WhatsApp, Telegram ಆ್ಯಪ್‌ ವಂಚನೆ ಜಾಲ ಬಯಲಿಗೆ

6 ಮಂದಿ ಬಂಧನ - 5,013 ಪ್ರಕರಣ ದಾಖಲು- 854 ಕೋಟಿ ರೂ. ವಹಿವಾಟು!

Team Udayavani, Sep 30, 2023, 11:52 PM IST

WHATSAPP

ಬೆಂಗಳೂರು: ವಾಟ್ಸ್‌ಆ್ಯಪ್‌ ಮತ್ತು ಟೆಲಿಗ್ರಾಮ್‌ಗಳಲ್ಲಿ ಸಿಗುವ ಹಣಕಾಸಿನ ಹೂಡಿಕೆ ಕುರಿತ ಅಪರಿಚಿತ ಆ್ಯಪ್‌ಗ್ಳ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕಿದೆ. ಇಲ್ಲವಾದರೆ ಅಪಾಯ ಖಚಿತ.
ಬೆಂಗಳೂರು ಸಹಿತ ದೇಶದ ವಿವಿಧೆಡೆ ಸಾರ್ವ ಜನಿಕರಿಂದ ಹಣ ಹೂಡಿಕೆ ಮಾಡಿಸಿಕೊಂಡು ಕೋಟ್ಯಂತರ ರೂ. ವಂಚಿಸಿದ ಆರು ಮಂದಿಯ ರಾಷ್ಟ್ರೀಯ ಮಟ್ಟದ ಜಾಲವನ್ನು ಸಿಸಿಬಿ ಪೊಲೀಸರು ಬೇಧಿಸಿದ್ದಾರೆ. ಆರೋಪಿಗಳು ಬೆಂಗಳೂರು ಸಹಿತ ದೇಶದ ವಿವಿಧೆಡೆ ನಕಲಿ ಬ್ಯಾಂಕ್‌ ಖಾತೆಗಳನ್ನು ತೆರೆದು ಬರೋಬ್ಬರಿ 854 ಕೋಟಿ ರೂ. ವಹಿವಾಟು ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ನ್ಯಾಷನಲ್‌ ಸೈಬರ್‌ ಕ್ರೈಂ ರಿಪೋರ್ಟಿಂಗ್‌ ಪೋರ್ಟಲ್‌ (ಎನ್‌ಸಿಆರ್‌ಪಿ)ಯಲ್ಲಿ ಆರೋಪಿಗಳು ಬಳಸಿದ್ದ ಬ್ಯಾಂಕ್‌ ಖಾತೆಗಳ ವಿರುದ್ಧ ದೇಶಾದ್ಯಂತ ಬರೋಬ್ಬರಿ 5,013 ಕೇಸ್‌ಗಳು ದಾಖಲಾಗಿವೆ.

