Drought: ಕಾಟಾಚಾರದ ಅಧ್ಯಯನ ಬೇಡ, ವಾಸ್ತವಾಂಶಗಳ ವರದಿ ಸಲ್ಲಿಸಲಿ


Team Udayavani, Oct 5, 2023, 11:58 PM IST

drought

ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯ ಸರಕಾರ ಈಗಾಗಲೇ 195 ತಾಲೂಕುಗಳನ್ನು ಬರಪೀಡಿತವೆಂದು ಘೋ ಷಿಸಿದೆ. ಇನ್ನೂ 32 ತಾಲೂಕುಗಳು ಅದೇ ಸ್ಥಿತಿಯಲ್ಲಿವೆ. ಬಹುತೇಕ ಇಡೀ ರಾಜ್ಯವನ್ನು ಬರಗಾಲ ಆವರಿಸಿದೆ. ಬರಗಾಲ ಎದುರಿಸುವುದು ಯಾವುದೇ ಸರಕಾರಕ್ಕೂ ನಿಜವಾದ ಸವಾಲು. ಈಗ ಅದೇ ಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರವಿದೆ. ರಾಜ್ಯ ಸರಕಾರದ ಕೋರಿಕೆ ಮೇರೆಗೆ ಕೇಂದ್ರ ಸರಕಾರ 10 ಅಧಿಕಾರಿಗಳನ್ನು ಒಳಗೊಂಡ 3 ತಂಡ ಗಳನ್ನು ಕಳುಹಿಸಿರುವುದು ನಿಜಕ್ಕೂ ಸ್ವಾಗತಾರ್ಹ.

ಆದರೆ ಈ ಬರ ಅಧ್ಯಯನ ತಂಡವು ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಕಣ್ಣಾರೆ ನೋಡಬೇಕು. ಈ ಹಿಂದೆ ಪ್ರವಾಹ ಇಲ್ಲವೇ ಬರ ಪರಿಸ್ಥಿತಿ ಅಧ್ಯಯನಕ್ಕೆ ಆಗಮಿಸಿದ ತಂಡಗಳು ಹವಾನಿಯಂತ್ರಿತ ಕಾರುಗಳಿಂದ ಕೆಳಗೆ ಇಳಿಯದೆ ರಸ್ತೆ ಬದಿಯಲ್ಲೇ ನಿಂತು ವೀಕ್ಷಣೆ ಮಾಡಿದ್ದರ ಬಗ್ಗೆ ರೈತರು, ಸಾರ್ವಜನಿಕರಿಂದಲೂ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಈ ಸಲ ಆ ರೀತಿ ಮಾಡದೇ ರೈತರ ಹೊಲ-ಗದ್ದೆಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಮಾಲೋಚಿಸಿ ವಾಸ್ತವ ಪರಿಸ್ಥಿತಿಯನ್ನು ಅರಿತುಕೊಳ್ಳಲು ಪ್ರಯತ್ನಿಸಬೇಕೇ ಹೊರತು ಬರ ಅಧ್ಯಯನ ಒಂದು ಕಾಟಾಚಾರದ ಕೆಲಸವಾಗಬಾರದು. ಈ ನಿಟ್ಟಿನಲ್ಲಿ ರಾಜ್ಯದ ಕೃಷಿ, ಕಂದಾಯ, ತೋಟಗಾರಿಕೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಅಗತ್ಯ ಮಾಹಿತಿ ಪೂರೈಸಬೇಕು .

