UV Fusion: ಅಹಿಂಸಾ ಧರ್ಮದ ಪ್ರವರ್ತಕ


Team Udayavani, Oct 2, 2023, 12:21 PM IST

10-fusion-gandhiji

ಮನುಷ್ಯನು ಕಾರ್ಯದಿಂದ ಶ್ರೇಷ್ಠನಾಗುತ್ತಾನೆ, ಹುಟ್ಟಿನಿಂದಲ್ಲ ಎಂದು ಚಾಣಕ್ಯ ಅವರ ಮಾತು ಕೆಲವು ಸಂದರ್ಭಗಳಲ್ಲಿ ಸತ್ಯ. ಈ ಮಾತು ದೇಶಕ್ಕಾಗಿ ತಾನು ಅರ್ಪಣಾ ಮನೋಭಾವ ಬೆಳೆಸಿಕೊಂಡು ಮಾಡುವ ಕಾರ್ಯದಲ್ಲಿ ನಿರತರಾಗಿ, ಶ್ರೇಷ್ಠ ಸಾಧನೆ ಮಾಡಿದ ಮಹಾತ್ಮಾರಿಗೆ ಮಾತ್ರ ಅನ್ವಯಿಸುತ್ತದೆ ಎಂಬುದು ಅಂತೂ ಸತ್ಯ.

ಮಹಾತ್ಮಾ ಗಾಂಧೀಜಿ ಅಹಿಂಸೆ ಮತ್ತು ಶಾಂತಿ ಎಂಬ ಅಸ್ತ್ರದಿಂದಲೇ ಭಾರತಕ್ಕೆ ಸ್ವಾಂತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾತ್ಮಾ ಗಾಂಧಿಯವರ ಜನ್ಮದಿನವನ್ನು ಭಾರತದಾದ್ಯಂತ ಪ್ರತಿವರ್ಷ ಅ.2ರಂದು ಗಾಂಧಿ ಜಯಂತಿ ಅವರ ಜನ್ಮದಿನದ ಸವಿ ನೆನಪಿಗಾಗಿ ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನು ಆಚರಿಸಲಾಗುತ್ತದೆ.

ಆಚರಣೆಯ ಹಿನ್ನೆಲೆ

ತಮ್ಮ ಬದುಕೇ ತಮ್ಮ ಸಂದೇಶ ಎಂದು ಬದುಕಿನ ಪ್ರತಿ ಗಳಿಗೆಯನ್ನೂ ಮೌಲ್ಯದ ಜತೆಯಲ್ಲೇ ಬದುಕಿದ, ಸತ್ಯಕ್ಕಾಗಿ ತಮ್ಮ ಜೀವನವನ್ನೇ ಪ್ರಯೋಗಕ್ಕೊಡ್ಡಿಕೊಂಡ ರಾಷ್ಟ್ರಪಿತ, ಮೋಹನದಾಸ ಕರಮಚಂದ ಗಾಂಧಿ ಹುಟ್ಟಿದ್ದು ಗುಜರಾತಿನ ಪೋರಬಂದರಿನಲ್ಲಿ. 1869 ಅ.2 ರಂದು ಜನಿಸಿದರು.

ವರ್ತಮಾನ ಮತ್ತು ಭವಿಷ್ಯ ದಿನದಲ್ಲಿ ಅಹಿಂಸೆಯಿಂದ ಇರಲು ನಾವು ಮೊದಲು ದೇಹ ಮತ್ತು ಮನಸ್ಸುಗಳನ್ನು ಶುದ್ಧಗೊಳಿಸಬೇಕಾಗಿದೆ. ಆಗ ಮಾತ್ರ ನಮ್ಮಲ್ಲಿ ಕೂಡ ಶುದ್ಧವಾದ ಯೋಚನೆಗಳು ಬರಲು ಸಾಧ್ಯ.ಇದಕ್ಕೆ ವಚನಕಾರ ಬಸವಣ್ಣನವರು ಬಹಿರಂಗ, ಅಂತರಂಗ ಶುದ್ಧಿ ಮಾಡಿಕೊಳ್ಳಲು ಕರೆ ನೀಡುತ್ತಾರೆ. ಮನಸ್ಸಿನ ಕುರಿತು ಸ್ವಾಮಿ ವಿವೇಕಾನಂದರು ಹೇಳುವಂತೆ, ನಮ್ಮ ಮನಸ್ಸು ಪರಿಶುದ್ಧವಾದಾಗ, ಅದೇ ಗುರುವಾಗಿ ಎಲ್ಲವೂ ನಿಂತು ಬೋಧಿಸುತ್ತದೆ.ಹೀಗಾಗಿ ಮೊದಲು ಮನಸ್ಸು ಶುದ್ಧಿಗೆ ಮುಂದಾದಾಗ ಮಾತ್ರ ನಾವು ಗುರುವಾಗಲು ಸಾಧ್ಯ. ನಮ್ಮ ನಾಳೆಯ ದಿನಗಳು ಸುಂದರವಾಗಿರಬೇಕಾದರೆ ನಮ್ಮ ಇಂದಿನ ಯೋಚನೆಗಳು ಸುಂದರವಾಗಿರಬೇಕು ಎಂಬುದು ನಮ್ಮ ಆಶಯ.

