Nalin Kumar Kateel: ಶಿವಮೊಗ್ಗ ಗಲಾಟೆ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ: ಕಟೀಲ್ ಹೇಳಿಕೆ
Team Udayavani, Oct 2, 2023, 1:36 PM IST
ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಹಿನ್ನೆಲೆ ಗಲಾಟೆ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಶಿವಮೊಗ್ಗ ಘಟನೆ ಕುರಿತು ಹೇಳಿಕೆ ನೀಡಿದ ಕಟೀಲ್ ಶಿವಮೊಗ್ಗದಲ್ಲಿ ನಡೆದ ಘಟನೆಯನ್ನು ಖಂಡಿಸಿದ ಅವರು ಗಣೇಶ ಚತುರ್ಥಿ ಸಂದರ್ಭದಲ್ಲಿ ಯಾವುದೇ ಗಲಾಟೆ ನಡೆಯದೇ ಶಾಂತಿಯುತವಾಗಿ ನಡೆದಿದೆ, ಆದರೆ ಈದ್ ಮೆರವಣಿಗೆಯಲ್ಲಿ ಹಿಂದೂಗಳ ಅಂಗಡಿ, ಮನೆಗಳ ಮೇಲೆ ದಾಳಿಯಾಗಿದೆ ಇದರ ಈ ಗಲಾಟೆ ಹಿಂದೆ ಮತಾಂಧ ಶಕ್ತಿಗಳ ಕೈವಾಡ ಇದೆ ಎಂದು ಹೇಳಿದರು.
ಈ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಈ ರೀತಿ ಆಗಿದೆ ಎಂದು ಹೇಳಿದ ಅವರು ರಾಜ್ಯದಲ್ಲಿ ಪಾಕಿಸ್ತಾನ ಧ್ವಜ, ಪಾಕ್ ಪರ ಘೋಷಣೆ ಕೂಗುತ್ತಾ ಇದ್ದಾರೆ, ಶಿವಮೊಗ್ಗ ಜಿಲ್ಲೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ಕಾಣ್ತಾ ಇವೆ, ಮಂಗಳೂರು ಕುಕ್ಕರ್ ಬಾಂಬ್ ನಲ್ಲೂ ಶಿವಮೊಗ್ಗದ ನಂಟಿದೆ, ಭಟ್ಕಳ ಬ್ರದರ್ಸ್ ರೀತಿಯಲ್ಲಿ ತೀರ್ಥಹಳ್ಳಿ ಬ್ರದರ್ಸ್ ಮೂಲಕ ಚಟುವಟಿಕೆ ಆಗುತ್ತಿದೆ. ಸರ್ಕಾರ ಕಠಿಣ ಕ್ರಮ ಕೈಗೊಳ್ಳದೇ ಶಾಂತಿ ಸುವ್ಯವಸ್ಥೆ ವಿಫಲವಾಗಿದೆ ಎಂದು ಸರಕಾರದ ವಿರುದ್ಧ ಕಿಡಿಕಾರಿದರು.
ಈ ಘಟನೆಯಲ್ಲಿ ಆತಂಕವಾದದ ಸಾಧ್ಯತೆ ಇದೆಯಾ ಅಂತ ತನಿಖೆ ಮಾಡಬೇಕು, ಇದರ ಪೂರ್ಣ ತನಿಖೆ ಆಗಬೇಕು, ಇದೊಂದು ಸರ್ಕಾರದ ಪೂರ್ಣ ವೈಫಲ್ಯವಾಗಿದೆ ಎಂದರು.
ಸಿಎಂ ಮತಬೇಟೆಗಾಗಿ ಇದರ ವಿರುದ್ದ ಕ್ರಮ ಕೈಗೊಳ್ತಾ ಇಲ್ಲ, ಹರ್ಷ ಮತ್ತು ಪ್ರವೀಣ್ ಹತ್ಯೆ ಬಳಿಕ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿತ್ತು ಆದರೆ ಈ ಸರ್ಕಾರ ಸಣ್ಣ ಮಟ್ಟದ ರಾಜಕಾರಣ ಮಾಡ್ತಾ ಇದೆ. ತುಷ್ಟೀಕರಣ ನೀತಿ ಮೂಲಕ ಮತಾಂಧ ಶಕ್ತಿಗಳಿಗೆ ಮತ್ತೆ ಧೈರ್ಯ ಬಂದಿದೆ. ಇಂಡಿಯಾ ಒಕ್ಕೂಟ ಹಾಗೂ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: Shimoga ಗಲಭೆ ನಡೆಸಲು ಮೊದಲೇ ಪ್ಲ್ಯಾನ್; ಓಮಿನಿಯಲ್ಲಿ ಬಂದಿದ್ದರು 15 ಕಿಡಿಗೇಡಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ
Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ
Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ
MUST WATCH
ಹೊಸ ಸೇರ್ಪಡೆ
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Rakesh Adiga: ನಾನು ಮಿಡಲ್ ಕ್ಲಾಸ್ ಹುಡುಗ ಮರ್ಯಾದೆ ಉಳಿಸಿ!
Thekkatte: ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿದೆ ಗೋ ಕಳವು ಪ್ರಕರಣ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.