Rain: ದಿಢೀರ್ ಪ್ರವಾಹಕ್ಕೆ ನ್ಯೂಯಾರ್ಕ್ ತತ್ತರ
Team Udayavani, Oct 1, 2023, 12:43 AM IST
ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್ ನಗರದಲ್ಲಿ ಶುಕ್ರವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದ ರಸ್ತೆಗಳು, ರೈಲು ನಿಲ್ದಾಣಗಳು, ಸುರಂಗ ಮಾರ್ಗಗಳು, ನೆಲ ಅಂತಸ್ತಿನ ಕಟ್ಟಡಗಳು, ಶಾಲೆಗಳು ಜಲಾವೃತಗೊಂಡಿವೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ತುರ್ತು ಪರಿಸ್ಥಿತಿ ಘೋಷಿಸಿದೆ.
ಭಾರೀ ಮಳೆಯ ಕಾರಣ ವಿಮಾನ ನಿಲ್ದಾಣ, ರೈಲ್ವೇ ಸುರಂಗ ಮಾರ್ಗಗಳು, ಪ್ರಮುಖ ರಸ್ತೆಗಳಿಗೆ ನೀರು ನುಗ್ಗಿದ್ದು, ಈ ಕುರಿತ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ರನ್ವೇಯಲ್ಲಿ ನೀರು ನಿಂತಿರುವ ಕಾರಣ, ನ್ಯೂಯಾರ್ಕ್ ವಿಮಾನ ನಿಲ್ದಾಣದ ಒಂದು ಟರ್ಮಿನಲ್ ಅನ್ನು ಮುಚ್ಚಲಾಗಿದೆ. ಮೆಟ್ರೋ ರೈಲು ಸುರಂಗಗಳು ಹಾಗೂ ನಿಲ್ದಾಣಗಳು ಕೂಡ ಮಳೆ ನೀರಿನಿಂದ ಆವೃತಗೊಂಡಿವೆ. ಭಾರೀ ಮಳೆಯು ಜನಜೀವನ ಅಸ್ತವ್ಯಸ್ತಗೊಳಿಸಿದೆ.
ಕಚೇರಿಗಳು, ಶಾಲಾ-ಕಾಲೇಜುಗಳಿಗೆ ತೆರಳದೇ ಮನೆಯಲ್ಲಿಯೇ ಇರುವಂತೆ ನಾಗರಿಕರಿಗೆ ನಗರ ಆಡಳಿತ ಮನವಿ ಮಾಡಿದೆ. ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.