ಗಾಂಧೀಜಿ ವಸಾಹತುಶಾಹಿಯನ್ನು ವಿರೋಧಿಸುತ್ತ ರಾಷ್ಟ್ರೀಯತಾವಾದಿಯಾಗಿದ್ದು, ಅವರು ಬ್ರಿಟಿಷ್‌ ಆಳ್ವಿಕೆಯಿಂದ ಭಾರತವನ್ನು ಮುಕ್ತಗೊಳಿಸಲು ಅಹಿಂಸಾತ್ಮಕ ಮಾರ್ಗಗಳನ್ನು ಅನುಸರಿಸಿದರು. ಅಲ್ಲದೇ ಪ್ರಪಂಚದಾದ್ಯಂತ ನಾಗರಿಕ ಹಕ್ಕುಗಳು ಮತ್ತು ಸ್ವಾತಂತ್ರ್ಯಕ್ಕಾಗಿ ವಿವಿಧ ಚಳುವಳಿಗಳಿಗೆ ಪ್ರೇರಕ ಶಕ್ತಿಯಾಗಿದ್ದರು.

ಅಹಿಂಸಾ ಪರಮೋ ಧರ್ಮಃ ಎಂಬುದು ಅಹಿಂಸೆಯನ್ನು ಉತ್ತೇಜಿಸಲು ಬಳಸಲಾಗುವ ಸಂಸ್ಕೃತ ನುಡಿಗಟ್ಟು. ಮಹಾಕಾವ್ಯವಾದ ಮಹಾಭಾರತದಲ್ಲಿ ಈ ನುಡಿಗಟ್ಟು ಕಾಣಿಸಿಕೊಳ್ಳುತ್ತದೆ.ಆದರೆ ಭಾರತಕ್ಕೆ ಸ್ವಾಂತಂತ್ರ್ಯವನ್ನು ಗೆಲ್ಲಲು ಮಹಾತ್ಮಗಾಂಧಿಯವರು ತಮ್ಮ ಅಹಿಂಸಾತ್ಮಕ ಕ್ರಿಯಾವಾದ ಪ್ರಯತ್ನಗಳ ಸಮಯದಲ್ಲಿ ಇದನ್ನು ಬಳಸಿದ್ದರಿಂದ ಇದು ಬಹುಶಃ ಇಂದು ಹೆಚ್ಚು ಪ್ರಸಿದ್ಧವಾಗಿದೆ. ಪದಗುತ್ಛವನ್ನು ವಿಶಿಷ್ಟವಾಗಿ ಅಹಿಂಸೆಯೇ ಅಂತಿಮ ಧರ್ಮ ಎಂದು ಅನುವಾದಿಸಲಾಗುತ್ತದೆ.

ಅಹಿಂಸಾ ಎಂದರೆ ಅಹಿಂಸೆ, ಆದರೆ ಇದು ಯಾವುದೇ ಹಾನಿ ಮಾಡದಿರುವುದು ಎಂದು ಸೂಚಿಸುತ್ತದೆ.ಇದು ದೈಹಿಕ ಹಾನಿಯನ್ನು ಮೀರಿ ಯಾರೊಬ್ಬರ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಅಥವಾ ವ್ಯಕ್ತಿಯ ಬಗ್ಗೆ ಅಸತ್ಯವನ್ನು ಬರೆಯುವುದನ್ನು ಒಳಗೊಂಡಿರುತ್ತದೆ. ಪರಮೋ ಎಂದರೆ ಅಂತಿಮ ಅಥವಾ ಉನ್ನತ ಮತ್ತು ಧರ್ಮ ಎಂದರೆ ಕರ್ತವ್ಯ ಎಂದು ಅಕ್ಷರಶಃ ಅರ್ಥೈಸಬಹುದಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಗಾಂಧೀಜಿಯವರು  ಅಹಿಂಸೆಯ ಮೇಲೆ ಜೀವನವಿಡೀ ಪ್ರಯೋಗ ಮಾಡಿದ ಸಾಧಕ – ಹರಿಕಾರ, ಆತ್ಮ ಸಾಧಕ. ಅಪ್ಪಟ ಕರ್ಮಯೋಗಿ ಎಂದು ಹೇಳಿದರೆ ತಪ್ಪಾಗಲಾರದು. ಹೀಗಾಗಿ ಯಾರೆ ಆಗಲಿ ಸೇವೆಗಾಗಿ ತಮ್ಮ ಬದುಕನ್ನು ತ್ಯಾಗ ಮಾಡಿ, ಅಹಿಂಸೆಯಿಂದ ಹೋರಾಡುವ ಎಲ್ಲಾ ಹೋರಾಟಗಾರರಿಗೆ ನಾವು ತಲೆಬಾಗಬೇಕು.

