Ayodhya: ಸೋಲಾರ್ ಸಿಟಿಯಾಗಲಿದೆ ಅಯೋಧ್ಯೆ
Team Udayavani, Oct 8, 2023, 9:17 PM IST
ಲಕ್ನೋ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಜತೆಗೆ ನಗರದ ಅಭಿವೃದ್ಧಿಯು ಬಿರುಸಾಗಿದ್ದು, ರಾಮಲಲ್ಲಾನ ಪ್ರತಿಷ್ಠಾಪನೆಗೂ ಮುನ್ನವೇ ಅಯೋಧ್ಯೆಯು ಉತ್ತರಪ್ರದೇಶದ ಮೊದಲ ಸೋಲಾರ್ ಸಿಟಿ ಎಂಬ ಖ್ಯಾತಿಗೆ ಪಾತ್ರವಾಗಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ಕಾಮಗಾರಿಗಳನ್ನು ಆರಂಭಿಸಿರುವುದಾಗಿ ಸ್ಥಳೀಯಾಡಳಿತ ತಿಳಿಸಿದೆ.
ಉತ್ತರ ಪ್ರದೇಶದ ನವೀಕರಿಸಬಹುದಾದ ಇಂಧನಗಳ ಇಲಾಖೆ ಈ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಸಂಪೂರ್ಣ ಅಯೋಧ್ಯೆಯನ್ನು ಸೌರಶಕ್ತಿ ಚಾಲಿತ ನಗರವನ್ನಾಗಿಸಲು ಯೋಜಿಸಲಾಗಿದೆ. ಸರಯೂ ನದಿ ದಂಡೆಯಲ್ಲಿ ಸೋಲಾರ್ ಪಾರ್ಕ್ ನಿರ್ಮಾಣವಾಗುತ್ತಿದೆ. ಅದರ ಮೂಲಕ ಸೋಲಾರ್ ಬೀದಿ ದೀಪಗಳು, ಸೋಲಾರ್ ಚಾಲಿತ ಬೋಟ್‌ಗಳು, ಸಾರ್ವಜನಿಕ ಸಾರಿಗೆಯಲ್ಲೂ ಸೋಲಾರ್ ಅಳವಡಿಕೆ, ಸಾರ್ವಜನಿಕ ಸ್ಥಳಗಳಲ್ಲಿ ಸೋಲಾರ್ ಚಾಲಿತ ಚಾರ್ಜಿಂಗ್ ಪಾಯಿಂಟ್‌ಗಳ ನಿರ್ಮಾಣ, ಸರ್ಕಾರಿ ಕಚೇರಿಗಳಿಗೆ ಸೋಲಾರ್ ಚಾಲಿತ ವಿದ್ಯುತ್ ಸಂಪರ್ಕ ಕಲ್ಪಿಸಲು ಉದ್ದೇಶಿಸಲಾಗಿದ್ದು, ಈಗಾಗಲೇ ಬಹುತೇಕ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ.
ಸೋಲಾರ್ ಸಿಟಿ ನಿರ್ಮಾಣವು ಸಂಪೂರ್ಣ 5 ವರ್ಷಗಳ (2023 ರಿಂದ 2028) ಯೋಜನೆಯಾಗಿದ್ದು, ಪ್ರಸಕ್ತ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಮಂದಿರ ಉದ್ಘಾಟನೆ ಅಂದರೆ 2024ರ ಜನವರಿಗೂ ಮುಂಚೆ ಪೂರ್ಣಗೊಳಿಸಲು ಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ
Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ
Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.