Shimoga: ಶಿವಮೊಗ್ಗ ಗಲಭೆ: ನ್ಯಾಯಾಂಗ ತನಿಖೆಗೆ ಆಗ್ರಹ
ಕೋಮುವಾದಿ ಶಕ್ತಿಗಳು ವಿಜೃಂಭಿಸಲು ಬಿಟ್ಟಿರುವುದೇ ಕೈ ಸಾಧನೆ: ಸಿ.ಟಿ.ರವಿ
Team Udayavani, Oct 4, 2023, 11:57 PM IST
ಬೆಂಗಳೂರು: ಶಿವಮೊಗ್ಗ ಘಟನೆ ಹಿಂದೆ ರಾಜ್ಯದ ಶಾಂತಿ ಹಾಳು ಮಾಡುವ ಉದ್ದೇಶ ಇದ್ದಂತಿದೆ. ಆದ್ದರಿಂದ ಈ ಘಟನೆಯ ನ್ಯಾಯಾಂಗ ತನಿಖೆ ಮಾಡುವಂತೆ ಮಾಜಿ ಸಚಿವ ಸಿ.ಟಿ.ರವಿ ಆಗ್ರಹಿಸಿದರು.
ಪಕ್ಷದ ಕಚೇರಿಯಲ್ಲಿ ಬುಧವಾರ ಅವರು ಮಾತನಾಡಿ, ಕರ್ನಾಟಕದ ಮುಂದೆ ಬಹಳ ದೊಡ್ಡ ಅಪಾಯ ಇದೆ. ಶಿವಮೊಗ್ಗ, ಕೋಲಾರ ಪ್ರಕರಣಗಳು ಅದರ ಟೆಸ್ಟಿಂಗ್ ಡೋಸ್ ಇದ್ದಂತಿವೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಈ 140 ದಿನಗಳಲ್ಲಿ ಕೋಮುವಾದಿ ಶಕ್ತಿಗಳು ವಿಜೃಂಭಿಸಲು ಬಿಟ್ಟಿರುವುದೇ ಸಾಧನೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿಧಾನಸಭಾ ಫಲಿತಾಂಶ ಬರುವ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಪಾಕಿಸ್ಥಾನ್ ಜಿಂದಾಬಾದ್ ಎಂದು ಕೂಗುತ್ತಾರೆ. ಭಟ್ಕಳದಲ್ಲಿ ಹಿಂದೂಗಳ ಹೆಣ ಎತ್ತಲು ಕೂಡ ಜನ ಇರಬಾರದು ಎಂದು ಮುಸ್ಲಿಮರೊಬ್ಬರು ಬರೆದಿದ್ದರು. ಬೆಳಗಾವಿಯಲ್ಲಿ ಜೈನಮುನಿಯ ಹತ್ಯೆ ಆಗಿದೆ. ಟಿ.ನರಸೀ ಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ನಡೆದಿದೆ. ಫಲಿತಾಂಶ ಬಂದ ಮರುದಿನವೇ ಹೊಸಕೋಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ನಡೆದಿದೆ ಎಂದವರು ಆರೋಪಿಸಿದರು.
ಮುಂದುವರಿದ ಬಿಗಿ ಬಂದೋಬಸ್ತ್
ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಉದ್ವಿಗ್ನ ಸ್ಥಿತಿ ತಲುಪಿದ್ದ ರಾಗಿಗುಡ್ಡ ಸಹಜ ಸ್ಥಿತಿಗೆ ಮರಳುತ್ತಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಕೆಲವಷ್ಟು ವಿನಾಯಿತಿಗಳನ್ನು ನೀಡಲಾಗಿದ್ದು ಬುಧವಾರ ಶಾಲಾ, ಕಾಲೇಜು, ಕಚೇರಿಗೆ ತೆರಳಲು ಜನ ಮನೆಯಿಂದ ಹೊರಬಂದರು. ಸೆಕ್ಷನ್ 144 ಮುಂದುವರಿಸಲಾಗಿದೆ.
ಘಟನೆ ಬಳಿಕ ರಾಗಿಗುಡ್ಡ ಬಡಾವಣೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಹಿತಕರ ಘಟನೆ ತಡೆಯಲು ಜನ ಮನೆಯಿಂದ ಹೊರ ಬಾರದಂತೆ ಪೊಲೀಸರು ನಿರ್ಬಂ ಧ ಹೇರಿದ್ದರು. ರಾಗಿಗುಡ್ಡ ಬಡಾವಣೆಯಲ್ಲಿ ಜನರ ಓಡಾಟಕ್ಕೆ ನಿಬಂìಧವಿದೆ. ಆದರೆ ಶಾಲೆ, ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಕಚೇರಿ, ಕೆಲಸಗಳಿಗೆ ತೆರಳುವವರಿಗೆ ಅವಕಾಶ ಕಲ್ಪಿಸಲಾಗಿದೆ. ಅಂಗಡಿ ಮುಂಗಟ್ಟು ತೆರೆದಿದ್ದು ಅಗತ್ಯ ವಸ್ತುಗಳ ಖರೀದಿ ಮಾಡಲಾಗುತ್ತಿದೆ. ನಿಧಾನವಾಗಿ ರಾಗಿಗುಡ್ಡ ಬಡಾವಣೆ ಸಹಜ ಸ್ಥಿತಿಗೆ ಮರಳುತ್ತಿದೆ.