ದೇಶದ ಕುರಿತು ಅವರಿಗಿರುವ ಸಮರ್ಪಣಾ ಭಾವ ಮತ್ತು ಅವರ ಧೈರ್ಯವನ್ನು ನಾವೆಂದಿಗೂ ಮರೆಯಬಾರದು ಹಾಗೂ ಅವರನ್ನು ಗೌರವದಿಂದ ಕಾಣಬೇಕು. ಸತ್ಯ, ಶಾಂತಿ, ಅಹಿಂಸೆ ಇವು ಗಾಂಧೀಜಿಯವರು ಪಾಲಿಸಿದ ತತ್ವಗಳಷ್ಟೇ ಅಲ್ಲ, ಅವರ ಬದುಕು ಕೂಡ.ಅವರ ಜಯಂತಿಯಂದು ಬಾಪೂಜಿಯನ್ನು ಗೌರವದಿಂದ ಸ್ಮರಿಸೋಣ.

ಅಂತಾರಾಷ್ಟ್ರೀಯ ಅಹಿಂಸಾ ದಿನ

ಭಾರತೀಯ ಸ್ವಾಂತಂತ್ರ್ಯ ಚಳುವಳಿಯ ನಾಯಕ ಮತ್ತು ಅಹಿಂಸೆಯ ತತ್ವಶಾಸ್ತ್ರ ಮತ್ತು ತಂತ್ರದ ಪ್ರವರ್ತಕ ಮಹಾತ್ಮಾ ಗಾಂಧಿಯವರ ಜನ್ಮದಿನವಾದ ಅ.2 ರಂದು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನು ಆಚರಿಸಲಾಗುತ್ತದೆ. ಸಾರ್ವಜನಿಕ ಜಾಗೃತಿ ಮತ್ತು ಶಿಕ್ಷಣದ ಮೂಲಕ ಅಹಿಂಸೆಯ ಸಂದೇಶವನ್ನು ಹರಡಲು ಈ ದಿನವನ್ನು ಆಚರಿಸಲಾಗುತ್ತದೆ.

2007 ರಲ್ಲಿ ವಿಶ್ವಸಂಸ್ಥೆಯ ಜನರಲ್‌ ಅಸೆಂಬ್ಲಿಯು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನು ಪ್ರಾರಂಭಿಸಲು ನಿರ್ಣಯವನ್ನು ಮಂಡಿಸಿತು. ಈ ದಿನವು ಶಿಕ್ಷಣ ಮತ್ತು ಸಾರ್ವಜನಿಕ ಜಾಗೃತಿಯ ಮೂಲಕ ಅಹಿಂಸೆಯ ಅರ್ಥವನ್ನು ವಿಸ್ತರಿಸಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಗಾಂಧಿ ಮತ್ತು ಅವರ ತತ್ವಶಾಸ್ತ್ರದ ಸಾರ್ವತ್ರಿಕ ಗೌರವವನ್ನು ಪ್ರತಿಬಿಂಬಿಸುತ್ತದೆ. ಮೊದಲ ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನು ಅ. 2, 2007 ರಂದು ಆಚರಿಸಲಾಯಿತು.

-ಬಸವರಾಜ ಎಂ. ಯರಗುಪ್ಪಿ

ಶಿರಹಟ್ಟಿ

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-uv-fusion

UV Fusion: ಜೀವಂತಿಕೆ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

18-uv-fusion

UV Fusion: ನಿಸ್ವಾರ್ಥ ಜೀವ

16-pongal

Pongal: ಹೀಗೊಂದು ಪೊಂಗಲ್‌ ಪ್ರಯೋಗ

15-uv-fusion

Pendulum Wall Clock: ನಮ್ಮ ಮನೆಯಲ್ಲಿ ಒಂದು ಅದ್ಭುತ ಇದೆ ಗೊತ್ತಾ?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.