UNO: ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ- ಭಾರತದ ಉಮೇದುವಾರಿಕೆಗೆ ಆನೆಬಲ


Team Udayavani, Oct 8, 2023, 11:55 PM IST

UNO

ವಿಶ್ವಸಂಸ್ಥೆ ಮತ್ತದರ ಅಂಗಸಂಸ್ಥೆಗಳು ಹಾಗೂ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳನ್ನು ಹಾಲಿ ಪರಿಸ್ಥಿತಿಗನುಗುಣವಾಗಿ ವಿಸ್ತರಿಸಬೇಕೆಂದು ಭಾರತ ಕೆಲವು ವರ್ಷಗಳಿಂದೀಚೆಗೆ ಜಾಗತಿಕ ಸಮುದಾಯವನ್ನು ಆಗ್ರಹಿಸುತ್ತಲೇ ಬಂದಿದೆ. ಇದೇ ವೇಳೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವವನ್ನು ಪಡೆಯಲು ಭಾರತ ಉತ್ಸುಕವಾಗಿದ್ದು ಇದಕ್ಕಾಗಿ ವಿಶ್ವದ ಪ್ರಬಲ ರಾಷ್ಟ್ರಗಳ ಬೆಂಬಲವನ್ನು ಯಾಚಿಸಿದೆ. ಭಾರತದ ಉಮೇದುವಾರಿಕೆಗೆ ಕಳೆದ ಕೆಲವು ತಿಂಗಳುಗಳಿಂದೀಚೆಗೆ ಜಾಗತಿಕ ಸಮುದಾಯದಿಂದ ಭಾರೀ ಬೆಂಬಲ ವ್ಯಕ್ತವಾಗತೊಡಗಿದ್ದು ಆನೆಬಲ ಲಭಿಸಿದಂತಾಗಿದೆ.

ಹೊಸದಿಲ್ಲಿಯಲ್ಲಿ ತಿಂಗಳ ಹಿಂದೆ ನಡೆದ ಜಿ 20 ರಾಷ್ಟ್ರಗಳ ಶೃಂಗಸಭೆಯಲ್ಲೂ ಭಾರತ ತನ್ನ ಈ ಬೇಡಿಕೆಯನ್ನು ಪುನರುಚ್ಚರಿಸುವ ಮೂಲಕ ವಿಶ್ವ ರಾಷ್ಟ್ರಗಳ ಗಮನ ಸೆಳೆದಿತ್ತು. ಈ ಸಂದರ್ಭದಲ್ಲಿ ಕೆಲವು ರಾಷ್ಟ್ರಗಳು ಭಾರತದ ಬೇಡಿಕೆಗೆ ಸಹಮತ ವ್ಯಕ್ತಪಡಿಸಿದ್ದೇ ಅಲ್ಲದೆ ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ವಿಶ್ವಸಂಸ್ಥೆಯಲ್ಲಿ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸ ಬೇಕೆಂದು ಆಗ್ರಹಿಸಿದ್ದವು.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ವತ್ವ ಹೊಂದುವ ಭಾರತದ ಮಹತ್ವಾಕಾಂಕ್ಷೆಗೆ ಆಸ್ಟ್ರೇಲಿಯಾ ತನ್ನ ಬೆಂಬಲವನ್ನು ಸಾರಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತ ಸದಸ್ಯ ರಾಷ್ಟ್ರಗಳ ಪಟ್ಟಿಗೆ ಭಾರತ, ಜಪಾನ್‌ನಂತಹ ದೇಶಗಳನ್ನು ಸೇರ್ಪಡೆಗೊಳಿಸುವ ಮೂಲಕ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸಲು ಸಾಧ್ಯ ಎಂದು ಆಸ್ಟ್ರೇಲಿಯಾದ ವಿದೇಶಾಂಗ ವ್ಯವಹಾರಗಳ ಸಚಿವ ಪೆನ್ನಿ ವಾಂಗ್‌ ನೀಡಿರುವ ಹೇಳಿಕೆ ಭಾರತವನ್ನು ಭದ್ರತಾ ಮಂಡಳಿಯ ಇನ್ನಷ್ಟು ಸನಿಹಕ್ಕೆ ತಂದಿದೆ.