ಶಿವಮೊಗ್ಗ ಸಹಜ ಸ್ಥಿತಿಗೆ
ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಘಟನೆ ಮತ್ತೆ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ| ಅಲೋಕ್ ಮೋಹನ್ ತಿಳಿಸಿದರು. ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಜತೆ ಸಭೆಗೂ ಮೊದಲು ಮಾತನಾಡಿದ ಅವರು, ಗಲಭೆಯಲ್ಲಿ ಇದುವರೆಗೆ 27 ಪ್ರಕರಣ ದಾಖಲಾಗಿದ್ದು, 64 ಜನರನ್ನು ಬಂಧಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿ ಗಲಭೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು. ಇದೀಗ ಕೆಎಸ್‌ಆರ್‌ಪಿ ಮತ್ತು ಡಿಎಆರ್ ಪಡೆಗಳನ್ನು ನಿಯೋಜಿಸಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಪರಿಸ್ಥಿತಿ ಶಾಂತವಾಗಿದೆ ಎಂದು ಹೇಳಿದರು.
ಗಲಭೆ ಸ್ಥಳದಲ್ಲಿ ಬಿಜೆಪಿ ಸತ್ಯಶೋಧನೆ
ಬೆಂಗಳೂರು: ಶಿವಮೊಗ್ಗ ಗಲಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಖಂಡಿಸಿದ್ದು, ಗಲಭೆ ನಡೆದ ಸ್ಥಳಕ್ಕೆ ಗುರುವಾರ ಬೆಳಗ್ಗೆ 11 ಗಂಟೆಗೆ ಬಿಜೆಪಿ ನಾಯಕರನ್ನೊಳಗೊಂಡ ಸತ್ಯಶೋಧನ ತಂಡ ಭೇಟಿ ನೀಡಲಿದೆ ಎಂದು ತಿಳಿಸಿ¨ªಾರೆ. ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಡಾ| ಸಿ.ಎನ್. ಅಶ್ವತ್ಥನಾರಾಯಣ, ಮಾಜಿ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಚನ್ನಬಸಪ್ಪ, ಎನ್.ರವಿಕುಮಾರ್, ಎಸ್. ರುದ್ರೇ ಗೌಡ ತಂಡದಲ್ಲಿ ಇರಲಿದ್ದಾರೆ.
ತಪ್ಪಿತಸ್ಥರನ್ನು ಹಿಡಿದು ಒಳಗೆ ಹಾಕುವ ಬದಲು ಸಚಿವರೇ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡುತ್ತಿದ್ಧಾರೆ. ಈ ಸರಕಾರದ ತುಷ್ಟೀಕರಣದ ನೀತಿಯೇ ಸಮಾಜ ಘಾತುಕ ಶಕ್ತಿಗಳು ಹೆಚ್ಚಾಗಲು ಕಾರಣವಾಗಿದೆ.
– ಬಸವರಾಜ ಬೊಮ್ಮಾಯಿ,ಮಾಜಿ ಸಿಎಂ
2023ರ ಜನವರಿ, ಫೆಬ್ರವರಿಯಲ್ಲಿ 7361 ರೌಡಿಶೀಟರ್‌ಗಳನ್ನು ಪಟ್ಟಿಯಿಂದ ಕೈಬಿಟ್ಟ ಬಿಜೆಪಿ, ನಮಗೆ ಈಗ ಬುದ್ಧಿ ಹೇಳುವುದಾ? ಅವರ ಕಾರ್ಯಕರ್ತರ ಪರವಾಗಿ ಅವರೇನು ರಾಜಕಾರಣ ಮಾಡಿದ್ದಾರೆ ಎಂಬುದು ಗೊತ್ತಿದೆ. ನಾವು ಕಾನೂನು ಪ್ರಕಾರ ನಡೆದುಕೊಳ್ಳುತ್ತಿದ್ದೇವೆ. ಅಮಾಯಕರ ಮೇಲಿನ ಪ್ರಕರಣಗಳನ್ನು ಪರಿಶೀಲಿಸುತ್ತಿದ್ದೇವಷ್ಟೆ.
– ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.