Sagara ಶೈಲೇಶಚಂದ್ರ ವರದಿಯ ಸಂಪೂರ್ಣ ಅನುಷ್ಠಾನಕ್ಕೆ ಗ್ರಾಮೀಣ ಅಂಚೆ ನೌಕರರ ಒತ್ತಾಯ
Team Udayavani, Oct 4, 2023, 4:09 PM IST
ಸಾಗರ: ಗ್ರಾಮೀಣ ಅಂಚೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮತ್ತು ಶೈಲೇಶಚಂದ್ರ ವರದಿಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಬುಧವಾರ ಅಂಚೆ ನೌಕರರ ಸಂಘದ ವತಿಯಿಂದ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಶಿವಮೊಗ್ಗ ವಿಭಾಗದ ಉಪಾಧ್ಯಕ್ಷ ಮಂಜಪ್ಪ ಕೆ.ಎಲ್., ಅಂಚೆ ನೌಕರರನ್ನು ಕೇಂದ್ರ ಸರ್ಕಾರ ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದೆ. ದುಡಿಮೆಗೆ ತಕ್ಕ ಸಂಬಳ ಕೊಡದೆ ಸತಾಯಿಸುತ್ತಿದೆ. ಗ್ರಾಮೀಣ ಅಂಚೆ ನೌಕರರಿಗೆ 8 ಗಂಟೆಗಳ ಕೆಲಸ ನೀಡುವ ಜೊತೆಗೆ ಪಿಂಚಣಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ನೀಡಬೇಕು. ಸೇವಾ ಹಿರಿತನದ ಆಧಾರದಲ್ಲಿ ಜಿಡಿಎಸ್ ನೌಕರರಿಗೆ ವಿಶೇಷ ಇಂಕ್ರಿಮೆಂಟ್ ನೀಡಬೇಕು ಎಂದು ಒತ್ತಾಯಿಸಿದರು.
ಇತ್ತೀಚಿನ ದಿನಗಳಲ್ಲಿ ಅಂಚೆ ನೌಕರರಿಗೆ ಅವೈಜ್ಞಾನಿಕ ಗುರಿಯನ್ನು ನಿಗದಿಪಡಿಸಲಾಗುತ್ತಿದ್ದು ಇದನ್ನು ತಕ್ಷಣ ನಿಲ್ಲಿಸಬೇಕು. ಗುಂಪು ವಿಮೆಯನ್ನು ರೂ. 5ಲಕ್ಷದವರೆಗೆ ಹೆಚ್ಚಿಸಬೇಕು. ಅವೈಜ್ಞಾನಿಕ ಗುರಿ ಸಾಧಿಸದೆ ಇರುವ ಜಿಡಿಎಸ್ ನೌಕರರಿಗೆ ನೀಡುತ್ತಿರುವ ಕಿರುಕುಳವನ್ನು ನಿಲ್ಲಿಸಬೇಕು. ಜಿಡಿಎಸ್ ಗ್ರಾಜ್ಯುಯಿಟಿ ಹಣವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಬೇಕು. ಜಿಡಿಎಸ್ ಮತ್ತು ಕುಟುಂಬದ ಸದಸ್ಯರಿಗೆ ವೈದ್ಯಕೀಯ ಸೌಲಭ್ಯ ಒದಗಿಸುವ ಜೊತೆಗೆ 180 ದಿನಗಳ ರಜೆ ಉಳಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಸಹ ಕಾರ್ಯದರ್ಶಿ ಸುಬ್ರಹ್ಮಣ್ಯ ಕಾರ್ಗಲ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ನೆಟ್‌ವರ್ಕ್ ಸಮಸ್ಯೆಯಿಂದ ಅಂಚೆ ನೌಕರರು ಕೆಲಸ ಮಾಡಲು ಆಗುತ್ತಿಲ್ಲ. ಖಾಯಂ ನೌಕರರಿಗೆ ಸಿಗುವ ಸವಲತ್ತುಗಳು ಇಲಾಖೇತರ ನೌಕರರಿಗೆ ಸಿಗುತ್ತಿಲ್ಲ. ನಮ್ಮಿಂದ ಕೆಲಸ ಮಾಡಿಸಿಕೊಂಡು ಖಾಯಂ ನೌಕರರು ಹೆಸರು ಗಳಿಸುತ್ತಿದ್ದಾರೆ. ಯಾವುದೇ ಸೌಲಭ್ಯ ಕೊಡದೆ ಹೆಚ್ಚು ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಇಲಾಖೇತರ ನೌಕರರನ್ನು ನೌಕರರು ಎಂದು ಪರಿಗಣಿಸಲು ಮನವಿ ಮಾಡಿದರು.ಈ ಸಂದರ್ಭದಲ್ಲಿ ವೆಂಕಟೇಶ್ ಎಚ್.ಜಿ. ಶಶಿಕಲಾ, ಚಂದ್ರಕಲಾ, ರಾಜೇಂದ್ರ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.