BPL ಕಾರ್ಡ್ ತಿದ್ದುಪಡಿಗೆ ಅವಕಾಶ
Team Udayavani, Oct 5, 2023, 12:03 AM IST
ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿದಾರರ ಹೆಸರು ಸೇರ್ಪಡೆ ಸೇರಿದಂತೆ ಅಗತ್ಯ ತಿದ್ದುಪಡಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೂಂದು ಅವಕಾಶ ನೀಡಿದೆ.
ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಹೆಸರು ಸೇರ್ಪಡೆ, ಪರಿಷ್ಕರಣೆ ಸೇರಿದಂತೆ ಯಾವುದೇ ರೀತಿಯ ತಿದ್ದುಪಡಿಗಳಿದ್ದರೂ ಮಾಡಿಸಿಕೊಳ್ಳಬಹುದು.
ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿನ ಹೆಸರು ರದ್ದುಪಡಿಸುವುದು, ಕುಟುಂಬದ ಹೊಸ ಸದಸ್ಯರ ಹೆಸರು ಸೇರಿಸುವುದು, ಹೆಸರಿನಲ್ಲಿನ ಲೋಪದೋಷಗಳ ತಿದ್ದುಪಡಿ, ವಿಳಾಸ ಬದಲಾವಣೆಯಂತಹ ಪರಿಷ್ಕರಣೆಗೆ ಅವಕಾಶ ಒದಗಿಸಲಾಗಿದೆ.
ಎಲ್ಲೆಲ್ಲಿ ?
ಮೊದಲ ಹಂತದಲ್ಲಿ ಅ. 5ರಿಂದ 7ರ ವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.
ಎರಡನೇ ಹಂತದಲ್ಲಿ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಗದಗ, ಹಾವೇರಿ, ಕೊಡಗು, ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಗಳಲ್ಲಿ ಅವಕಾಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.