Car crash: ಗಾಯಾಳು ವಿದ್ಯಾರ್ಥಿ ಸಾವು ಮೃತದೇಹ ರಸ್ತೆಯಲ್ಲಿಟ್ಟು ಪ್ರತಿಭಟನೆ
Team Udayavani, Oct 10, 2023, 1:13 AM IST
ಕಾಸರಗೋಡು: ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಇನೋವಾ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉದ್ಯಾವರ ಮಾಡ ಕ್ಷೇತ್ರ ಸಮೀಪದ ನಿವಾಸಿ ರಘುನಾಥ ಆಳ್ವ ಅವರ ಪುತ್ರ, ಮಂಗಳೂರು ಕಾಲೇಜೊಂದರ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸುಮಂತ್(17) ಅ.8 ರಂದು ಸಾವಿಗೀಡಾದರು. ಅತೀ ವೇಗದಲ್ಲಿ ಕಾರು ಢಿಕ್ಕಿ ಹೊಡೆದ ಪರಿಣಾಮವಾಗಿ ತಲೆಗೆ ಗಂಭೀರ ಗಾಯವಾಗಿತ್ತು. ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತಾದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
ಕಾರು ಢಿಕ್ಕಿ ಹೊಡೆಯು ಅವೈಜ್ಞಾನಿಕ ರೀತಿಯಲ್ಲಿ ನಡೆಯುತ್ತಿರುವ ಷಟ³ಥ ಕಾಮಗಾರಿ ಕಾರಣ ಎಂದು ಆರೋಪಿಸಿದ ಸ್ಥಳೀಯರು ಯುಎಲ್‌ಸಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆದಿತ್ಯವಾರ ಮೃತ ದೇಹವನ್ನು ರಸ್ತೆಯಲ್ಲಿರಿಸಿ ಪ್ರತಿಭಟಿಸಿದರು. ಕಾಮಗಾರಿ ಗುತ್ತಿಗೆದಾರರಾಗಿರುವ ಯುಎಲ್‌ಸಿಸಿ ಪ್ರತಿಕ್ರಿಯಿಸದಿದ್ದುದರಿಂದ ಪ್ರತಿಭಟನೆಕಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲಾ ಜಂಕ್ಷನ್‌ಗಳಲ್ಲೂ ಫುಟ್ ಬ್ರಿಡ್ಜ್ ನಿರ್ಮಿಸಬೇಕು, ಪಾದಚಾರಿಗಳಿಗೆ ರಸ್ತೆ ದಾಟಲು ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.