Mundgod: ಗಂಧದ ಮರಗಳನ್ನು ಕದ್ದು ಪರಾರಿಯಾದ ಮರಗಳ್ಳರು
Team Udayavani, Oct 7, 2023, 12:44 PM IST
ಮುಂಡಗೋಡ: ತಾಲೂಕು ಸರಕಾರಿ ಆಸ್ಪತ್ರೆಯ ಆರೋಗ್ಯಾಧಿಕಾರಿ ಕಾರ್ಯಾಲಯದ ಪಕ್ಕದಲ್ಲಿದ್ದ ಎರಡು ಗಂಧದ ಮರಗಳನ್ನು ಮರಗಳ್ಳರು ಕಡಿದು ತುಂಡು ಮಾಡಿ ಟೊಂಗೆಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ಆ.7ರ ಶನಿವಾರ ನಡೆದಿದೆ.
ಆರೋಗ್ಯಧಿಕಾರಿ ಕಾರ್ಯಾಲಯದ ಪಕ್ಕದಲ್ಲಿ ಒಂದು ಮತ್ತು ವಸತಿ ಗೃಹದಲ್ಲಿದ್ದ ಒಂದು ಗಂಧದ ಮರ ಕಡಿದಿದ್ದಾರೆ. ಅವು ಸುಮಾರು 12-15 ವರ್ಷದ ಮರಗಳಾಗಿದ್ದವು. ಈ ಘಟನೆಯ ಕುರಿತು ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಜನ ವಸತಿಯಲ್ಲಿದ್ದ ಎರಡು ಮರಗಳನ್ನು ಮರಗಳ್ಳರು ಕಡಿದು ಟೊಂಗೆಗಳನ್ನು ಅಲ್ಲಿಯೇ ಬಿಟ್ಟು ಹೋಗಿದ್ದು ಸಂಶಯಗೆ ಎಡೆಮಾಡಿಕೊಟ್ಟಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮುಂಡಗೋಡ ವಲಯ ಅರಣ್ಯಧಿಕಾರಿ ವಾಗೀಶ ಮಾತನಾಡಿ, ತಾಲೂಕು ಆಸ್ಪತ್ರೆಯ ಆವರಣದಲ್ಲಿದ್ದ ಗಂಧದ ಮರಗಳನ್ನು ಕಡಿದಿರುವ ಬಗ್ಗೆ ಇಂದು ಬೆಳಿಗ್ಗೆ ಮಾಹಿತಿ ತಿಳಿಯಿತು. ತಕ್ಷಣವೇ ನಮ್ಮ ಸಿಬ್ಬಂದಿಗಳನ್ನು ಸ್ಥಳಕ್ಕೆ ಕಳುಹಿಸಿ ಮಾಹಿತಿ ಕಲೆಹಾಕಿದ್ದಾರೆ. ಅವು 12-15 ವರ್ಷದ ಗಂಧದ ಮರವಾಗಿತ್ತು ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ. ಅಕ್ಕ-ಪಕ್ಕದ ಸಿಸಿ ಕ್ಯಾಮೆರಾಗಳ ಮಾಹಿತಿಗಳನ್ನು ಕಲೆ ಹಾಕುತ್ತಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.