Government ನಿರ್ವಾಹಕರು, ಕ್ಲೀನರ್‌ಗಳಿಗೆ ನೋಂದಣಿಗೆ ಅವಕಾಶ

ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ

Team Udayavani, Oct 6, 2023, 11:29 PM IST

Government ನಿರ್ವಾಹಕರು, ಕ್ಲೀನರ್‌ಗಳಿಗೆ ನೋಂದಣಿಗೆ ಅವಕಾಶ

ಉಡುಪಿ/ಮಂಗಳೂರು: ಅಪಘಾತದಿಂದ ಸಂಕಷ್ಟಕ್ಕೆ ಸಿಲುಕುವ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು, ಕ್ಲೀನರ್‌ಗಳು ಮತ್ತು ಅವರ ಕುಟುಂಬದ ಸದಸ್ಯರಿಗೆ ನೆರವು ನೀಡಲು ಸರಕಾರ ರಾಜ್ಯ ಖಾಸಗಿ ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರ ಯೋಜನೆಯನ್ನು ಅನುಷ್ಠಾನಗೊಳಿಸಿದೆ.

ಸಾರಿಗೆ ಇಲಾಖೆಯಿಂದ ಸಾರಿಗೆ ವಾಹನ ಚಾಲನಾ ಪರವಾನಿಗೆ ಪಡೆದ ಚಾಲಕರು ತತ್‌ಕ್ಷಣದಿಂದ ಫಲಾನುಭವಿಯೆಂದು ಪರಿಗಣಿಸುತ್ತಿದ್ದು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ಯೋಜನೆಯಡಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಹಾಗೂ ನೋಂದಣಾಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ದಾಖಲೆ ನೀಡಿ ನೋಂದಾಯಿಸಿಕೊಳ್ಳಬೇಕು. ಒಮ್ಮೆ ನೋಂದಣಿಯಾದ ಅನಂತರ ನೀಡಲಾದ ಗುರುತಿನ ಚೀಟಿಯು 3 ವರ್ಷಗಳವರೆಗೆ ಅಸ್ಥಿತ್ವದಲ್ಲಿರುತ್ತದೆ. ಅನಂತರ ನವೀಕರಣಕ್ಕೆ ನಿಗದಿಪಡಿಸಿದ ದಾಖಲೆಗಳನ್ನು ನೋಂದಣಾಧಿಕಾರಿಗಳ ಕಚೇರಿಗೆ ಸಲ್ಲಿಸಿ ನವೀಕರಿಸಿಕೊಳ್ಳಬಹುದಾಗಿದೆ.

ಯೋಜನೆಯ ಸೌಲಭ್ಯಗಳು
ಅಪಘಾತದಿಂದ ಚಾಲಕರು, ನಿರ್ವಾಹಕರು, ಕ್ಲೀನರ್‌ಗಳು ಮರಣ ಹೊಂದಿದಲ್ಲಿ, ಅವರ ನಾಮನಿರ್ದೇಶಿತರಿಗೆ 5 ಲಕ್ಷ ರೂ. ಪರಿಹಾರ ಹಾಗೂ ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ, ಫಲಾನುಭವಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ 2 ಲಕ್ಷ ರೂ. ವರೆಗೆ ಪರಿಹಾರ ನೀಡಲಾಗುವುದು.

ಅಪಘಾತಕೊಳ್ಳಗಾಗಿ ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ 50,000 ರೂ. ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಹಾಗೂ 15 ದಿನಗಳಿಗಿಂತ ಹೆಚ್ಚು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಠ 1 ಲಕ್ಷ ರೂ. ವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆಯೊ ಅದನ್ನು ಮರುಪಾವತಿ ಪಡೆಯಬಹುದಾಗಿದೆ.

ಶೈಕ್ಷಣಿಕ ಧನ ಸಹಾಯ
2018-19ನೇ ಸಾಲಿನಿಂದ ಅಪಘಾತದ ಕಾರಣ ನಿಧನ/ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಇಬ್ಬರು ಮಕ್ಕಳಿಗೆ ಪದವಿಪೂರ್ವ ವ್ಯಾಸಂಗದವರೆಗೆ ವಾರ್ಷಿಕ 10,000 ರೂ.ಗಳ ಶೈಕ್ಷಣಿಕ ಸಹಾಯಧನ ನೀಡಲಾಗುತ್ತಿದೆ.

ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕಾರ್ಮಿಕ ಇಲಾಖೆಯ ಕಚೇರಿ ಸಂರ್ಕಿಸಲು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.