Karnataka: ಜಾತಿ ಗಣತಿ ವರದಿ ಬಿಡುಗಡೆಗೆ ರಾಜ್ಯದಲ್ಲೂ ಹೆಚ್ಚಿದ ಕೂಗು

Team Udayavani, Oct 3, 2023, 11:22 PM IST

census

ಬಿಹಾರ ರಾಜ್ಯದ ರೀತಿ ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆಗೆ ಕೂಗು ಹೆಚ್ಚಾಗಿದೆ. ಹಿಂದುಳಿದ, ಶೋಷಿತರೂ ಸೇರಿ ಎಲ್ಲ ವರ್ಗಗಳ ಉನ್ನತಿಗೆ ಜಾತಿ ಗಣತಿ ವರದಿ ಸಹಾಯ ಮಾಡುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರವೂ ಈಗಾಗಲೇ ಸಿದ್ಧವಾಗಿರುವ ಹಿಂದುಳಿದ ವರ್ಗಗಳ ಜಾತಿ ಗಣತಿ ವರದಿಯನ್ನು ಬಹಿರಂಗಪಡಿಸುವ ದಿಟ್ಟತನ ತೋರಬೇಕಿದೆ ಎಂಬ ಆಗ್ರಹ ಕೇಳಿಬಂದಿದೆ.

ಸರಕಾರ ಗಟ್ಟಿತನ ತೋರಬೇಕಿದೆ: ಹರಿಪ್ರಸಾದ್‌
ಬೆಂಗಳೂರು : ಜಾತಿ ಗಣತಿ ವರದಿಯನ್ನು ಬಹಿರಂಗಪಡಿಸುವ ದಿಟ್ಟತನವನ್ನು ರಾಜ್ಯ ಸರಕಾರ ತೋರಬೇಕಿದೆ ಎಂದು ಕಾಂಗ್ರೆಸ್‌ ಮುಖಂಡ ಹಾಗೂ ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ಕಾರ್ಪ್‌ನಲ್ಲಿ ಹೇಳಿಕೆ ನೀಡಿರುವ ಅವರು, ಜಾತಿ ಗಣತಿ ಬಹಿರಂಗಪಡಿಸುವ ಕುರಿತು ಹಾಗೂ ಹಿಂದುಳಿದ ವರ್ಗಗಳಿಗೆ ಆಗಿರುವ ಅನ್ಯಾಯದ ವಿರುದ್ಧ ನಮ್ಮ ನಾಯಕರಾದ ರಾಹುಲ್‌ ಗಾಂಧಿಯವರು ಧ್ವನಿ ಎತ್ತಿದ್ದಾರೆ. ಬಿಹಾರ ಸರಕಾರದಂತೆ ಕರ್ನಾಟಕ ಸರಕಾರವೂ ರಾಜ್ಯದಲ್ಲಿ ಈಗಾಗಲೇ ಸಿದ್ಧವಾಗಿರುವ ಹಿಂದುಳಿದ ವರ್ಗಗಳ ಜಾತಿ ವರದಿಯನ್ನು ಬಹಿರಂಗಪಡಿಸುವ ದಿಟ್ಟತನ ತೋರಬೇಕಿದೆ. ಇಂಡಿಯಾ ಮೈತ್ರಿಕೂಟದ ಆಡಳಿತವಿರುವ ಬಿಹಾರ ರಾಜ್ಯದಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡಿದ ಸರಕಾರದ ಐತಿಹಾಸಿಕ ನಡೆ ಅಭಿನಂದನೀಯ. ಹಿಂದುಳಿದ, ಶೋಷಿತರೂ ಸೇರಿ ಎಲ್ಲ ವರ್ಗಗಳ ಉನ್ನತಿ ಹಾಗೂ ಅಭಿವೃದ್ಧಿಗೆ ಜಾತಿ ಗಣತಿ ವರದಿ ಸಹಾಯ ಮಾಡುತ್ತದೆ ಎಂಬ ವೈಜ್ಞಾನಿಕ ಧೋರಣೆ ಕಾಂಗ್ರೆಸ್‌ ಪಕ್ಷದ್ದಾಗಿದೆ ಎಂದು ಹರಿಪ್ರಸಾದ್‌ ಹೇಳಿದ್ದಾರೆ.

