Assembly Election; ಪಂಚರಾಜ್ಯ ಚುನಾವಣೆಗೆ ಮುಹೂರ್ತ ನಿಗದಿ: ನ.7 ರಿಂದ ಡಿ.3 ವರೆಗೆ ಮತಹಬ್ಬ
Team Udayavani, Oct 9, 2023, 12:32 PM IST
ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಪೂರ್ವಭಾಯಿಯಾಗಿ ದೇಶದ ಕುತೂಹಲ ಕೆರಳಿಸಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಸೋಮವಾರ ಭಾರತೀಯ ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.
ಮಿಜೋರಾಂ, ಛತ್ತೀಸ್ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಮಿಜೋರಾಂ ವಿಧಾನಸಭೆ ಚುನಾವಣೆಯು ನವೆಂಬರ್ 7ರಂದು ನಡೆಯಲಿದೆ. ಛತ್ತೀಸ್ ಗಡದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನ.7 ಮತ್ತು 17ರಂದು ಮತದಾನ ನಡೆಯಲಿದೆ. ಮಧ್ಯ ಪ್ರದೇಶದಲ್ಲಿ ನ.17, ರಾಜಸ್ಥಾನದಲ್ಲಿ ನ.23ರಂದು ಮತ್ತು ತೆಲಂಗಾಣದಲ್ಲಿ ನ. 30ರಂದು ಮತದಾನ ನಡೆಯಲಿದೆ.
ಎಲ್ಲಾ ಐದು ರಾಜ್ಯಗಳಲ್ಲಿ ಮತ ಎಣಿಕೆಯು ಡಿಸೆಂಬರ್ 3ರಂದು ನಡೆಯಲಿದೆ.
ಮುಂಬರುವ ವಿಧಾನಸಭಾ ಚುನಾವಣೆಯು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ), ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷಗಳು ಸೇರಿದಂತೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳಿಗೆ ಪ್ರಮುಖ ಪರೀಕ್ಷೆಯಾಗಿದೆ.
ಐದು ರಾಜ್ಯಗಳ ಪೈಕಿ ಎರಡು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. (ರಾಜಸ್ಥಾನ ಮತ್ತು ಛತ್ತೀಸ್ಗಢ) ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತ ಪಕ್ಷವಾಗಿದೆ. ತೆಲಂಗಾಣದಲ್ಲಿ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ ಅಧಿಕಾರದಲ್ಲಿದೆ ಮತ್ತು ಮಿಜೋರಾಂನಲ್ಲಿ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್ಎಫ್) ಅಧಿಕಾರದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.