Indo-US: ಚಂದ್ರಯಾನದಂತೆ ಭಾರತ-ಅಮೆರಿಕ ಬಾಂಧವ್ಯವು ಎತ್ತರಕ್ಕೆ: ಜೈಶಂಕರ್
Team Udayavani, Oct 1, 2023, 7:55 PM IST
ವಾಷಿಂಗ್ಟನ್: ಚಂದ್ರಯಾನದಂತೆ ಭಾರತ-ಅಮೆರಿಕ ನಡುವಿನ ಬಾಂಧವ್ಯವು ಚಂದ್ರನೆತ್ತರಕ್ಕಷ್ಟೇ ಅಲ್ಲ, ಅದನ್ನು ಮೀರಿ ಬೆಳೆಯಲಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಬಣ್ಣಿಸಿದ್ದಾರೆ.
ವಾಷಿಂಗ್ಟನ್‌ನಲ್ಲಿರುವ ಇಂಡಿಯಾ ಹೌಸ್‌ನಲ್ಲಿ ಅಮೆರಿಕಕ್ಕೆ ಭಾರತದ ರಾಯಭಾರಿ ಕಚೇರಿ ಆಯೋಜಿಸಿದ್ದ “ಸೆಲೆಬ್ರೇಟಿಂಗ್ ಕಲರ್ಸ್ ಆಫ್ ಫ್ರೆಂಡ್‌ಶಿಪ್’ ಕಾರ್ಯಕ್ರಮದಲ್ಲಿ ಭಾರತೀಯ-ಅಮೆರಿಕನ್ನರನ್ನು ಉದ್ದೇಶಿಸಿ ಅವರು ಮಾತನಾಡಿದರು.
“ಭಾರತ ಮತ್ತು ಅಮೆರಿಕ ನಡುವಿನ ಬಾಂಧವ್ಯವು ಸಾರ್ವಕಾಲಿಕವಾಗಿ ಉತ್ತುಂಗದಲ್ಲಿದೆ. ಬದಲಾದ ಈ ಕಾಲಘಟ್ಟದಲ್ಲಿ ಉಭಯ ರಾಷ್ಟ್ರಗಳು ಒಬ್ಬರನ್ನೊಬ್ಬರು ಬಹಳ ಅಪೇಕ್ಷಣೀಯ, ಅತ್ಯುತ್ತಮ ಮತ್ತು ಆರಾಮದಾಯಕ ಪಾಲುದಾರರಾಗಿ ನೋಡುವ ಸ್ಥಾನಕ್ಕೆ ತಲುಪಿವೆ’ ಎಂದಿದ್ದಾರೆ.
“ಅಮೆರಿಕದ ಬೆಂಬಲವಿಲ್ಲದೇ ಜಿ20 ಶೃಂಗಸಭೆಯು ಅತ್ಯಂತ ಯಶಸ್ವಿಯಾಗಿ ಆಗುವುದು ಸಾಧ್ಯವಿರಲಿಲ್ಲ. ಅಮೆರಿಕದ ಕೊಡುಗೆ ಮತ್ತು ಸಹಾಯಕ್ಕಾಗಿ ಧನ್ಯವಾದಗಳು. ಉಭಯ ದೇಶಗಳ ನಡುವಿನ ಮಾನವೀಯ ಬಂಧವು, ದ್ವಿಪಕ್ಷೀಯ ಸಂಬಂಧವನ್ನು ಅನನ್ಯಗೊಳಿಸುತ್ತದೆ’ ಎಂದು ಎಸ್.ಜೈಶಂಕರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.