ಜಿ 20 ಶೃಂಗದ ವೇಳೆ ಭಾರತಕ್ಕೆ ಭೇಟಿ ನೀಡಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರು ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವ ನೀಡುವ ಪ್ರಸ್ತಾವಕ್ಕೆ ತನ್ನ ಬೆಂಬಲವನ್ನು ಪುನರುಚ್ಚರಿಸಿದ್ದರು. ಅಲ್ಲದೆ ಟರ್ಕಿ ಅಧ್ಯಕ್ಷ ರಿಸೆಪ್‌ ತಯಿಪ್‌ ಎಡ್ರೊಗೆನ್‌ ಅವರು ಭದ್ರತಾ ಮಂಡಳಿಯಲ್ಲಿ ಭಾರತವನ್ನು ಖಾಯಂ ಸದಸ್ಯ ರಾಷ್ಟ್ರವಾಗಿ ಕಾಣಲು ಟರ್ಕಿ ಹೆಮ್ಮೆ ಪಡುತ್ತದೆ ಎಂದಿದ್ದರು. ಇದೇ ವೇಳೆ ಪೋರ್ಚುಗೀಸ್‌ ಅಧ್ಯಕ್ಷ ಮಾರ್ಸೆಲೊ ರೆಬೆಲೋ ಡೆ ಸೌಸ ಅವರು ಭಾರತ ಮತ್ತು ಬ್ರೆಜಿಲ್‌ಗೆ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ನೀಡಬೇಕೆಂದು ಆಗ್ರಹಿಸಿದ್ದರು.
ಸದ್ಯ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಅಮೆರಿಕ, ಬ್ರಿಟನ್‌, ಚೀನ, ಫ್ರಾನ್ಸ್‌ ಮತ್ತು ಆಸ್ಟ್ರೇಲಿಯಾ ಖಾಯಂ ಸದಸ್ಯ ರಾಷ್ಟ್ರಗಳಾಗಿದ್ದು ವಿಟೋ ಅಧಿಕಾರವನ್ನು ಹೊಂದಿವೆ. ಭಾರತಕ್ಕೆ ಖಾಯಂ ಸದಸ್ಯತ್ವ ನೀಡಲು ಜಾಗತಿಕ ಸಮುದಾಯದಿಂದ ಭಾರೀ ಬೆಂಬಲ ವ್ಯಕ್ತವಾಗಿದೆಯಾದರೂ ಚೀನ ತೀವ್ರ ವಿರೋಧವನ್ನು ವ್ಯಕ್ತಪಡಿಸುತ್ತ ಬಂದಿದೆ. ನಿರಂತರವಾಗಿ ಒಂದಲ್ಲ ಒಂದು ವಿಷಯವನ್ನು ಮುಂದಿಟ್ಟು ಭಾರತದ ವಿರುದ್ಧ ಕತ್ತಿ ಮಸೆಯುತ್ತಲೇ ಇರುವ ಚೀನ ಗಡಿಯಲ್ಲಿ ಸುಖಾಸುಮ್ಮನೆ ಭಾರತವನ್ನು ಕೆಣಕುವ ಕಾರ್ಯದಲ್ಲಿ ನಿರತವಾಗಿದೆ. ಆದರೆ ಚೀನದ ಈ ಷಡ್ಯಂತ್ರಗಳಿಗೆ ಭಾರತ ಸೂಕ್ತ ತಿರುಗೇಟು ನೀಡುತ್ತಲೇ ಬಂದಿದೆ.

ಈಗ ಆಸ್ಟ್ರೇಲಿಯಾ ಕೂಡ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವದ ವಿಷಯದಲ್ಲಿ ಭಾರತದ ಪರ ಬ್ಯಾಟ್‌ ಬೀಸಿರುವುದು ಈ ದಿಸೆಯಲ್ಲಿ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ. ಇಂಡೋ-ಪೆಸಿಫಿಕ್‌ ವಲಯದಲ್ಲಿ ಚೀನದ ವಿಸ್ತರಣಾವಾದದ ಬೆದರಿಕೆಯನ್ನು ಹಿಮ್ಮೆಟ್ಟಿಸಲು ಆಸ್ಟ್ರೇಲಿಯಾ ಮತ್ತು ಅಮೆರಿಕ ಜತೆಗೂಡಿ ರಚಿಸಿರುವ ರಕ್ಷಣ ಮೈತ್ರಿಕೂಟ “ಕ್ವಾಡ್‌’ನಲ್ಲಿ ಭಾರತ ಮತ್ತು ಜಪಾನ್‌ ಸದಸ್ಯ ರಾಷ್ಟ್ರಗಳಾಗಿರುವುದು ಇಲ್ಲಿ ಗಮನಾರ್ಹ.

