ನ್ಯಾಯಾಂಗ ಸೇವೆಯಲ್ಲಿ ಶೇ.10 ಮೀಸಲು- EWS ಗೆ ಬಿಹಾರ ಸರ್ಕಾರ ಕೊಡುಗೆ

Team Udayavani, Oct 3, 2023, 9:49 PM IST

LAW

ಪಾಟ್ನಾ/ನವದೆಹಲಿ: ಜಾತಿ ಗಣತಿ ವರದಿ ಪ್ರಕಟಿಸಿದ ಬೆನ್ನಲ್ಲಿಯೇ ಮಂಗಳವಾರ ಬಿಹಾರ ಸರ್ಕಾರ ನ್ಯಾಯಾಂಗ ಸೇವೆಯಲ್ಲಿ, ಸರ್ಕಾರಿ ಸ್ವಾಮ್ಯದ ಕಾನೂನು ಕಾಲೇಜು, ವಿವಿಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗ (ಇಡಬ್ಲೂಎಸ್‌)ಕ್ಕೆ ಶೇ.10 ಮೀಸಲು ನಿರ್ಧಾರ ಪ್ರಕಟಿಸಿದೆ. ಸಿಎಂ ನಿತೀಶ್‌ ಕುಮಾರ್‌ ನೇತೃತ್ವದಲ್ಲಿ ಮಂಗಳವಾರ ನಡೆದ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಶೀಘ್ರದಲ್ಲಿಯೇ ಆದೇಶ ಹೊರಡಿಸಲೂ ತೀರ್ಮಾನಿಸಲಾಗಿದೆ.

6ರಂದು ವಿಚಾರಣೆ:
ಬಿಹಾರ ಸರ್ಕಾರ ಅ.2ರಂದು ಜಾತಿ ಗಣತಿ ವರದಿ ಪ್ರಕಟಿಸಲು ಪಾಟ್ನಾ ಹೈಕೋರ್ಟ್‌ ಅ.1ರಂದು ನೀಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್‌ ಒಪ್ಪಿದೆ. ನ್ಯಾ.ಸಂಜೀವ್‌ ಖನ್ನಾ ಮತ್ತು ನ್ಯಾ.ಎಸ್‌.ವಿ.ಎನ್‌.ಭಟ್ಟಿ ಅವರನ್ನೊಳಗೊಂಡ ನ್ಯಾಯಪೀಠ ಸದರಿ ಅರ್ಜಿಯನ್ನು ಅ.6ರಂದು ವಿಚಾರಣೆ ನಡೆಸುವುದಾಗಿ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾಗೆ ತಿಳಿಸಿದೆ.

ಚಿರಾಗ್‌ ತಿರಸ್ಕಾರ:
ಬಿಹಾರ ಸರ್ಕಾರ ನಡೆಸಿದ ಜಾತಿ ಗಣತಿ ವರದಿಯನ್ನು ಎಲ್‌ಜೆಪಿ (ರಾಂ ವಿಲಾಸ್‌) ಬಣದ ನಾಯಕ ಚಿರಾಗ್‌ ಪಾಸ್ವಾನ್‌ ತಿರಸ್ಕರಿಸಿದ್ದಾರೆ. ಇದೊಂದು ರಾಜಕೀಯ ಕುತಂತ್ರದಿಂದ ಕೂಡಿದ ವರದಿ ಎಂದು ಅವರು ಟೀಕಿಸಿದ್ದಾರೆ. ಅದರಲ್ಲಿ ಇರುವ ಸಾಂಖೀಕ ಮಾಹಿತಿಗಳು ಕೇವಲ ಒಂದು ಜಾತಿಯ ಅನುಕೂಲಕ್ಕಾಗಿ ಮಾಡಿದಂತೆ ಇದೆ ಎಂದು ಹೇಳಿದ್ದಾರೆ.