ರಾಜ್ಯಕ್ಕೆ ಆಗಮಿಸಿರುವ ಬರ ಅಧ್ಯಯನ ತಂಡದ ಜತೆ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ. ಶೇ.90 ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸುರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಹಸುರು ಬರ ತಲೆದೋರಿದೆ ಎಂದು ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ಅಂದರೆ ರೈತರ ಭಾಷೆಯಲ್ಲಿ ಹೇಳುವುದಾದರೆ “ಗದ್ದೆಯಲ್ಲಿ ಹಸುರು, ಮನೆಯಲ್ಲಿ ಬಡತನ’ ಎಂಬಂತಿದೆ. ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ಹಿಡುವಳಿದಾರರೇ ಹೆಚ್ಚಿದ್ದಾರೆ. ಬೆಳೆ ವಿಮೆ ಬಗ್ಗೆ ರೈತರಲ್ಲಿ ಇನ್ನೂ ಅಷ್ಟೊಂದು ಜಾಗೃತಿ ಮೂಡಿಲ್ಲ. ಹೀಗಾಗಿ ಎಲ್ಲರೂ ಬೆಳೆ ವಿಮೆ ಮಾಡಿಸಿರುವುದಿಲ್ಲ. ಈ ಮಧ್ಯೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟಲೈಜ್‌ ಮಾಡಿರುವುದರಿಂದ ನಿಖರ ಮಾಹಿತಿ ಲಭ್ಯವಾಗಲಿದೆ. ಬೆಳೆ ವಿಮೆ ಕಂಪೆನಿಗಳು ಪರಿಹಾರಕ್ಕಾಗಿ ನಿರ್ದಿಷ್ಟ ಮಾರ್ಗಸೂಚಿಗಳನ್ನು ಅನುಸರಿಸದೆ ರೈತರಿಗೆ ಮಾನವೀಯತೆ ಆಧಾರದಲ್ಲಿ ಬೆಳೆ ವಿಮೆ ಪಾವತಿಸಬೇಕು. ಜತೆಗೆ ಎನ್‌ಡಿಆರ್‌ಎಫ್ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ಬೆಳೆ ನಷ್ಟ ಪರಿಹಾರ ಕೂಡ ಅತ್ಯಂತ ಕಡಿಮೆ ಇದೆ. ಇದನ್ನು ಹೆಚ್ಚಿಸಬೇಕು.

ಆಗಸ್ಟ್‌ನಲ್ಲಿ 122 ವರ್ಷಗಳಲ್ಲೇ ಅತೀ ಕಡಿಮೆ ಮಳೆಯಾಗಿದ್ದು, ಜಲಾ ಶಯಗಳು ಬರಿದಾಗಿವೆ. ಸೆಪ್ಟಂಬರ್‌ನಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಯಾಗಿದೆ. ಮುಂಗಾರು ಮಳೆ ಮುಗಿಯುವ ಹಂತಕ್ಕೆ ಬಂದಿದೆ. ಕುಡಿ ಯುವ ನೀರಿಗೆ ಅಭಾವ, ವಿದ್ಯುತ್‌ ಕೊರತೆಯ ಆತಂಕವನ್ನೂ ಸೃಷ್ಟಿ ಸಿದೆ. ಮಳೆಗಾಲದಲ್ಲೇ ಈ ಪರಿಸ್ಥಿತಿ ಎದುರಾದರೆ ಮುಂದೆ ಬರಲಿರುವ ಬೇಸಗೆ ಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು. ಉದ್ಯೋಗ ಸೃಷ್ಟಿ, ವಿದ್ಯುತ್‌ ಪೂರೈಕೆ ಸರಕಾರಕ್ಕೆ ದೊಡ್ಡ ಸವಾಲಾಗಿದೆ. ಈ ಹಂತದಲ್ಲಿ ಕೇಂದ್ರ ಸರಕಾರ ರಾಜ್ಯದ ನೆರವಿಗೆ ಬರುವುದು ಅನಿವಾರ್ಯವಾಗಿದೆ.

 

ಟಾಪ್ ನ್ಯೂಸ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-bcci

INDvBAN Day 3: 515 ರನ್ ಚೇಸ್ ; ಬಾಂಗ್ಲಾ 4 ವಿಕೆಟ್ ನಷ್ಟಕ್ಕೆ 158 ರನ್

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

9

Uppur: ಮೃತದೇಹ ಪತ್ತೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

1-adsdasd

America; ಮಕ್ಕಳ ಆಸ್ಪತ್ರೆಗಾಗಿ ನಿಧಿ ಸಂಗ್ರಹಕ್ಕೆ ನಾಟ್ಯ ಸೇವಾ ಕಾರ್ಯಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.