ಯುವ ಸಮೂಹಕ್ಕಾಗಲಿ ಪರಿಪೂರ್ಣತೆ ಪಾಠ: ಜೋಷಿ

ಜನತಾ ಶಿಕ್ಷಣ ಸಮಿತಿಯ ಆಡಳಿತ ಮಂಡಳಿಯ ಸುವರ್ಣ ಮಹೋತ್ಸವ

Team Udayavani, Oct 7, 2023, 11:33 PM IST

prahlad joshi

ಧಾರವಾಡ: ವಿಶ್ವಕ್ಕೆ ಬೇಕಾ ದಂತಹ ಶಿಕ್ಷಣ ನೀಡುವುದು ಇಂದಿನ ಅಗತ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದರು.

ನಗರದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ನೂತನ ಆಡಳಿತ ಮಂಡಳಿಯ ಸುವರ್ಣ ಮಹೋತ್ಸವ ಪ್ರಯುಕ್ತ ಶನಿವಾರ ಹಮ್ಮಿ ಕೊಂಡಿದ್ದ 50ರ ಅವಿಸ್ಮರಣೀಯ ಸಂಭ್ರಮದಲ್ಲಿ ಚೆನ್ನುಡಿ ಭಾಗ-6 ಅನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ವಿಶ್ವವು ಕಾಲಮಾನಕ್ಕೆ ತಕ್ಕಂತೆ ಬದಲಾಗುತ್ತಾ ಸಾಗಿದ್ದು, ಅದಕ್ಕೆ ತಕ್ಕಂತೆ ಕೌಶಲಾಧಾರಿತ ಶಿಕ್ಷಣವೂ ಕಲಿಕೆಯೂ ಮುಖ್ಯ. ಕೌಶಲ, ಪ್ರಮಾಣ ಹಾಗೂ ವೇಗ ಅತಿ ಮುಖ್ಯವಾಗಿದೆ. ಜಗತ್ತೂ ಇದನ್ನು ಬಯಸುತ್ತಿದೆ. ಇವುಗಳ ಜತೆಗೆ ಉತ್ತಮ ಸಂಸ್ಕಾರವೂ ಬೇಕಿದೆ. ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಈ ವಿಷಯಗಳ ಬಗ್ಗೆ ಗಮನಹರಿಸಬೇಕು ಎಂದರು.

ಸದ್ಯ ಚೀನವು ಪ್ರಪಂಚದ ಕಾರ್ಖಾನೆಯಾಗಿ ಹೆಸರಾಗಿದೆ. ಆದರೆ ಮುಂದಿನ 10 ವರ್ಷಗಳಲ್ಲಿ ಭಾರತ ಪ್ರಪಂಚದ ಕಾರ್ಖಾನೆಯಾಗಿ ಹೊರಹೊಮ್ಮುವುದು ನಿಶ್ಚಿತ ಎಂದು ಹೇಳಿದರು.

ಚೆನ್ನುಡಿ ಭಾಗ-7 ಅನ್ನು ಬಿಡುಗಡೆಗೊಳಿಸಿದ ರಾಜ್ಯ ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ಮಾತನಾಡಿ, ಇಂದಿನ ದಿನಮಾನದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಮಧ್ಯೆ ಸಂಪರ್ಕ, ಆಸಕ್ತಿ ಕಡಿಮೆಯಾಗುತ್ತಿದೆ. ನಮ್ಮ ಕಾಲದಲ್ಲಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಮಧ್ಯೆ ಅವಿನಾಭಾವ ಸಂಬಂಧ ಇರುತ್ತಿತ್ತು. ಇತ್ತೀಚೆಗೆ ಅದು ಕಾಣುತ್ತಿಲ್ಲ. ಶಿಕ್ಷಕರೊಂದಿಗೆ ಹೋಗಲಿ ಸಂಸ್ಥೆ ಜತೆಗೂ ಸಂಬಂಧ ಕಡಿತಗೊಳ್ಳುತ್ತಿದೆ. ಈ ಕೊರತೆ ನೀಗಿಸುವ ಕೆಲಸ ಜೆಎಸ್ಸೆಸ್‌ ಸಂಸ್ಥೆ ಕಳೆದ 50 ವರ್ಷಗಳಿಂದ ನೀಗಿಸುತ್ತಾ ಬಂದಿದೆ ಎಂದರು.

ಶ್ರೀ ಭಟ್ಟಾಕಲಂಕ ಭಟ್ಟಾರಕ ಪಟ್ಟಾ ಚಾರ್ಯವರ್ಯ ಸ್ವಾಮೀಜಿ ಮಾತ ನಾಡಿ, ಜೀವನದಲ್ಲಿ ಸಾಧನೆ ಹಾಗೂ ದೇಶ ಮುನ್ನಡೆಯಲು ಉತ್ತಮ ಶಿಕ್ಷಣ ಅತ್ಯಾವಶ್ಯಕ. ಅಂತಹ ಶಿಕ್ಷಣವನ್ನು ಜೆಎಸ್ಸೆಸ್‌ ನೀಡುತ್ತಿದೆ ಎಂದರು.