ಉ.ಪ್ರ.ದಲ್ಲೂ ಒತ್ತಾಯ:
ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಆಗುತ್ತಿದ್ದಂತೆಯೇ ಉತ್ತರ ಪ್ರದೇಶದಲ್ಲಿಯೂ ಜಾತಿ ಗಣತಿ ನಡೆಸಬೇಕು ಎಂಬ ಒತ್ತಾಯ ಜೋರಾಗಿದೆ. ಎಸ್‌ಪಿ, ಬಿಎಸ್‌ಪಿ, ಕಾಂಗ್ರೆಸ್‌, ಬಿಜೆಪಿಯ ಮಿತ್ರ ಪಕ್ಷ ಅಪ್ನಾದಳ (ಸೋನೆಲಾಲ್‌) ಈ ಒತ್ತಾಯ ಮಾಡಿವೆ. ಒಬಿಸಿಗೆ ನ್ಯಾಯ ಒದಗಿಸಲು ಇದುವೇ ಅತ್ಯುತ್ತಮ ಮಾರ್ಗ ಎಂದು ಮಾಯಾವತಿ ಟ್ವೀಟ್‌ ಮಾಡಿದ್ದಾರೆ.

ಹೊಸ ಪದ ಸೃಷ್ಟಿ:
ಬಿಜೆಪಿ ರಾಜಕೀಯ ಬಿಟ್ಟು ರಾಷ್ಟ್ರವ್ಯಾಪಿ ಜಾತಿ ಗಣತಿ ನಡೆಸಬೇಕು ಎಂದು ಒತ್ತಾಯಿಸಿರುವ ಎಸ್‌ಪಿ ಅಧ್ಯಕ್ಷ ಅಖೀಲೇಶ್‌ ಯಾದವ್‌, “ಪಿಡಿಎ’ ಪಿಚಾx (ಹಿಂದುಳಿದ ವರ್ಗ), ದಲಿತ (ತುಳಿತಕ್ಕೆ ಒಳಗಾದ), ಅಲ್ಪಸಂಖ್ಯಾತ ಎಂಬ ಹೊಸ ಪದಪುಂಜವನ್ನೂ ಅವರು ಸೃಷ್ಟಿಸಿದ್ದಾರೆ.

ರಾಹುಲ್‌ ಸಲಹೆಗೆ ಅಭಿಷೇಕ್‌ ಅತೃಪ್ತಿ
ಜನರ ಸಂಖ್ಯೆಯ ಆಧಾರದಲ್ಲಿ ಮೀಸಲು ನೀಡಬೇಕು ಎಂಬ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಸಲಹೆಗೆ ಅವರ ಪಕ್ಷದಿಂದಲೇ ಅತೃಪ್ತಿ ವ್ಯಕ್ತವಾಗಿದೆ. ಹಿರಿಯ ನ್ಯಾಯವಾದಿ, ಕಾಂಗ್ರೆಸ್‌ ನಾಯಕ ಅಭಿಷೇಕ್‌ ಮನು ಸಿಂಘ್ವಿ ಟ್ವೀಟ್‌ ಮಾಡಿ “ಇಂಥ ಕ್ರಮಗಳಿಂದ ಋಣಾತ್ಮಕ ಸಂದೇಶ ರವಾನೆಯಾದೀತು. ಸಮಾನ ರೀತಿಯಲ್ಲಿ ಅವಕಾಶ ಎನ್ನುವುದು ಸರಿಯಾದರೂ ಕೂಡ ಅದರ ಫ‌ಲಿತಾಂಶ ಸಮಾನವಾಗಿ ಇರುವುದಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಅವಕಾಶ ನೀಡಬೇಕು ಎಂದು ವಾದಿಸುವವರು ಅಂತಿಮವಾಗಿ ಅದರಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ಗಮನಿಸಬೇಕು. ಅಂತಿಮವಾಗಿ ಅದು ಹೆಚ್ಚು ಜನರು ಒಲವು ಹೊಂದಿರುವವರ ಪರ ನಿರ್ಣಯವಾದೀತು’ ಎಂದು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.