Rain ಕರಾವಳಿಯಲ್ಲಿ ಮುಂದುವರಿದ ಮಳೆ
Team Udayavani, Oct 2, 2023, 12:17 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ರವಿವಾರ ಉತ್ತಮ ಮಳೆಯಾಗಿದೆ. ಮಂಗಳೂರು ನಗರ ಸಹಿತ ಜಿಲ್ಲೆಯಾದ್ಯಂತ ಬಿಟ್ಟು ಬಿಟ್ಟು ಉತ್ತಮ ಮಳೆ ಸುರಿದಿದೆ.
ಉಡುಪಿ ಜಿಲ್ಲೆಯ ಕಾರ್ಕಳ, ಕುಂದಾಪುರದ ವಿವಿಧ ಕಡೆ ರವಿವಾರ ಸಾಧಾರಣ ಮಳೆಯಾಗಿದೆ. ಉಡುಪಿ, ಮಣಿಪಾಲ, ಪರ್ಕಳ, ಮಲ್ಪೆ ಸುತ್ತಮುತ್ತಲಿನ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಬಿಟ್ಟುಬಿಟ್ಟು ಮಳೆ ಸುರಿದಿದೆ. ರವಿವಾರ ಬಿಸಿಲು ಮೋಡ ಕವಿದ ವಾತಾವರಣ ಹನಿಹನಿ ಮಳೆಯಾಗಿದೆ.
ಕುಂದಾಪುರದ ಹೊಸಾಡು ಗ್ರಾಮದ ಕುಂಬಾರಮಕ್ಕಿ ಬಸ್ ನಿಲ್ದಾಣ ಬಳಿ ಮಳೆಯಿಂದಾಗಿ ರಸ್ತೆ ತುಂಬಾ ನೀರು ನಿಂತು, ವಾಹನ ಸವಾರರು ತೊಂದರೆ ಅನುಭವಿಸಿದರು. ಇಲ್ಲಿ ಚರಂಡಿ ಅವ್ಯವಸ್ಥೆಯಿಂದಾಗಿ ನೀರು ಹರಿದು ಹೋಗಲು ಸಮಸ್ಯೆಯಾಗಿದೆ.
ಮೀನುಗಾರರಿಗೆ ಸೂಚನೆ
ಹವಾಮಾನ ಇಲಾಖೆ ಮುನ್ಸೂಚನೆಯಂತೆ ಯಾವುದೇ ಅಲರ್ಟ್ ಘೋಷಿಸದಿದ್ದರೂ ಮುಂದಿನ ಎರಡು ದಿನಗಳ ಕಾಲ ಕರಾವಳಿಯ ಕೆಲವು ಕಡೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ 45-55ಕಿ.ಮೀ ವೇಗದಲ್ಲಿ 65 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಚಂಡಮಾರುತದ ವಾತಾವರಣ ಇರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಮಂಗಳೂರಿನಲ್ಲಿ 29.5 ಡಿ.ಸೆ. ಗರಿಷ್ಠ ಮತ್ತು 23.6 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.