ವಿದ್ಯಾರಣ್ಯಪುರ, ಯಲಹಂಕ ನಿವಾಸಿಗಳಾದ ಮನೋಜ್‌ ಅಲಿಯಾಸ್‌ ಜಾಕ್‌ (32), ಫ‌ಣೀಂದ್ರ (33), ಚಕ್ರಾಧರ್‌ ಅಲಿಯಾಸ್‌ ಚಕ್ರಿ (30), ಶ್ರೀನಿವಾಸ್‌ (35), ಸೋಮಶೇಖರ್‌ ಅಲಿಯಾಸ್‌ ಅಂಕಲ್‌ (40) ಹಾಗೂ ವಸಂತ ಕುಮಾರ್‌ (32) ಬಂಧಿತರು. ಆರೋಪಿಗಳಿಂದ 13 ಮೊಬೈಲ…, 7 ಲ್ಯಾಪ್‌ಟಾಪ್‌ಗ್ಳು, 1 ಪ್ರಿಂಟರ್‌, 1 ಸ್ವೆ„ಪಿಂಗ್‌ ಯಂತ್ರ, 1 ಹಾರ್ಡ್‌ಡಿಸ್ಕ್, ಹಲವು ಬ್ಯಾಂಕ್‌ ಪಾಸ್‌ಬುಕ್‌ ಹಾಗೂ ಇತರ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ 84 ಬ್ಯಾಂಕ್‌ ಖಾತೆಗಳನ್ನು ಜಪ್ತಿ ಮಾಡಲಾಗಿದ್ದು, 5 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್‌ ಆಯಕ್ತ ಬಿ.ದಯಾನಂದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸ್ನೇಹಿತೆ ಮಾತು ಕೇಳಿ ಹೂಡಿಕೆ
ದೂರುದಾರರ ಸ್ನೇಹಿತೆಯೊಬ್ಬರು “ದಿ ವೈನ್‌ ಗ್ರೂಪ್‌’ ಎಂಬ ಆ್ಯಪ್‌ನಲ್ಲಿ ಸಾವಿರಾರು ರೂ. ಹೂಡಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದುಕೊಂಡಿದ್ದರು. ಈ ವಿಚಾರ ತಿಳಿದ ದೂರುದಾರ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಅದರಲ್ಲಿದ್ದ ಇನ್‌ಸ್ಟಾಲ್‌ಮೆಂಟ್‌ ಆಫ‌ರ್‌ಗಳನ್ನು ಗಮನಿಸಿದ ಹಣ ಹೂಡಿಕೆ ಆರಂಭಿಸಿದ್ದಾರೆ. ಮೊದಲಿಗೆ ಆರೋಪಿಗಳು ಸೂಚಿಸಿದ ಬ್ಯಾಂಕ್‌ ಖಾತೆಗೆ 1 ಸಾವಿರ ರೂ. ಹೂಡಿಕೆ ಮಾಡಿದ್ದಾರೆ. ಅದಕ್ಕೆ ಪ್ರತಿಯಾಗಿ ಕೇವಲ ಒಂದು ಗಂಟೆಯಲ್ಲೇ ಒಂದೂವರೆ ಸಾವಿರ ರೂ. ಲಾಭ ಪಡೆದುಕೊಂಡಿದ್ದಾರೆ. ಹೀಗೆ ಹಂತ-ಹಂತವಾಗಿ ಎರಡು ಖಾಸಗಿ ಬ್ಯಾಂಕ್‌ಗೆ 8.5 ಲಕ್ಷ ರೂ. ಹೂಡಿಕೆ ಮಾಡಿದ್ದಾರೆ. ಆದರೆ ಯಾವುದೇ ಲಾಭಾಂಶ ಬಂದಿಲ್ಲ.

