Online Gaming; ಜಿಎಸ್‌ಟಿ ಪೂರ್ವಾನ್ವಯವಿಲ್ಲ: ಕೇಂದ್ರ ಸ್ಪಷ್ಟನೆ
Team Udayavani, Oct 8, 2023, 12:45 AM IST
ಹೊಸದಿಲ್ಲಿ: ಆನ್‌ಲೈನ್ ಗೇಮಿಂಗ್ ಕಂಪೆನಿಗಳಿಗೆ ಪೂರ್ವಾನ್ವಯವಾಗುವಂತೆ ಶೇ.28ರಷ್ಟು ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಶನಿವಾರ ನಡೆದ 52ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಕಂಪೆನಿಗಳಿಗೆ ಪೂರ್ವಾನ್ವಯವಾಗುವಂತೆ ಜಿಎಸ್‌ಟಿ ವಿಧಿಸುವ ಕುರಿತು ಹಲವು ರಾಜ್ಯಗಳು ಧ್ವನಿ ಎತ್ತಿದವು.
ಈ ಬಗ್ಗೆ ಮಾತನಾಡಿದ ಕೇಂದ್ರ ಕಂದಾಯ ಸಚಿವಾಲಯದ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ, “ಅ.1ರಿಂದ ಆನ್‌ಲೈನ್ ಗೇಮಿಂಗ್‌ಗಳ ಮೇಲೆ ಶೇ.28ರಷ್ಟು ಜಿಎಸ್‌ಟಿ ವಿಧಿಸುವ ನಿಯಮ ಜಾರಿಗೆ ಬಂದಿದೆ. ಈ ನಿಯಮ ಪೂರ್ವಾನ್ವಯ ಆಗುವುದಿಲ್ಲ’ ಎಂದು ತಿಳಿಸಿದ್ದಾರೆ. 55,000 ಕೋಟಿ ರೂ. ತೆರಿಗೆ ಬಾಕಿ ಹಿನ್ನೆಲೆಯಲ್ಲಿ ಕಳೆದ 2 ವಾರಗಳಿಂದ ಆನ್‌ಲೈನ್ ಗೇಮಿಂಗ್ ಕಂಪೆನಿಗಳಿಗೆ ಇಲಾಖೆಯು ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.