Congress: ಆರೋಗ್ಯ ಸಚಿವರ ಪಿಎ ವಿರುದ್ಧ ಕಾಂಗ್ರೆಸ್ ಶಾಸಕ ಅಸಮಾಧಾನ
Team Udayavani, Oct 7, 2023, 11:24 PM IST
ಬೆಂಗಳೂರು: ಸಚಿವರ ಕಾರ್ಯವೈಖರಿ ವಿರುದ್ಧ ಸಿಎಂಗೆ ಕೆಲವು ಶಾಸಕರು ಪತ್ರ ಬರೆದಿದ್ದ ಬೆನ್ನಲ್ಲೇ ಸಚಿವರ ಆಪ್ತ ಕಾರ್ಯದರ್ಶಿ ವಿರುದ್ಧ ಆಡಳಿತ ಪಕ್ಷದ ಮತ್ತೋರ್ವ ಶಾಸಕರು ಪತ್ರ ಸಮರ ಸಾರಿದ್ದು, ಸರಕಾರವನ್ನು ಮುಜುಗರಕ್ಕೀಡು ಮಾಡಿದೆ.
ಬೀಳಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೆ.ಟಿ. ಪಾಟೀಲ್ ಅವರು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಪತ್ರ ಬರೆದಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಆಪ್ತ ಕಾರ್ಯದರ್ಶಿ ಕೆ.ಎ. ಹಿದಾಯತುಲ್ಲಾ ವಿರುದ್ಧ ಕ್ರಮ ಕೈಗೊಳ್ಳಲು ಹಕ್ಕು ಬಾಧ್ಯತಾ ಸಮಿತಿಗೆ ಶಿಫಾರಸು ಮಾಡುವಂತೆ ಕೋರಿದ್ದಾರೆ.
ಪತ್ರದಲ್ಲಿ ಏನಿದೆ?
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಆಪ್ತ ಕಾರ್ಯದರ್ಶಿ ಕೆ.ಎ. ಹಿದಾಯತುಲ್ಲಾ ಅವರನ್ನು ವಿಕಾಸಸೌಧದಲ್ಲಿ ಭೇಟಿ ಮಾಡಿ ಕ್ಷೇತ್ರದ ಸಮಸ್ಯೆಯನ್ನು ಹೇಳಿಕೊಂಡಿದ್ದೆ. ಆದರೆ, ಅದಕ್ಕವರು ಸರಿಯಾಗಿ ಸ್ಪಂದಿಸಿರಲಿಲ್ಲ. ಜನಪ್ರತಿನಿಧಿಗಳ ಜತೆ ಅವರ ಸ್ಪಂದನೆ ಸರಿಯಾಗಿ ಇರುವುದಿಲ್ಲ. ಇಲಾಖೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಕೇಳಿದರೂ ಸರಿಯಾಗಿ ಮಾಹಿತಿ ಕೊಟ್ಟಿರುವುದಿಲ್ಲ. ಇವರ ವರ್ತನೆ ಧಿಮಾಕು ಅತಿ ಒರಟುತನದಿಂದ ಕೂಡಿರುತ್ತದೆ. ಈ ವಿಷಯದ ಬಗ್ಗೆ ಅವರಿಂದ ವಿಷಾದದ ವಿಚಾರಗಳಿಲ್ಲ. ಆದ್ದರಿಂದ ನನಗೆ ಬಹಳ ನೋವಾಗಿರುತ್ತದೆ. ಅದಕ್ಕಿಂತ ಹೆಚ್ಚಾಗಿ ನನ್ನ ಮತಕ್ಷೇತ್ರದ ಕೆಲಸಕ್ಕೆ ತೊಂದರೆ ಮಾಡಿರುವುದರಿಂದ ಅವರ ಮೇಲೆ ಹಕ್ಕುಬಾಧ್ಯತಾ ಸಮಿತಿಗೆ ಕ್ರಮ ಕೈಗೊಳ್ಳಲು ಶಿಫಾರಸು ಮಾಡುವಂತೆ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ವಕ್ಫ್ ವಿರುದ್ಧ ಹಿಂದೂಗಳು ಒಗ್ಗೂಡಲಿ: ಪ್ರಮೋದ್ ಮುತಾಲಿಕ್
By Election: ಒಂದುವರೆ ವರ್ಷದಿಂದ ಕಾಂಗ್ರೆಸ್ ಸರಕಾರ 1 ಕಿ.ಮೀ.ರಸ್ತೆ ಮಾಡಿಲ್ಲ: ಬಿಎಸ್‌ವೈ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Covid Scam: ಕೋವಿಡ್ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.