Rain: ಭಾರೀ ಮಳೆ: ಗೋವಾಗೆ ರೆಡ್ ಅಲರ್ಟ್
Team Udayavani, Oct 1, 2023, 11:25 PM IST
ಪಣಜಿ: ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದಾಗಿ ಗೋವಾ ಕರಾವಳಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗೋವಾಗೆ ರೆಡ್ ಅಲರ್ಟ್ ಘೋಷಿಸಿದೆ. ಗಂಟೆಗೆ ಸುಮಾರು 60ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಉತ್ತರ ಗೋವಾದ ಪೆರ್ನಮ್, ತಿಸ್ವಾಡಿ, ಬ್ಯಾರೇಜ್, ಬಿಚ್ಲಿಮ್ ಮತ್ತು ಸತ್ತಾರಿ ಜಿಲ್ಲೆಗಳಲ್ಲಿ ಭಾನುವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದೆ.
ಈಶಾನ್ಯ ದಿಕ್ಕಿನಲ್ಲಿ ಮತ್ತಷ್ಟು ಮೋಡ ಕವಿಯಲಿದ್ದು ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಸರಕಾರವು ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನೂ ಈಗಾಗಲೇ ಸಜ್ಜುಗೊಳಿಸಿದೆ. ಇನ್ನು ಮಧ್ಯ ಮಹಾರಾಷ್ಟ್ರ, ಕೇರಳದಲ್ಲಿಯೂ ಮಳೆಯ ಆರ್ಭಟ ಮುಂದುವರಿದಿದ್ದು, ಮುಂದಿನ ಕೆಲ ದಿನಗಳೂ ಕೂಡ ಗಾಳಿ, ಮಿಂಚು, ಗುಡುಗು ಸಹಿತ ಮಳೆಯಾಗಲಿದೆ. ಕೇರಳದ 5 ಜಿಲ್ಲೆಗಳಿಗೆ ನೀಡಿದ್ದ ಹಳದಿ ಅಲರ್ಟ್ ಅನ್ನೂ ಮುಂದುವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.