ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಗಾಂಧಿ ಕನಸಿನ ಗ್ರಾಮ ನ್ಯಾಯಾಲಯ

Team Udayavani, Oct 3, 2023, 12:04 AM IST

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮಗಳಲ್ಲಿ ಇರುವ ವ್ಯಾಜ್ಯಗಳು ಗ್ರಾಮೀಣ ಮಟ್ಟ ದಲ್ಲೇ ಪರಿಹಾರವಾಗಬೇಕು ಎಂಬ ದೃಷ್ಟಿಯಿಂದ ಗ್ರಾಮ ನ್ಯಾಯಾಲಯ ಸ್ಥಾಪಿಸಲು ಸರಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್‌ರಾಜ್‌ ಇಲಾಖೆ ವತಿಯಿಂದ ಸೋಮವಾರ ಆಯೋಜಿಸಿದ್ದ 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಮತ್ತು ಸ್ವತ್ಛ ಸರ್ವೇಕ್ಷಣ ಗ್ರಾಮೀಣ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಅಬ್ದುಲ್‌ ನಜೀರ್‌ ಸಾಬ್‌ ಅವ ರಿದ್ದಾಗ ಗ್ರಾಮ ನ್ಯಾಯಾಲಯಗಳ ಬಗ್ಗೆ ಪ್ರಸ್ತಾವಿಸಿದ್ದರು. ಈಗ ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ಅವರೂ ಗ್ರಾಮ ನ್ಯಾಯಾಲಯಗಳ ಸ್ಥಾಪನೆ ಬಗ್ಗೆ ಪ್ರಸ್ತಾವಿಸುತ್ತಲೇ ಇದ್ದಾರೆ. ಗ್ರಾಮ ಮಟ್ಟದ ವ್ಯಾಜ್ಯಗಳು ಸ್ಥಳೀಯ ಮಟ್ಟದಲ್ಲೇ ಬಗೆಹರಿಯಬೇಕು ಎಂಬ ಆಶಯ ಸರಕಾರದ್ದೂ ಆಗಿದೆ. ಹೀಗಾಗಿ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗಿದೆ ಎಂದರು.

ಏನಿದು ಗ್ರಾಮ ನ್ಯಾಯಾಲಯ?
2008ರಲ್ಲಿ ರಾಷ್ಟ್ರೀಯ ಕಾನೂನು ಆಯೋಗವು ಗ್ರಾಮ ನ್ಯಾಯಾ ಲಯಗಳನ್ನು ಸ್ಥಾಪಿಸುವಂತೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿತ್ತು. ಅದರಂತೆ ಕಾಯ್ದೆಯೊಂದನ್ನು ತರ ಲಾಗಿದ್ದು, ರಾಷ್ಟ್ರಪತಿಗಳ ಅಂಕಿತ ಬೀಳಬೇಕಿದೆ. ರಾಜ್ಯದಲ್ಲಿ 2 ಅಥವಾ 3 ಗ್ರಾ.ಪಂ.ಗೊಂದು ಗ್ರಾಮ ನ್ಯಾಯಾಲಯ ಸ್ಥಾಪಿಸುವ ಪ್ರಸ್ತಾವನೆ ಇದೆ. ಈ ಪ್ರಕಾರ ಹಂತ ಹಂತವಾಗಿ ಸರಿಸುಮಾರು 2 ಸಾವಿರ ಗ್ರಾಮ ನ್ಯಾಯಾಲಯಗಳು ರಚನೆಯಾಗ ಲಿದ್ದು, ಸ್ಥಳೀಯ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಗ್ರಾಮಸ್ಥರು ನಗರಗಳಿಗೆ ಅಲೆದಾಡುವುದು ತಪ್ಪ ಬೇಕು, ತ್ವರಿತಗತಿಯಲ್ಲಿ ನ್ಯಾಯ ಸಿಗಬೇಕು ಎಂಬುದು ಇದರ ಉದ್ದೇಶ. ಯಾವುದೇ ಪ್ರಕರಣವನ್ನು 3ಕ್ಕಿಂತ ಹೆಚ್ಚು ಬಾರಿ ಮುಂದೂಡ ಬಾರದು, 6 ತಿಂಗಳೊಳಗಾಗಿ ಇತ್ಯರ್ಥ ಪಡಿಸಬೇಕು, ಈ ಮೂಲಕ ಗ್ರಾಮ ಗಳನ್ನು ವ್ಯಾಜ್ಯ ಮುಕ್ತ ಮಾಡಬೇಕು ಎಂಬ ದೂರದೃಷ್ಟಿಯನ್ನು ಇರಿಸಿಕೊಳ್ಳಲಾಗಿದೆ.

ಪಂಚತಂತ್ರ-2, ಪಂಚಮಿತ್ರ ಸಹಾಯವಾಣಿ
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿ, ಪಂಚಾಯತ್‌ಗಳಿಗೆ ಹೊಣೆಗಾರಿಕೆ ತರುವ ಸಲುವಾಗಿ ಪಂಚತಂತ್ರ-2 ತಂತ್ರಾಂಶ ಅಭಿವೃದ್ಧಿ ಪಡಿಸಿದ್ದು, ಸಂಪನ್ಮೂಲ ಕ್ರೋಡೀಕರಣಕ್ಕೂ ಒತ್ತು ನೀಡಲಾಗುತ್ತಿದೆ. ಎಲ್ಲರ ಸಲಹೆ ಪಡೆದು ಪಂಚಾಯತ್‌ ವ್ಯವಸ್ಥೆಯನ್ನು ಬಲಗೊಳಿಸಲಾಗುತ್ತಿದೆ. ಪಂಚಾ ಯತ್‌ರಾಜ್‌ ಕಾಯ್ದೆ ಜಾರಿಗೆ ಬಂದು 30 ವರ್ಷಗಳು ಕಳೆದಿರುವುದರಿಂದ ಮುಂದಿನ ತಿಂಗಳು ಇದರ ಸಂಭ್ರಮಾ ಚರಣೆ ನಡೆಸಲಾಗುತ್ತದೆ. ಪಿಡಿಒಗಳ ವರ್ಗಾವಣೆಗೂ ಕೌನ್ಸೆಲಿಂಗ್‌ ಪದ್ಧತಿ ಅನುಸರಿಸಲು ಸರಕಾರ ಇರಾದೆ ಹೊಂದಿದೆ. ಪಂಚಾಯತ್‌ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳಾಗಿ ಉನ್ನತ ಮಟ್ಟಕ್ಕೇರಿಸಲಾಗುತ್ತಿದೆ. ಇದೆಲ್ಲದರೊಂದಿಗೆ ಗ್ರಾಮದ ಸಮಸ್ಯೆಗಳನ್ನು ಪರಿಹರಿಸಲು ಪಂಚಮಿತ್ರ ಸಹಾಯವಾಣಿಯನ್ನು 2 ತಿಂಗಳಲ್ಲಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳ ಲಾಗುತ್ತಿದ್ದು, ಇದರಿಂದ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.