ಜಾತಿ ಗಣತಿ ವರದಿ ತಕ್ಷಣ ಸ್ವೀಕರಿಸಬೇಕು: ಚಂದ್ರು
ಬೆಂಗಳೂರು: ರಾಜ್ಯದಲ್ಲಿ ನಡೆಸಲಾಗಿರುವ ಜಾತಿ ಗಣತಿ ವರದಿಯನ್ನು ಸರಕಾರ ತತ್‌ಕ್ಷಣವೇ ಸ್ವೀಕರಿಸಬೇಕು. ಇಲ್ಲದೆ ಹೋದಲ್ಲಿ ದೊಡ್ಡ ಮಟ್ಟದಲ್ಲಿ ಜನಾಂದೋಲನ ನಡೆಸಲಾಗುವುದು ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರೇ ಜಾತಿ ಗಣತಿ ನಡೆಸಿದ್ದು ಇದೀಗ ಮತ್ತೆ ಅವರೇ ಮುಖ್ಯಮಂತ್ರಿಯಾಗಿದ್ದು ಜಾತಿ ಗಣತಿ ವರದಿಯನ್ನು ತಡ ಮಾಡದೇ ಸ್ವೀಕರಿಸಬೇಕು ಎಂದು ಆಗ್ರಹಿಸಿದ್ದಾರೆ. ಈಗಾಗಲೇ ಮೂರು ಬಾರಿ ನವೆಂಬರ್‌ ಒಳಗೆ ಜಾತಿ ಗಣತಿಯ ವರದಿ ಸ್ವೀಕರಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ವರದಿ ಸ್ವೀಕರಿಸುವಂತೆ ಪತ್ರ ಬರೆದು ಆಗ್ರಹಿಸಲಾಗುವುದು. ಒಂದು ವೇಳೆ ವರದಿ ಸ್ವೀಕರಿಸದೇ ಹೋದರೆ ಆಪ್‌ನಿಂದ ಹೋರಾಟ ನಡೆಸಲಾಗುವುದು ಎಂದರು.

ದೇಶದಲ್ಲೂ ಜಾತಿ ಗಣತಿ ನಡೆಸಲಿ: ಸ್ವಾಮೀಜಿ
ದಾವಣಗೆರೆ: ದೇಶದಲ್ಲಿ ಬ್ರಿಟಿಷರ ಆಡಳಿತಾವಧಿಯಲ್ಲಿ ಮಾತ್ರ ಜಾತಿ ಗಣತಿ ನಡೆದಿತ್ತು. ಎಲ್ಲರಿಗೂ ಸಮಾನ ಸೌಲಭ್ಯ ದೊರಕಲು ಕೇಂದ್ರ ಸರಕಾರ ಸಹ ಜಾತಿ ಗಣತಿ ನಡೆಸಬೇಕು ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಜಾತಿಗಣತಿಯನ್ನು ಯಾವುದೋ ಒಂದು ಸಮುದಾಯದವನ್ನು ಗುರಿಯಾಗಿಟ್ಟುಕೊಂಡು ಮತ್ತು ದುರುದ್ದೇಶದಿಂದ ನಡೆಸಬಾರದು. ಸಂವಿಧಾನದ ಆಶಯದಂತೆ ವೈಜ್ಞಾನಿಕವಾಗಿ ದೇಶದ ಅಭಿವೃದ್ಧಿಗೆ ಪೂರಕ ಮತ್ತು ಎಲ್ಲ ಸಮುದಾಯಗಳಿಗೆ ಅಗತ್ಯ ಸೌಲಭ್ಯ ದೊರಕಿಸುವಂತೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನಡೆಸಬೇಕು ಎಂದರು.

ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾಗಿದೆ. ನಮ್ಮ ರಾಜ್ಯದಲ್ಲೂ ಜಾತಿ ಗಣತಿ ವರದಿ ಬಿಡುಗಡೆಯಾಗಬೇಕು. ಆಗ ಯಾವ ಜಾತಿಗಳ ಸಂಖ್ಯೆ ಎಷ್ಟಿದೆ ಎಂದು ಗೊತ್ತಾಗುತ್ತದೆ. ಕೂಡಲೇ ಜಾತಿ ಗಣತಿ ವರದಿ ಬಿಡುಗಡೆ ಮಾಡಬೇಕು. ಸಿಎಂ ಸಿದ್ದರಾಮಯ್ಯನವರಿಗೆ ನಾನು ಈ ಬಗ್ಗೆ ಆಗ್ರಹ ಮಾಡುತ್ತೇನೆ.
– ಬಸವರಾಜ ರಾಯರಡ್ಡಿ, ಮಾಜಿ ಸಚಿವ

ಜಾತಿ ಗಣತಿ ವರದಿ ಸಲ್ಲಿಕೆಗೆ ಕೇಳಿದ್ದೇವೆ: ಸಿದ್ದರಾಮಯ್ಯ 
ಬೆಳಗಾವಿ: ಹಿಂದುಳಿದ ವರ್ಗಗಳ ಆಯೋಗಕ್ಕೆ ಜಾತಿ ಗಣತಿ ವರದಿ ಸಲ್ಲಿಸಲು ತಿಳಿಸಲಾಗಿದ್ದು, ವರದಿ ನೀಡಿದರೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜು ಅವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದು, ವರದಿ ತಯಾರು ಮಾಡಿದ್ದರು. ವರದಿ ಸಲ್ಲಿಸಲು ಹೋದಾಗ ಅದನ್ನು ಅವರು ಸ್ವೀಕರಿಸಲಿಲ್ಲ. ಆಗಿನ ಕಾರ್ಯದರ್ಶಿಗಳು ವರದಿಗೆ ಸಹಿ ಮಾಡಿಲ್ಲ. ಈಗಿನ ಕಾರ್ಯದರ್ಶಿಗಳ ಬಳಿ ಸಹಿ ಮಾಡಿಸಿ ವರದಿ ಸಲ್ಲಿಸಬೇಕು. ಜಾತಿ ಗಣತಿ ಹಾಗೂ ಸಾಮಾಜಿಕ, ಆರ್ಥಿಕ ಸಮೀಕ್ಷೆ ಮಾಡಬೇಕೆಂದು ನಾನೇ ಹಿಂದೆ ಆದೇಶ ಮಾಡಿದ್ದು, ಆಗ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು.

ಈ ಹಿಂದಿನ ಸಲ ವರದಿ ಪೂರ್ಣಗೊಂಡಿರಲಿಲ್ಲ
ನಮ್ಮ ಸರಕಾರದ ಅವಧಿಯಲ್ಲಿ ವರದಿ ಪೂರ್ಣವಾಗಿರಲಿಲ್ಲ. ಅನಂತರ ಸಮ್ಮಿಶ್ರ ಸರಕಾರ ಇರುವಾಗ ಅಂದಿನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿ ಪುಟ್ಟರಂಗಶೆಟ್ಟಿ ಇದ್ದರು. ಆಗ ವರದಿಯನ್ನು ಪಡೆಯಲಿಲ್ಲ. ಅನಂತರ ಆಯೋಗಕ್ಕೆ ಜಯಪ್ರಕಾಶ್‌ ಹೆಗ್ಡೆ ಅವರನ್ನು ಬಿಜೆಪಿ ಸರಕಾರ ನೇಮಿಸಿತ್ತು. ಅವರಿಗೆ ವರದಿ ಸಲ್ಲಿಸುವಂತೆ ತಿಳಿಸಲಾಗಿದೆ. ಆದರೆ ಇನ್ನೂ ನೀಡಿಲ್ಲ ಎಂದರು.

ಟಾಪ್ ನ್ಯೂಸ್

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

1-nikil

Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪ‌ಲಾಯನ ಮಾಡಲ್ಲ: ನಿಖಿಲ್‌

renukaacharya

BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

vijayen

BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫ‌ಲ: ವಿಜಯೇಂದ್ರ ಮೇಲೂ ಪರಿಣಾಮ?

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.