Chikkaballapur: ಜಿಲ್ಲೆಯಲ್ಲಿಲ್ಲ ವನ್ಯಜೀವಿಗಳಿಗೆ ಸೂಕ್ತ ರಕ್ಷಣೆ


Team Udayavani, Oct 5, 2023, 11:39 AM IST

tdy-7

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಅ.2 ರಿಂದ 8ರ ವರೆಗೂ ವನ್ಯಜೀವಿಗಳ ಸಂರಕ್ಷಣಾ ಸಪ್ತಾಹವನ್ನು ಇಲಾಖೆ ನಡೆಸುತ್ತಿದೆ. ಆದರೆ ಜಿಲ್ಲೆಯಲ್ಲಿ ಮಾನವ ಹಾಗೂ ವನ್ಯಜೀವಿಗಳ ನಡುವಿನ ಸಂಘರ್ಷ ಕಡಿಮೆ ಇದ್ದರೂ ಕಳೆದ 10 ವರ್ಷದಲ್ಲಿ ಬರೋಬ್ಬರಿ 7 ಚಿರತೆಗಳು ಮೃತಪಟ್ಟಿವೆ.

ಹೌದು, ಹೇಳಿ ಕೇಳಿ ದಶಕಗಳ ಕಾಲ ಬರದ ಬವಣೆಗೆ ಒಳಗಾಗಿದ್ದ ಜಿಲ್ಲೆಯು ಸಂಪೂರ್ಣ ಬಯಲು ಪ್ರದೇಶವಾ ದರೂ ಹಿಂದಿನ ಎರಡು, ಮೂರು ವರ್ಷದಲ್ಲಿ ಜಿಲ್ಲಾದ್ಯಂತ ಸುರಿದ ಭಾರೀ ವರ್ಷಾಧಾರೆಯ ಪರಿಣಾಮ ಜಿಲ್ಲೆಯಲ್ಲಿ ಹಸಿರು ಹೊದಿಕೆ ಹೆಚ್ಚಾಗುತ್ತಿದ್ದಂತೆ ವನ್ಯಜೀವಿಗಳ ಸಂತತಿ ಹೆಚ್ಚಾಗಿದೆ.

ಜಿಲ್ಲೆಯಲ್ಲಿ ಅರಣ್ಯ ಭಾಗದಲ್ಲಿ ಎಂದೂ ಕಾಣದ ಕಡೆಗಳಲ್ಲಿ ಚಿರತೆಗಳು, ಕಾಡು ಹಂದಿ, ಕರಡಿ, ಮೊಲ, ಜಿಂಕೆಗಳು ಸೇರಿದಂತೆ ಅಪಾರ ಪ್ರಮಾಣದಲ್ಲಿ ವನ್ಯ ಜೀವಿಗಳು ಕಂಡು ಬರುತ್ತಿವೆ. ಆದರೆ ಜಿಲ್ಲೆಯಲ್ಲಿ ವನ್ಯ ಜೀವಿಗಳಿಗೆ ಮಾತ್ರ ಸೂಕ್ತ ರಕ್ಷಣೆ ಇಲ್ಲದಂತಾಗಿರುವುದು ಮಾತ್ರ ಜಿಲ್ಲೆಯಲ್ಲಿ ವನ್ಯ ಜೀವಿಗಳ ಸಂರಕ್ಷಣಾ ಸಪ್ತಾಹ ಲೆಕ್ಕಕ್ಕುಂಟು ಆಟಕ್ಕಿಲ್ಲ ಎಂಬಂತಾಗಿದೆ.

ವನ್ಯಜೀವಿ ಸಂರಕ್ಷಣೆ ಕುರಿತು ಅರಿವು ಮೂಡಿಸಿ:   ಒಂದು ಕಾಲಕ್ಕೆ ಬಟಾ ಬಯಲು ಪ್ರದೇಶವನ್ನು ಹೊಂದಿದ್ದ ಜಿಲ್ಲೆಯು ಅರಣ್ಯೀಕರಣ ಹೆಚ್ಚಳದಿಂದ ವನ್ಯ ಜೀವಿಗಳ ಸಂತತಿ ಹೇರಳ ಪ್ರಮಾಣದಲ್ಲಿ ಹೆಚ್ಚಾಗಿರುವುದು ಸಂತಸ ತಂದರೂ, ಅರಣ್ಯ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ವನ್ಯ ಜೀವಿಗಳಿಗೆ ಜಿಲ್ಲೆಯಲ್ಲಿ ರಕ್ಷಣೆ ಇಲ್ಲದೇ ಇರುವುದು ಎದ್ದು ಕಾಣುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ, ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಜಿಲ್ಲೆಯ ಅಮೂಲ್ಯವಾದ ಅರಣ್ಯ ಸಂಪನ್ಮೂಲ ರಕ್ಷಣೆಗಾಗಿ ವನ್ಯ ಜೀವಿಗಳ ಸಂರಕ್ಷಣೆಗೆ ವಿಶೇಷ ಕಾಳಜಿ ವಹಿಸಿದಾಗ ಮಾತ್ರ ವನ್ಯ ಜೀವಿಗಳ ಸಂರಕ್ಷಣಾ ಸಪ್ತಾಹಕ್ಕೆ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವನ್ಯ ಜೀವಿಗಳ ಸಂರಕ್ಷಣೆ ಕುರಿತು ಜನ ಜಾಗೃತಿ ಮೂಡಿಸುವ ದಿಕ್ಕಿನಲ್ಲಿ ಅರಣ್ಯ ಇಲಾಖೆ ಇನ್ನಷ್ಟು ಸಕ್ರಿಯಗೊಳ್ಳಬೇಕಿದೆ.

