ED Raid: ತೀರ್ಥಹಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಇಡಿ ದಾಳಿ
ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ಮನೆಗಳಿಗೆ ದಾಳಿ
Team Udayavani, Oct 5, 2023, 8:13 AM IST
ತೀರ್ಥಹಳ್ಳಿ: ಬೆಳ್ಳಂ ಬೆಳಗ್ಗೆ ತೀರ್ಥಹಳ್ಳಿಯಲ್ಲಿ ಇಡಿ ದಾಳಿ ಆಗಿದೆ. ಕಾಂಗ್ರೆಸ್ ಮುಖಂಡ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡರ ನಿವಾಸದ ಮೇಲೆ ಇಡಿ ದಾಳಿ ನಡೆಸಲಾಗಿದೆ.
ಪಟ್ಟಣದ ಬೆಟ್ಟಮಕ್ಕಿಯ ನಿವಾಸದ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆರ್.ಎಂ. ಮಂಜುನಾಥ್ ಗೌಡರು ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿರುವ ಆರ್.ಎಂ.ಎಂ. ಅವರ ಮೂರು ನಿವಾಸಗಳ ಮನೆಗಳ ಮೇಲೆ ಇಡಿ ದಾಳಿ ಮಾಡಿದ್ದು, ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ನಿವಾಸ, ತೀರ್ಥಹಳ್ಳಿಯ ಕಲ್ಲುಕೊಪ್ಪ ನಿವಾಸದ ಮೇಲೆ ಹಾಗೂ ಶಿವಮೊಗ್ಗದ ಶರಾವತಿ ನಗರದಲ್ಲಿರುವ ನಿವಾಸದ ಮೇಲೂ ದಾಳಿ ಮಾಡಿದ್ದರೆನ್ನಲಾಗಿದೆ.
ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು ಸುತ್ತುವರೆದಿದ್ದಾರೆ. ಸರ್ಕಾರಿ ಕಾರುಗಳಲ್ಲಿ ಬಂದಿರುವ ಅಧಿಕಾರಿಗಳ ತಂಡ ಆರ್.ಎಂ.ಎಂ. ನಿವಾಸಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಉಳಿದಂತೆ ತಾಲೂಕಿನ ಹಣಗೆರೆಕಟ್ಟೆ ಸಮೀಪದ ಕರಕುಚ್ಚಿ, ಶಿವಮೊಗ್ಗದ ಶಾಂತಿನಗರ, ಸೇರಿ ಹಲವು ಕಚೇರಿ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
5 ಕ್ಕೂ ಹೆಚ್ಚು ವಾಹನಗಳಲ್ಲಿ 15ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಿದ್ದು, ಪ್ರತ್ಯೇಕ ಫೋರ್ಸ್ ನೊಂದಿಗೆ ಇಡಿ ತಂಡ ಬಂದಿದೆ. ಡಿಸಿಸಿ ಬ್ಯಾಂಕ್ ನಕಲಿ ಬಂಗಾರದ ಹಗರಣ ತನಿಖೆ ಸಂಬಂಧ ಇಡಿ ದಾಳಿ ನಡೆಸಿರುವ ಸಾಧ್ಯತೆ ಇದ್ದು,
ಕೆಲ ತಿಂಗಳ ಹಿಂದೆಯೇ ಈ ಸಂಬಂಧ ಡಿಸಿಸಿ ಬ್ಯಾಂಕ್ ನಿಂದ ಮಾಹಿತಿ ಕೇಳಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.