Drought: ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಕೇಂದ್ರ ಬರ ಅಧ್ಯಯನ ತಂಡ: ಸ್ಥಿತಿಗತಿ ಪರಿಶೀಲನೆ
Team Udayavani, Oct 6, 2023, 10:08 AM IST
ಚಿಕ್ಕಬಳ್ಳಾಪುರ: ಜಿಲ್ಲೆಯು ಸಂಪೂರ್ಣ ಬರ ಪೀಡಿತ ಜಿಲ್ಲೆಯೆಂದು ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಬರಪೀಡಿತ ತಾಲ್ಲೂಕುಗಳ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಬರ ಅಧ್ಯಯನ ತಂಡ ಶುಕ್ರವಾರ ಜಿಲ್ಲೆಗೆ ಆಗಮಿಸಿದೆ.
ಕೇಂದ್ರೀಯ ಜಲ ಆಯುಕ್ತಾಲಯದ ನಿರ್ದೇಶಕರಾದ ವಿ.ಅಶೋಕ್ ಕುಮಾರ್, ಎಂ.ಎನ್.ಸಿ.ಎಫ್.ಸಿ ಕೇಂದ್ರ ಹಾಗೂ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕಿರಣ್ ಚೌದರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧೀನ ಕಾರ್ಯದರ್ಶಿ ಸಂಗೀತ್ ಕುಮಾರ್ ಹಾಗೂ ರಾಜ್ಯದ ಕಂದಾಯ ಇಲಾಖೆಯ ವಿಪತ್ತು ನಿರ್ವಾಹಣೆಯ ಹಿರಿಯ ಸಮಾಲೋಚಕರಾದ ಡಾ|| ಜಿ.ಎಸ್.ಶ್ರೀನಿವಾಸರೆಡ್ಡಿ ರವರ ನೇತೃತ್ವದಲ್ಲಿ ಕೇಂದ್ರ ಬರ ಅಧ್ಯಯನ ತಂಡವು ಮೊದಲಿಗೆ ಜಿಲ್ಲಾಡಳಿತ ಭವನಕ್ಕೆ ಭೇಟಿ ನೀಡಿ ಜಿಲ್ಲೆಯ ಬರ ಪರಿಸ್ಥಿತಿ ಛಾಯಾಚಿತ್ರಗಳನ್ನು ವೀಕ್ಷಿಸಿ ಬಳಿಕ ಜಿಲ್ಲಾಡಳಿತದಿಂದ ಮಾಹಿತಿ ಸಂಗ್ರಹಿಸಿ ಬರ ಪರಿಸ್ಥಿತಿಯನ್ನು ಅವಲೋಕಿಸಿತು.
ಎಲ್ಲೆಲ್ಲಿ ಬರ ಅಧ್ಯಯನ?
ಬೆಳಿಗ್ಗೆ 10:10 ರಿಂದ 10:20 ಗಂಟೆಯವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಚೊಕ್ಕಹಳ್ಳಿ ಗ್ರಾಮ, ಬೆಳಿಗ್ಗೆ 10:50 ರಿಂದ 11:00 ಗಂಟೆಯವರೆಗೆ ಬಂಡಮನಹಳ್ಳಿ ಗ್ರಾಮ ನಂತರ ಬೆಳಿಗ್ಗೆ 11:05 ರಿಂದ 11:15 ಗಂಟೆಯವರೆಗೆ ದೊಡ್ಡೇಗಾನಹಳ್ಳಿ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಲಿದ್ದಾರೆ.
ಆ ನಂತರ ಬೆಳಿಗ್ಗೆ 11:35 ರಿಂದ 11:45 ಗಂಟೆಯವರೆಗೆ ಗೌರಿಬಿದನೂರು ತಾಲ್ಲೂಕಿನ ಜಕ್ಕೇನಹಳ್ಳಿ ಗ್ರಾಮ ಮತ್ತು ಬೆಳಿಗ್ಗೆ 11:55 ರಿಂದ ಮಧ್ಯಾಹ್ನ 12:10 ಗಂಟೆಯವರೆಗೆ ಗಂಗಸಂದ್ರ ಗ್ರಾಮ ಹಾಗೂ ಮಧ್ಯಾಹ್ನ 12:15 ರಿಂದ 12:30 ರವರೆಗೆ ಕಡಬೂರು ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಲಿದ್ದಾರೆ.
ನಂತರ ಮಧ್ಯಾಹ್ನ 1:30 ಗಂಟೆಗೆ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿಗೆ ತೆರಳಲಿದ್ದಾರೆ.
2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ 06 ತಾಲ್ಲೂಕುಗಳಿಗೆ ಶೇ.50% ಹೆಚ್ಚು ಬೆಳೆ ನಷ್ಟವಾಗಿದ್ದು, ಈ ಹಿನ್ನೆಲೆಯಲ್ಲಿ ಮುಂದಿನ 06 ತಿಂಗಳ ಅವಧಿಗೆ ಜಿಲ್ಲೆಯ 06 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಿಸಿದೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಪಂ ಸಿಇಒ ಪ್ರಕಾಶ ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಜಪಂ ಉಪ ಕಾರ್ಯದರ್ಶಿ ಡಾ.ಎನ್.ಭಾಸ್ಕರ್ ಸೇರಿದಂತೆ ಕೃಷಿ, ತೋಟಗಾರಿಕೆ ಇಲಾಖೆ ಹಿರಿಯ ಅಧಿಕಾರಿಗಳು ಇದ್ದರು.
ಇದನ್ನೂ ಓದಿ: World Cup: ಜ್ವರದಿಂದ ಬಳಲುತ್ತಿರುವ ಗಿಲ್: ಆಸೀಸ್ ವಿರುದ್ಧದ ಪಂದ್ಯದಲ್ಲಿ ಆಡುವುದು ಅನುಮಾನ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.