Karwar; ಜಿಲ್ಲಾಧಿಕಾರಿ, ಶಾಸಕರ ಸಮ್ಮುಖದಲ್ಲಿ ಕಾರವಾರ ಹೆದ್ದಾರಿ ಸುರಂಗ ಮಾರ್ಗ ಪರಿಶೀಲನೆ


Team Udayavani, Oct 8, 2023, 6:37 PM IST

Inspection of Karwar Highway tunnel in the presence of Collector, MLA

ಕಾರವಾರ: ಕಾರವಾರ ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-66 ರ ಕಾರವಾರದಿಂದ ಬಿಣಗಾಕ್ಕೆ ಸಂಪರ್ಕಿಸುವ ಸುರಂಗ ಮಾರ್ಗ 1 ಮತ್ತು 2 ರಲ್ಲಿ ವಾಹನ, ಸಾರ್ವಜನಿಕ ಸಂಚಾರಕ್ಕೆ ಸುರಕ್ಷಿತವಾಗಿರುವ ಕುರಿತಂತೆ    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ರವಿವಾರ ಜಿಲ್ಲಾಧಿಕಾರಿ, ಶಾಸಕರ ಸಮಕ್ಷಮದಲ್ಲಿ ಪರಿಶೀಲನೆ ನಡೆಸಿದರು.

ಪುಣೆಯ ಸಿಒಇಪಿ ಟೆಕ್ನಿಕಲ್ ಯೂನಿವರ್ಸಿಟಿಯ ಭೂಗರ್ಭ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎಸ್.ಎ.ಮೆಶ್ರಾಂ ಹಾಗೂ ಅವರ ತಂಡ ಭಾನುವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಎನ್‌ಎಚ್‌ಎಐ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಜತೆ ಸಭೆ ನಡೆಸಿತು. ನಂತರ ಸುರಂಗ ಮಾರ್ಗದ ಹತ್ತಾರು ಸ್ಥಳಗಳಲ್ಲಿ ನೀರು ಸೋರುವಿಕೆ, ಕಲ್ಲು ಸಡಿಲಗೊಂಡಿರುವ ಭಾಗಗಳನ್ನ ಪರಿಶೀಲನೆ ನಡೆಸಿತು.

ಸ್ಥಳ ಪರಿಶೀಲನೆ ನಂತರ ಮಾತನಾಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಮೆಶ್ರಾಂ ಇಂದಿನ ಸ್ಥಳ ಭೇಟಿ ವೇಳೆ ತಾವು ಹಿಂದೆ ನೀಡಿದ ವರದಿ ಸರಿಯಾಗಿದೆ ಎಂದು ಹೇಳಿದ್ದಾರೆ. ಸೋರುವಿಕೆಯ ಹಾಗೂ ಇನ್ನೂ ಕೆಲವು ಸಮಸ್ಯೆಗಳನ್ನು ಅವರಿಗೆ ವಿವರಿಸಲಾಗಿದೆ. ಅವರು ಇ ಮೇಲ್ ಮೂಲಕ ಸ್ಥಳ ಪರಿಶೀಲನೆಯ ವರದಿ ಹಾಗೂ ಕೆಲವು ಸಲಹೆಗಳನ್ನು ನೀಡುವುದಾಗಿ ತಿಳಿಸಿದ್ದಾರೆ ಎಂದರು.

ಕಾರವಾರದಿಂದ ಭಟ್ಕಳವರೆಗೆ ಎನ್‌ಎಚ್‌ಎಐ ಖಾಸಗಿ ಕಂಪನಿ ಮೂಲಕ ಕೈಗೊಂಡ ಕಾಮಗಾರಿಯ ಬಗ್ಗೆ ಸಾಕಷ್ಟು ಆಕ್ಷೇಪಗಳು ಕೇಳಿಬರುತ್ತಿವೆ. ಈ ಬಗ್ಗೆ ಅಧಿಕಾರಿಗಳ ಜತೆ ಸ್ಥಳ ಪರಿಶೀಲನೆ ನಡೆಸಿ, ಅವುಗಳನ್ನು ಸರಿಪಡಿಸುವಂತೆ ಸೂಚನೆ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕ ಸತೀಶ ಸೈಲ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೊನ್ನಾವರ ಯೋಜನಾ ನಿರ್ದೇಶಕ ಎಚ್.ಹರಿಕೃಷ್ಣ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ದುರ್ಗಾದಾಸ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಆಶಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.