Subrahmanya ಕುಮಾರಪರ್ವತ ಚಾರಣಕ್ಕೆ ಮತ್ತೆ ಅವಕಾಶ
Team Udayavani, Oct 7, 2023, 1:16 AM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣ ಅ. 7ರ ಶನಿವಾರದಿಂದ ಆರಂಭಗೊಳ್ಳಲಿದೆ. ಇದೀಗ ಮಳೆಯ ಪ್ರಮಾಣ ಕಡಿಮೆಯಾದ ಕಾರಣ ಚಾರಣಕ್ಕೆ ಅವಕಾಶ ಒದಗಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾದ್ಯಮಕ್ಕೆ ತಿಳಿಸಿದ್ದಾರೆ.
ಈ ಹಿಂದೆ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆಯ ಕಾರಣ ಚಾರಣಿಗರ ಹಿತದೃಷ್ಟಿಯಿಂದ ಕುಮಾರಪರ್ವತ ಚಾರಣವನ್ನು ಅ. 3ರಿಂದ ನಿಷೇಧಿಸಲಾಗಿತ್ತು. ಅದಕ್ಕಿಂತ ಮೊದಲು ಮೇ ತಿಂಗಳಿನಿಂದ ಸೆ.29ರ ತನಕ ಅರಣ್ಯ ಇಲಾಖೆಯು ಬಿರು ಬೇಸಗೆ ಮತ್ತು ಅಧಿಕ ಮಳೆಯ ಕಾರಣದಿಂದಾಗಿ ನಿರ್ಬಂಧ ವಿಧಿಸಿತ್ತು. ಆ ಬಳಿಕ ಸೆ. 30ರಿಂದ ನಿರ್ಬಂಧ ತೆರವುಗೊಳಿಸಿ ಚಾರಣಕ್ಕೆ ಅವಕಾಶ ನೀಡಿತ್ತು.
ಸ್ವಚ್ಛತೆಗೆ ಇಲಾಖೆ ಕ್ರಮ
ಕುಮಾರಪರ್ವತ ಚಾರಣ ಮತ್ತೆ ಆರಂಭಗೊಳ್ಳಲಿರುವುದರಿಂದ ಪರ್ವತದ ದಾರಿಯಲ್ಲಿ ಮತ್ತು ಪರ್ವತದಲ್ಲಿ ಸ್ವಚ್ಛತೆ ಕಾಪಾಡಲು ವಿಶೇಷ ವ್ಯವಸ್ಥೆಯನ್ನು ಇಲಾಖೆ ಮಾಡಿದೆ. ಕುಮಾರಪರ್ವತ, ಗಿರಿಗದ್ದೆ, ಕಲ್ಲಚಪ್ಪರ ಸೇರಿದಂತೆ ಪರ್ವತಾರೋಹಣದ ಹಾದಿಯಲ್ಲಿಸ್ವಚ್ಛತೆ ಕಾಪಾಡಲು ಬೇಕಾದ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಸೂಚನಾ ಫಲಕವನ್ನು ಅಲ್ಲಲ್ಲಿ ಅಳವಡಿಸಿ ಜಾಗೃತಿ ಮಾಡಿಸುವ ಕಾರ್ಯ ಮಾಡಲಾಗಿದೆ. ಪ್ಲಾಸ್ಟಿಕ್ ಬಾಟಲಿ, ಕವರ್, ವಸ್ತುಗಳನ್ನು ಕೊಂಡೊಯ್ಯದಂತೆ ನಿರ್ಬಂಧ ವಿಧಿಸಲಾಗಿದೆ. ಅಲ್ಲಲ್ಲಿ ಕಸದ ತೊಟ್ಟಿಗಳ ವ್ಯವಸ್ಥೆಯನ್ನು ಇಲಾಖೆ ಕಲ್ಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.