ಗಣಿಗಾರಿಕೆಯಿಂದ ವನ್ಯಜೀವಿಗಳಿಗೆ ಇಲ್ಲ ರಕ್ಷಣೆ!:

ಜಿಲ್ಲೆಯಲ್ಲಿಯೆ ಅತಿ ಹೆಚ್ಚು ಅಕ್ರಮ ಗಣಿಗಾರಿಕೆಗೆ ಕುಖ್ಯಾತಿ ಆಗಿರುವ ಚಿಕ್ಕಬಳ್ಳಾಪುರ ತಾಲೂಕಿನ ಅಸುಪಾಸಿನಲ್ಲಿ ಗಣಿಗಾರಿಕೆ ಅರ್ಭಟ ಹೆಚ್ಚಾಗಿರು ವುದರಿಂದ ವನ್ಯ ಜೀವಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಇದಕ್ಕೆ ತಾಜಾ ಉದಾಹರಣೆ ಇತ್ತೀಚಿಗೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಚಿರತೆಗಳೇ ಸಾಕ್ಷಿ, ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನೂರಾರು ಕಡೆ ಗಣಿಗಾರಿಕೆ ಸದ್ದು ಇರುವುದರಿಂದ ವನ್ಯ ಜೀವಿಗಳಿಗೆ ಸೂಕ್ತ ವಾಸ ಸ್ಥಾನ ಸಿಗದೇ ಗ್ರಾಮಗಳಿಗೆ ಲಗ್ಗೆ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಮುಖ್ಯ ಕಾರಣ ಅರಣ್ಯ ಪ್ರದೇಶದ ಬೆಟ್ಟ, ಗುಡ್ಡಗಳಲ್ಲಿ ಮೀತಿ ಮಿರಿ ನಡೆಯುತ್ತಿರುವ ಗಣಿಗಾರಿಕೆ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಿಬೇಕಿಲ್ಲ. ಮಂಡಿಕಲ್ಲು, ಪೆರೇಸಂದ್ರ ಸುತ್ತಮುತ್ತ ಸಾಕಷ್ಟು ಗಣಿಗಾರಿಕೆ ನಡೆಯುತ್ತಿದ್ದು, ರಾತ್ರಿ ವೇಳೆ ಗಣಿಗಾರಿಕೆಗೆ ಬಳಸುವ ಸಿಡಿಮುದ್ದುಗಳ ಸ್ಫೋಟಕ್ಕೆ ಬೆದರಿ ಚಿರತೆ, ಕರಡಿಗಳು ಕಾಡಿನಿಂದ ಜನವಸತಿ ಪ್ರದೇಶಗಳಿಗೆ ನುಗ್ಗಿ ಬರುತ್ತಿವೆ. ಕೆಲವೊಮ್ಮೆ ರಸ್ತೆ ದಾಟುವಾಗ ವಾಹನಗಳ ಡಿಕ್ಕಿಯಾಗಿ ಚಿರತಗೆಳು ಸಾವುಗೀಡಾಗುತ್ತಿರುವುದು ಜಿಲ್ಲೆಯಲ್ಲಿ ಎದ್ದು ಕಾಣುತ್ತಿದೆ.

ಜಿಲ್ಲೆಯಲ್ಲಿ ಕಳೆದ 10 ವರ್ಷದಲ್ಲಿ 7 ಚಿರತೆಗಳು ಮೃತಪಟ್ಟಿವೆ. ಕೆಲವೊಂದು ಚಿರತೆಗಳು ಅಪಘಾತದಲ್ಲಿ ಸತ್ತಿವೆ. ಚಿರತೆ ದಾಳಿಯಿಂದ ಯಾವುದೇ ಸಾವುನೋವು ಜಿಲ್ಲೆಯಲ್ಲಿ ಸಂಭವಿಸಿಲ್ಲ. ಚಿರತೆಗಳು ಕಾಣಿಸಿಕೊಂಡ ಕಡೆ ಅರಣ್ಯ ಇಲಾಖೆ ನಿಗಾವಹಿಸಿ ಸಾರ್ವಜನಿಕರನ್ನು ಎಚ್ಚರದಿಂದ ಇರುವಂತೆ ಅರಿವು ಮೂಡಿಸಲಾಗಿದೆ.-ಬಿ.ಆರ್‌.ರಮೇಶ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ, ಚಿಕ್ಕಬಳ್ಳಾಪುರ 

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.