರೈಲ್ ರೋಕೋ’ ಪ್ರತಿಭಟನೆಯಿಂದಾಗಿ ಹರಿಯಾಣದ ಅಂಬಾಲಾದಲ್ಲಿ 180 ರೈಲುಗಳನ್ನು ರದ್ದುಗೊಳಿಸಲಾಗಿದೆ.
ಇತ್ತೀಚಿನ ಪ್ರವಾಹದಲ್ಲಿ ಹಾನಿಗೊಳಗಾದ ಬೆಳೆಗಳಿಗೆ ಪರಿಹಾರ, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮೇಲೆ ಕಾನೂನು ಖಾತರಿ ಮತ್ತು ಉತ್ತರ ಭಾರತದ ಎಲ್ಲಾ ರಾಜ್ಯಗಳಲ್ಲಿ ಸರಕಾರದಿಂದ ಸಾಲ ಮನ್ನಾಕ್ಕೆ ರೈತರು ಒತ್ತಾಯಿಸುತ್ತಿದ್ದಾರೆ.
ಪ್ರತಿಭಟನೆಯಿಂದಾಗಿ ಪಂಜಾಬ್ ಮತ್ತು ಹರಿಯಾಣದಲ್ಲಿ ಸಾವಿರಾರು ರೈಲು ಪ್ರಯಾಣಿಕರು ಪರದಾಡುವಂತಾಗಿದೆ. ರೈಲು ರದ್ದಾದ ಪ್ರಯಾಣಿಕರಿಗೆ ಮರುಪಾವತಿ ನೀಡಲು ಅಂಬಾಲಾ ಕ್ಯಾಂಟ್ ನಿಲ್ದಾಣದಲ್ಲಿ ಹೆಚ್ಚುವರಿ ಕೌಂಟರ್‌ಗಳನ್ನು ತೆರೆಯಲಾಗಿದೆ ಎಂದು ರೈಲ್ವೆ ಅಧಿಕಾರಿ ನವೀನ್ ಕುಮಾರ್ ತಿಳಿಸಿದ್ದಾರೆ.
ಫರೀದ್‌ಕೋಟ್, ಸಮ್ರಾಲಾ, ಮೊಗಾ, ಹೋಶಿಯಾರ್‌ಪುರ್, ಗುರುದಾಸ್‌ಪುರ್, ಜಲಂಧರ್, ತರ್ನ್ ತರಣ್, ಸಂಗ್ರೂರ್, ಪಟಿಯಾಲ, ಫಿರೋಜ್‌ಪುರ, ಬಟಿಂಡಾ ಮತ್ತು ಅಮೃತಸರದಲ್ಲಿ ರೈತರು ತಮ್ಮ ಮೂರು ದಿನಗಳ ಆಂದೋಲನದ ಭಾಗವಾಗಿ ಗುರುವಾರದಿಂದ ಹಲವಾರು ಸ್ಥಳಗಳಲ್ಲಿ ರೈಲು ಹಳಿಗಳಿಗೆ ಮುತ್ತಿಗೆ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.