ಇವೆಲ್ಲದರ ಮಧ್ಯೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಅವರು ಕೂಡ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯ ಸ್ಥಾನ ನೀಡಬೇಕು ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ. ಪುತಿನ್‌ ಅವರ ಈ ಹೇಳಿಕೆಯಿಂದ ಭಾರತದ ಉಮೇದುವಾರಿಕೆಗೆ ಆನೆಬಲ ಲಭಿಸಿದಂತಾಗಿದೆ.

ಕೊರೊನೋತ್ತರದಲ್ಲಿ ವಿಶ್ವದ ಬಹುತೇಕ ರಾಷ್ಟ್ರಗಳು ಆರ್ಥಿಕವಾಗಿ ಸದೃಢಗೊಳ್ಳಲು ಹರಸಾಹಸ ಪಡುತ್ತಿದ್ದರೆ ಭಾರತ ಮಾತ್ರ ಜಾಗತಿಕ ಏಳುಬೀಳುಗಳ ಹೊರತಾಗಿಯೂ ಆರ್ಥಿಕತೆಯಲ್ಲಿ ಅತ್ಯುತ್ತಮ ಪ್ರಗತಿಯನ್ನು ಸಾಧಿಸುತ್ತ ಮುನ್ನಡೆದಿದೆ. ಇನ್ನು ಅಭಿವೃದ್ಧಿ ವಿಚಾರದಲ್ಲಿಯೂ ಭಾರತ ದಾಪುಗಾಲು ಇರಿಸಿದ್ದು ಎಲ್ಲ ಕ್ಷೇತ್ರಗಳಲ್ಲೂ ಸ್ವಾವಲಂಬನೆಯ ಗುರಿಯೊಂದಿಗೆ ಮುನ್ನುಗ್ಗುತ್ತಿದೆ. ಇದೇ ವೇಳೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಭಾರತ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದು ಯಾವುದೇ ಸಂದಿಗ್ಧತೆ ಎದುರಾದಾಗಲೂ ಜಾಗತಿಕ ಸಮುದಾಯ ಭಾರತದ ನಿಲುವಿನತ್ತ ದೃಷ್ಟಿ ಹರಿಸಲಾರಂಭಿಸಿದೆ. ದೇಶದ ಸಾರ್ವಭೌಮತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ದೇಶ ಮತ್ತು ನಾಗರಿಕರ ಹಿತದೃಷ್ಟಿಗೆ ಪೂರಕವಾದ ಹೆಜ್ಜೆಗಳನ್ನಿರಿಸುವ ಮೂಲಕ ರಾಜತಾಂತ್ರಿಕ ನೆಲೆಯಲ್ಲಿಯೂ ವಿದೇಶಗಳೊಂದಿಗೆ ಉತ್ತಮ ಬಾಂಧವ್ಯವನ್ನು ಕಾಯ್ದುಕೊಳ್ಳುವಲ್ಲಿ ಸಫ‌ಲವಾಗಿದೆ. ಈ ಎಲ್ಲ ಕಾರಣಗಳಿಂದಾಗಿ ಭಾರತ ಇಂದು ಜಾಗತಿಕ ಮಟ್ಟದಲ್ಲಿ ಪ್ರಬಲ ಶಕ್ತಿಯಾಗಿ ಹೊರಹೊಮ್ಮಲು ಸಾಧ್ಯವಾಗಿದೆ. ಹೀಗಾಗಿಯೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಹಿತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಗಳಲ್ಲಿ ಭಾರತಕ್ಕೆ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹಗಳು ಕೇವಲ ಬಡ ಮತ್ತು ಅಭಿವೃದ್ಧಿಶೀಲ ದೇಶಗಳಿಂದ ಮಾತ್ರವಲ್ಲದೆ ಅಭಿವೃದ್ಧಿ ಹೊಂದಿದ ಬಲಾಡ್ಯ ದೇಶಗಳಿಂದಲೂ ಕೇಳಿಬರತೊಡಗಿದೆ.

ಇಡೀ ಜಾಗತಿಕ ಸಮುದಾಯದಿಂದ ವ್ಯಕ್ತವಾಗುತ್ತಿರುವ ಬೆಂಬಲವನ್ನು ಗಮನಿಸಿದಾಗ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ಹೊಂದುವ ಭಾರತದ ಬಹುವರ್ಷಗಳ ಕನಸು ನನಸಾಗುವ ಕಾಲ ಸನ್ನಿಹಿತವಾದಂತೆ ಕಂಡುಬರುತ್ತಿದೆ.

 ಹರೀಶ್‌. ಕೆ

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.