ಈ ಸಂಬಂಧ ತನಿಖೆ ನಡೆಸಿದಾಗ, ಆರೋಪಿಗಳು ಹಣ ಸ್ವೀಕರಿಸಿರುವ ಬ್ಯಾಂಕ್‌ ಖಾತೆಗಳ ಮಾಹಿತಿ ಪಡೆಯು ವಾಗ ಬಹು ವಂಚನೆ ಬೆಳಕಿಗೆ ಬಂದಿದೆ.
ಬ್ಯಾಂಕ್‌ ಖಾತೆಗಳ ಪೈಕಿ ತಮಿಳುನಾಡಿನಲ್ಲಿ ತೆರೆದ ಒಂದು ಬ್ಯಾಂಕ್‌ ಖಾತೆಯಿಂದ ಬೆಂಗಳೂರಿನ ಸುಬ್ಬು ಎಂಟರ್‌ ಪ್ರೈಸಸ್‌ ಎಂಬ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿತ್ತು. ಈ ಖಾತೆಯ ಮಾಲಕರನ್ನು ವಿಚಾರಿಸಿದಾಗ ತನಗೆ ಅರಿವಿಲ್ಲದೆ ಸ್ನೇಹಿತ ಆರೋಪಿ ವಸಂತಕುಮಾರ್‌ ದಾಖಲೆಗಳನ್ನು ಪಡೆದುಕೊಂಡಿದ್ದಾಗಿ ತಿಳಿಸಿದ್ದ. ಅದನ್ನು ಪರಿಶೀಲಿಸಿದಾಗ ವಸಂತಕುಮಾರ್‌ ಸ್ನೇಹಿತನ ಹೆಸರಿನ ದಾಖಲೆಗಳನ್ನು ಸಲ್ಲಿಸಿ ಬ್ಯಾಂಕ್‌ ಖಾತೆ ತೆರೆದು, ಕೃತ್ಯ ಎಸಗಿದ್ದಾನೆ. ಆ ಬಳಿಕ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಬ್ಲ್ಯಾಕ್‌ ಟು ವೈಟ್‌, ಚೀನ ಆ್ಯಪ್‌
ನಕಲಿ ಬ್ಯಾಂಕ್‌ ಖಾತೆಗಳಿಗೆ ಅಮಾಯಕರ ಹಣ ಪಡೆಯುತ್ತಿದ್ದ ಆರೋಪಿಗಳು, ಅದನ್ನು ಸರಕಾರ ಕಪ್ಪು ಹಣ ಎಂದು ದಂಡ ವಿಧಿಸಬಹುದು ಎಂದು ಭಾವಿಸಿ, ಆನ್‌ಲೈನ್‌ ಗೇಮ್‌ಗಳ ಹೆಸರಿನಲ್ಲಿ ಖಾತೆ ತೆರೆದು ಬಿಳಿ ಮಾಡಿಕೊಳ್ಳುತ್ತಿದ್ದರು. ಮತ್ತೂಂದೆಡೆ ಆರೋಪಿಗಳು ಒಬ್ಬ ವ್ಯಕ್ತಿಯ ಜತೆ 24 ಗಂಟೆಯಿಂದ 48 ಗಂಟೆ ಅವಧಿಯಲ್ಲೇ ಹಣಕಾಸಿನ ವಹಿವಾಟು ನಡೆಸಿ ವಂಚಿಸಿ ನಾಪತ್ತೆಯಾಗುತ್ತಿದ್ದರು. ಆರೋಪಿಗಳು ಬಳಸುತ್ತಿದ್ದ ಆ್ಯಪ್‌ ಚೀನ ಮೂಲದ್ದಾಗಿದೆ ಎಂದು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಫೇಸ್‌ಬುಕ್‌ನಲ್ಲಿ ಬ್ಯಾಂಕ್‌ ಖಾತೆ ಮಾರಾಟ
ವಿಚಾರಣೆಯಲ್ಲಿ ಆರೋಪಿ ಮನೋಜ್‌ ಕುಮಾರ್‌ ಫೇಸ್‌ಬುಕ್‌ ಮೂಲಕ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸನ್ನಿ ಸೇರಿ ಇಬ್ಬರು ಆರೋಪಿಗಳನ್ನು ಪರಿಚಯಿಸಿಕೊಂಡಿದ್ದಾನೆ. ಬಳಿಕ ಇತರ ಆರೋಪಿಗಳ ಜತೆ ಸೇರಿಕೊಂಡು ಫೇಸ್‌ಬುಕ್‌ನಲ್ಲಿ ಬ್ಯಾಂಕ್‌ ಖಾತೆ ಮಾರಾಟಕ್ಕಿಟ್ಟಿರುವ ವ್ಯಕ್ತಿಗಳು ಅಥವಾ ಹಣದ ಅಗತ್ಯವಿರುವ ವ್ಯಕ್ತಿಗಳನ್ನು ಸಂಪರ್ಕಿಸಿ ಬ್ಯಾಂಕ್‌ ಖಾತೆಗಳನ್ನು ಖರೀದಿಸಿದ್ದ. ಕೆಲವೊಮ್ಮೆ ಅಮಾಯಕರ ಬ್ಯಾಂಕ್‌ ಖಾತೆಗಳನ್ನು ಕಳವು ಮಾಡಿದ್ದಾನೆ. ಬಳಿಕ ತಲೆಮರೆಸಿಕೊಂಡಿರುವ ವ್ಯಕ್ತಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಹೀಗೆ ಬೆಂಗಳೂರಿನಲ್ಲಿ 17 ಮಂದಿಯಿಂದ ಬ್ಯಾಂಕ್‌ ಖಾತೆಗಳನ್ನು ಪಡೆದು ವಂಚಿಸಿದ್ದಾರೆ. ಅವರ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಾಗಿದ್ದು, ಈ ಪೈಕಿ ನಗರ ಸೈಬರ್‌ ಪೊಲೀಸ್‌ ಠಾಣೆಯ 2 ಪ್ರಕರಣಗಳು, ಆಗ್ನೇಯ ವಿಭಾಗದಲ್ಲಿ 3 ಪ್ರಕರಣಗಳು, ಈಶಾನ್ಯ ವಿಭಾಗದಲ್ಲಿ 4 ಪ್ರಕರಣಗಳು ಮತ್ತು ಉತ್ತರ ವಿಭಾಗದಲ್ಲಿ 8 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್‌ ಆಯುಕ್ತ ಬಿ.ದಯಾನಂದ ಹೇಳಿದರು.

ಟಾಪ್ ನ್ಯೂಸ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.