Sand Problem; ಇಂದು ಜನಪ್ರತಿನಿಧಿಗಳು, ಡಿಸಿ ಜತೆಗೆ ಮುಖ್ಯಮಂತ್ರಿ ಸಭೆ
ಮರಳು, ಕೆಂಪುಕಲ್ಲು ಸಾಗಾಟ ಸಮಸ್ಯೆ
Team Udayavani, Oct 5, 2023, 5:39 AM IST
ಉಡುಪಿ: ಕಟ್ಟಡ ಸಾಮಗ್ರಿ ಸಾಗಾಟ ಲಾರಿ, ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟದ ಅನಿರ್ದಿಷ್ಟಾವಧಿಯ ಮುಷ್ಕರದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣ ಕ್ಷೇತ್ರದಲ್ಲಿ ಉಂಟಾಗಿರುವ ಸಮಸ್ಯೆಯನ್ನು ಆಲಿಸಿ, ಪರಿಹಾರ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಜಿಲ್ಲೆಯಲ್ಲಿ ಉದ್ಭವಿಸಿರುವ ಮರಳು, ಕೆಂಪುಕಲ್ಲು ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಅ.5ರ ಸಂಜೆ 5 ಗಂಟೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿಯವರು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಐವರು ಶಾಸಕರು, ಇಬ್ಬರು ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಹಿತವಾಗಿ ಜಿಲ್ಲೆಯ ಪ್ರಮುಖರೊಂದಿಗೆ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಯಾವ ರೀತಿ ನಿರ್ಧಾರ ಆಗಲಿದೆ ಮತ್ತು ಮುಖ್ಯಮಂತ್ರಿಯವರು ಯಾವೆಲ್ಲ ಸೂಚನೆ ನೀಡಲಿದ್ದಾರೆ ಎಂಬುದರ ಆಧಾರದಲ್ಲಿ ಮುಂದಿನ ಹೋರಾಟ ರೂಪಿಸಲಿದ್ದೇವೆ ಎಂದು ಲಾರಿ ಮಾಲಕರ ಸಂಘಟನೆಗಳ ಒಕ್ಕೂಟದ ಪ್ರತಿನಿಧಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.