ಜೆಎಸ್ಸೆಸ್‌ ಕಾರ್ಯಾಧ್ಯಕ್ಷ ಡಾ| ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ಜೆಎಸ್ಸೆಸ್‌ ಕಾರ್ಯದರ್ಶಿ ಡಾ| ಅಜಿತ ಪ್ರಸಾದ ಹಾಗೂ ಸಂಸ್ಥೆ ನಿವೃತ್ತ ಶಿಕ್ಷಕ ಆರ್‌.ಕೆ. ಮುಳಗುಂದ ಅವರನ್ನು ಸಮ್ಮಾನಿಸಲಾಯಿತು. ಶಾಸಕ ಅರವಿಂದ ಬೆಲ್ಲದ ಮಾತನಾಡಿದರು. ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾತೋಶ್ರೀ ಹೇಮಾವತಿ ಹೆಗ್ಗಡೆ, ಶ್ರದ್ಧಾ ಹೆಗ್ಗಡೆ, ಎಸ್‌ಡಿಎಂಇ ಸೊಸೈಟಿ ಕಾರ್ಯದರ್ಶಿ ಜೀವಂಧರಕುಮಾರ, ಶಾಸಕ ಮಹೇಶ ಟೆಂಗಿನಕಾಯಿ, ಶಿವಲೀಲಾ ಕುಲಕರ್ಣಿ, ಕೇಶವ ದೇಸಾಯಿ, ಕಮಲನಯನ ಮೆಹತಾ, ಮಹಾವೀರ ಉಪಾಧ್ಯೆ ಮುಂತಾದವ ರಿದ್ದರು. ಡಾ| ಜಿನದತ್ತ ನಿರೂಪಿಸಿದರು. ಸೂರಜ್‌ ಜೈನ್‌ ವಂದಿಸಿದರು.

ಧಾರವಾಡವು ನನಗೆ ಈಗ ಎರಡನೇ ಧರ್ಮಸ್ಥಳವೇ ಆಗಿದೆ. ಮಂಜುನಾಥ ಸ್ವಾಮಿ ಅನುಗ್ರಹದಂತೆ ಧಾರವಾಡದಲ್ಲಿ ಸಮಾಜ ಮುಖೀ ಕಾರ್ಯಗಳ ಜತೆಗೆ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ಕೊಟ್ಟಿದ್ದರಿಂದ ಹೆಮ್ಮರದಂತಹ ಶಿಕ್ಷಣ ಸಂಸ್ಥೆಗಳು ಬೆಳೆದು ನಿಂತಿವೆ. ಇದು ಧಾರವಾಡಿಗರು ನೀಡಿರುವ ಪ್ರೀತಿ, ವಿಶ್ವಾಸದಿಂದಲೇ ಸಾಧ್ಯವಾಗಿದೆ. ಡಾ| ನ.ವಜ್ರಕುಮಾರ ಅವರ ಸ್ಥಾನವನ್ನು ಎಂದಿಗೂ ತುಂಬಲಾಗದು. ಅವರ ಮಾರ್ಗದರ್ಶನದಲ್ಲಿ ಡಾ| ಅಜಿತ ಪ್ರಸಾದ ಯಶಸ್ವಿಯಾಗಿ ಮುನ್ನಡೆಸಿಕೊಂಡು ಸಾಗುತ್ತಿರುವುದು ಖುಷಿ ತಂದಿದೆ.
-ಡಾ| ಡಿ.ವೀರೇಂದ್ರ ಹೆಗ್ಗಡೆ, ಜೆಎಸ್ಸೆಸ್‌ ಕಾರ್ಯಾಧ್ಯಕ್ಷರು

ಜೆಎಸ್ಸೆಸ್‌ ಸಂಸ್ಥೆಯು ಶಿಕ್ಷಣದ ಜತೆಗೆ ಸಂಸ್ಕಾರವನ್ನೂ ನೀಡುತ್ತಿದೆ. ಮುಂದಿನ 10 ವರ್ಷಗಳ ಅವಧಿಯಲ್ಲಿ ಈ ಸಂಸ್ಥೆಯಿಂದ ಕನಿಷ್ಠ 3 ವಿದ್ಯಾರ್ಥಿಗಳು ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವಂತೆ ಪ್ರಯತ್ನಿಸಬೇಕು. ಇದಕ್ಕೆ ಸಕಲ ಸೌಕರ್ಯ ನೀಡಲು ಕೇಂದ್ರ ಸರಕಾರ ಸಿದ್ಧವಿದೆ.
-ಪ್ರಹ್ಲಾದ ಜೋಷಿ, ಕೇಂದ್ರ ಸಚಿವ

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.